• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪಂಚಮಸಾಲಿ ಸಮುದಾಯ 2 ಎ ಸೇರಿಸುವ ಕುರಿತು ನಿಷ್ಪಕ್ಷಪಾತ ವರದಿ ನೀಡುವೆ : ಜಯಪ್ರಕಾಶ್ ಹೆಗ್ಡೆ ಭರವಸೆ

ಪ್ರತಿಧ್ವನಿ by ಪ್ರತಿಧ್ವನಿ
February 15, 2022
in ಕರ್ನಾಟಕ
0
ಪಂಚಮಸಾಲಿ ಸಮುದಾಯ 2 ಎ ಸೇರಿಸುವ ಕುರಿತು ನಿಷ್ಪಕ್ಷಪಾತ ವರದಿ ನೀಡುವೆ : ಜಯಪ್ರಕಾಶ್ ಹೆಗ್ಡೆ ಭರವಸೆ
Share on WhatsAppShare on FacebookShare on Telegram

ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2 ಎಗೆ ಸೇರಿಸಬೇಕಾ? ಸೇರಿಸಬಾರದೇ? ಎಂಬುದರ ವಿಚಾರವಾಗಿ ಈಗಾಗಲೇ ಪರ – ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಮಗ್ರ ಅಧ್ಯಯನ ನಡೆಸಿ ನಿಷ್ಪಕ್ಷಪಾತ ವರದಿಯನ್ನು ಸಲ್ಲಿಸಲಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಗೆ ಭರವಸೆ ನೀಡಿದ್ದಾರೆ.

ADVERTISEMENT

ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2 ಎ ಗೆ ಸೇರಿಸಬಾರದು. ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಕರ್ನಾಟಕದ 70 ಜಾತಿ – ಉಪಜಾತಿಗಳನ್ನು ಸೇರ್ಪಡೆಗೊಳಿಸಬೇಕು ಮತ್ತು ಸ್ಥಳೀಯ ಚುನಾವಣೆಗಳಲ್ಲಿ ಅತಿ ಹಿಂದುಳಿದ ವರ್ಗಗಳಿಗೂ ಮೀಸಲಾತಿ ನೀಡಬೇಕು ಹಾಗೂ ಹೆಚ್. ಕಾಂತರಾಜ ವರದಿಯನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ, ಕರ್ನಾಟಕ ರಾಜ್ಯ ಅತೀ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ಮನವಿ ಸಲ್ಲಿಸಲಾಯ್ತು.

ಮನವಿ ಸ್ವೀಕರಿಸಿ ಮಾತನಾಡಿದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಗೆ ಅವರು, ಪ್ರವರ್ಗ 2 ಎಗೆ ಪಂಚಮಸಾಲಿ ಸಮುದಾಯವನ್ನು ಸೇರಿಸುವ ವರದಿಯನ್ನು ಈಗಾಗಲೇ ತಿರಸ್ಕರಿಸಲಾಗಿದೆ. ಈ ಬಗ್ಗೆ ಮತ್ತೆ ಪರ ವಿರೋಧ ಮಾತುಗಳು ಕೇಳಿಬರುತ್ತಿವೆ. ಎರಡು ಬಣಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ಪಾರದರ್ಶಕ ವರದಿಯನ್ನು ನೀಡುವುದಾಗಿ ಹೇಳಿದರು.

ಇನ್ನು ಕರ್ನಾಟಕ ರಾಜ್ಯ ಅತೀ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಎಮ್. ಸಿ. ವೇಣುಗೋಪಾಲ್ ಮಾತನಾಡಿ, ಹಿಂದುಳಿದ ವರ್ಗಗಳ ಕೇಂದ್ರ ಸರ್ಕಾರದ ಮೀಸಲಾತಿ ಪಟ್ಟಿಗೆ ಕರ್ನಾಟಕದ 70 ಜಾತಿ- ಉಪಜಾತಿಗಳನ್ನು ಸೇರಿಸಬೇಕು ಮತ್ತು ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸಬಾರದು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿದ್ದೇವೆ. ಆಯೋಗದ ಅಧ್ಯಕ್ಷರು ನಮ್ಮ ಮನವಿಗೆ ಸ್ಪಂದಿಸಿದ್ದಾರೆ. ಅಲ್ಲದೆ ಅತೀ ಹಿಂದುಳಿದ ವರ್ಗಗಳಿಗೆ ಸೂಕ್ತ ನ್ಯಾಯ ನೀಡುವ ಭರವಸೆಯನ್ನು ನೀಡಿದ್ದಾರೆ ಎಂದರು.

ಪಂಚಮಸಾಲಿ ಸಮುದಾಯವು ವೀರಶೈವ-ಲಿಂಗಾಯಿತದ ಉಪಜಾತಿಯಾಗಿರುವುದರಿಂದ ಅಂತಹ ಉಪಜಾತಿಯನ್ನು ಮುಖ್ಯಜಾತಿಯಿಂದ ಬೇರ್ಪಡಿಸಿ ಬೇರೊಂದು ಪ್ರವರ್ಗಕ್ಕೆ ವರ್ಗಾಯಿಸುವುದು ಸರ್ವೋಚ್ಛ ನ್ಯಾಯಲಯ ಇಂದ್ರಾ ಸಹಾನಿ ಪ್ರಕರಣದಲ್ಲಿ ನೀಡಿರುವ ತೀರ್ಪಿಗೆ ವಿರುದ್ಧವಾಗಿರುತ್ತದೆ ಎಂದರು.

ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸುವುದು ಸರಿಯಲ್ಲ. ಇದ್ರಿಂದ ಅತೀ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತದೆ. ಒಂದು ವೇಳೆ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸಿದ್ರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಮ್. ಸಿ. ವೇಣುಗೋಪಾಲ್ ಹೇಳಿದರು.

1992ರ ಮಂಡಲ್ ಆಯೋಗದ ವರದಿಯಂತೆ ಕರ್ನಾಟಕದ 323 ಜಾತಿ-ಉಪಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಲಾಗಿತ್ತು. ಆನಂತರದಲ್ಲಿ 283 ಜಾತಿ-ಉಪಜಾತಿಗಳನ್ನು ಮೀಸಲಾತಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಲಾಯಿತು. ಆದರೂ ಸುಮಾರು 70 ಜಾತಿ ಉಪಜಾತಿಗಳು ರಾಜ್ಯ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿದ್ದರೂ, ಕೇಂದ್ರದ ಪಟ್ಟಿಯಲ್ಲಿ ಸೇರಿಸಲಾಗಿಲ್ಲ. ಹೀಗಾಗಿ. ಈ ವರ್ಗಗಳ ಸವಾರ್ಂಗೀಣ ಅಭಿವೃದ್ಧಿಗೆ ಅನುಕೂಲವಾಗಲು, ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಇವುಗಳನ್ನು ಸೇರಿಸಬೇಕು ಎಮ್. ಸಿ. ವೇಣುಗೋಪಾಲ್ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರು ಹಾಗೂ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಂ. ನಾಗರಾಜು, ಖಜಾಂಚಿ ಎಲ್.ಎ ಮಂಜುನಾಥ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Tags: 1992ರ ಮಂಡಲ್ ಆಯೋಗದ ವರದಿjayaprakash hedgemandal varadipanchamasali lingayatVeerashaiva lingayatಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಜಯಪ್ರಕಾಶ್ ಹೆಗ್ಡೆಪಂಚಮಸಾಲಿ ಸಮುದಾಯವೀರಶೈವ-ಲಿಂಗಾಯಿತ
Previous Post

ಶಿವಾನಂದ ಪಾಟೀಲ ಆಗಮನದಿಂದ ಸಿಂಧಗಿ ಕ್ಷೇತ್ರಕ್ಕೆ ಮತ್ತಷ್ಟು ಬಲ : ಕುಮಾರಸ್ವಾಮಿ

Next Post

ಬಜರಂಗದಳದ ಆಕ್ಷೇಪಣೆಗೆ ಮಣಿದು ಹಿಜಾಬ್, ಬುರ್ಖಾ ಧರಿಸಿದಂತೆ ಆದೇಶ ಹೊರಡಿಸಿದ ಪ್ರಾಂಶುಪಾಲರು!

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಬಜರಂಗದಳದ ಆಕ್ಷೇಪಣೆಗೆ ಮಣಿದು ಹಿಜಾಬ್, ಬುರ್ಖಾ ಧರಿಸಿದಂತೆ ಆದೇಶ ಹೊರಡಿಸಿದ ಪ್ರಾಂಶುಪಾಲರು!

ಬಜರಂಗದಳದ ಆಕ್ಷೇಪಣೆಗೆ ಮಣಿದು ಹಿಜಾಬ್, ಬುರ್ಖಾ ಧರಿಸಿದಂತೆ ಆದೇಶ ಹೊರಡಿಸಿದ ಪ್ರಾಂಶುಪಾಲರು!

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada