• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗುರುವಾರದೊಳಗೆ ಜೆಡಿಎಸ್ 2ನೇ ಪಟ್ಟಿ; ಪಟ್ಟಿಯಲ್ಲಿ ಹಾಸನ ಅಭ್ಯರ್ಥಿ ಹೆಸರು ಇರುತ್ತದೆ ; ಹೆಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
April 4, 2023
in Top Story, ಇದೀಗ, ಕರ್ನಾಟಕ
0
ಗುರುವಾರದೊಳಗೆ ಜೆಡಿಎಸ್ 2ನೇ ಪಟ್ಟಿ; ಪಟ್ಟಿಯಲ್ಲಿ ಹಾಸನ ಅಭ್ಯರ್ಥಿ ಹೆಸರು ಇರುತ್ತದೆ ; ಹೆಚ್.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಬೆಂಗಳೂರು: ಏ.೦೪: ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನಾಳೆ ಅಥವಾ ಗುರುವಾರ ಪಟ್ಟಿ ಬಿಡುಗಡೆ ಆಗಬಹುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಇಂದು ಮಂಗಳವಾರ ಆಗಿರುವುದರಿಂದ ಪಟ್ಟಿ ಬಿಡುಗಡೆ ಆಗಿಲ್ಲ. ದೇವೆಗೌಡರು ನಾಳೆ ಸಂಜೆ ದೆಹಲಿಯಿಂದ ವಾಪಸ್ ಆಗುತ್ತಾರೆ. ನಂತರ ಪಟ್ಟಿ ಹೊರಬರಲಿದೆ ಎಂದರು.

ADVERTISEMENT

ನನಗಿಂತ ನಿಮಗೆ ಹಾಸನ ಟಿಕೆಟ್ ಘೋಷಣೆ ಬಗ್ಗೆ ಕುತೂಹಲವಿದೆ ಎಂದು ಮಾಧ್ಯಮಗಳಿಗೆ ಹೇಳಿದ ಅವರು, ಹಾಸನವನ್ನು ಸೇರಿಸಿ ಪಟ್ಟಿ ಬಿಡುಗಡೆ ಮಾಡುತ್ತೇವೆ. ಅದನ್ನು ಬಿಟ್ಟು ಮಾಡಿದರೆ ಇನ್ನೊಂದು ಕಥೆ ಹುಟ್ಟಿಕೊಳ್ಳುತ್ತದೆ. ಆದ್ದರಿಂದ ಆ ಪಟ್ಟಿಯಲ್ಲಿ ಹಾಸನದ್ದು ಒಳಗೊಂಡಂತೆ ತೀರ್ಮಾನ ಮಾಡುತ್ತೇವೆ ಎಂದು ಅವರು ತಿಳಿಸಿದರು.

ಮೊದಲ ಪಟ್ಟಿ ಬಿಡುಗಡೆಯಾದಗಲೂ ಯಾವುದೇ ಸಮಸ್ಯೆ ಇರಲಿಲ್ಲ. ಎರಡನೇ ಪಟ್ಟಿ ವೇಳೆ ಹಾಸನದ್ದು ಹೆಚ್ಚು ಪ್ರಚಾರವಾಗಿದೆ. ಹಾಸನ ವಿಚಾರದಿಂದ ಜನತಾದಳಕ್ಕೂ ಹೆಚ್ಚು ಪ್ರಚಾರವಾಗಿದೆ. ಇದರಿದ ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ 2-3 % ಮತ ಪ್ರಮಾಣ ಹೆಚ್ಚಾಗಲಿದೆ. ನಮ್ಮ ಗುರಿ ಮುಟ್ಟೋದಕ್ಕೆ ನಾವು ಯಾವುದೇ ದುಡುಕಿನ ತೀರ್ಮಾನ ಮಾಡಲ್ಲ. ಕಾರ್ಯಕರ್ತರ ಅಪೇಕ್ಷೆ, ಗೆಲ್ಲುವ ಮಾನದಂಡದಲ್ಲೇ ಟಿಕೆಟ್ ಕೊಡುತ್ತೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. ಕಾಂಗ್ರೆಸ್ ಪಟ್ಟಿ ರಿಲೀಸ್ ಆಗದ ಹಿನ್ನೆಲೆ ಜೆಡಿಎಸ್ ಪಟ್ಟಿ ವಿಳಂಬ ಆಗುತ್ತಿದೆಯಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಅದರ ಬಗ್ಗೆ ನಾನು ಚಿಂತೆ ಮಾಡಿಲ್ಲ. ನಾವು ನಮ್ಮದೇ ರೀತಿಯಲ್ಲಿ ಅಭ್ಯರ್ಥಿಗಳನ್ನು ತೀರ್ಮಾನ ಮಾಡುತ್ತೇವೆ ಎಂದರು.

ಕಾಂಗ್ರೆಸ್‌ ನಲ್ಲಿ ಯಾರು ಸಿಎಂ ಆಗ್ತಾರೆ ಸಿಎಂ ಹೇಳಿಕೆ ಬಗ್ಗೆ ಪ್ರತಿಕ್ರಿಯೆ :

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಂದರ್ಶನ ಒಂದರಲ್ಲಿ ನೀಡಿರುವ ಹೇಳಿಕೆ ಕುರಿತು ಮಾತನಾಡಿದ ಹೆಚ್.ಡಿಕೆ, ಅದು ಅವರ ಪಕ್ಷಕ್ಕೆ ಸೇರಿದ ವಿಚಾರ. ಅವರ ಆಂತರಿಕ ವಿಚಾರಗಳ ಬಗ್ಗೆ ನಾನೇಕೆ ಪ್ರತಿಕ್ರಿಯೆ ನೀಡಲಿ? ಚುನಾವಣೆಯಲ್ಲಿ ಜನ ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಕೊಡ್ತಾರೋ ಅದು ಮುಖ್ಯ. ಎಷ್ಟು ಸ್ಥಾನ ಬಂತು ಅನ್ನುವುದರ ಮೇಲೆ ಎಲ್ಲಾ ನಿರ್ಧಾರ ಆಗುತ್ತದೆ. ಮಗು ಹುಟ್ಟೋಕು ಮುನ್ನ ಕುಲಾವಿ ಹೊಲಿಸಿದರೆ ಆಗುತ್ತಾ? ಮುಗು ಹುಟ್ಟಿದರೆ ಕುಲಾವಿ ಹೊಲಿಸಬಹುದು, ಅದಕ್ಕೂ ಮುನ್ನ ಕುಲಾವಿ ಹಾಕ್ಕೋತ್ತೀನಿ ಅಂದ್ರೆ ಯಾಕೆ ಬೇಡ ಅನ್ನಲಿ.

ಸಚಿವ ಸುಧಾಕರ್’ಗೆ ಟಾಂಗ್:

ಜೆಡಿಎಸ್ ಕುರಿತು ಅನಗತ್ಯ ಹೇಳಿಕೆ ನೀಡಿರುವ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ವಿಚಾರದ ಬಗ್ಗೆ ಕಿಡಿಕಾರಿದ ಮಾಜಿ ಮುಖ್ಯಮಂತ್ರಿ, ಹೆಚ್ಚು ಕಡಿಮೆ ಆಗಿ ಅವರು ರಾಜಿನಾಮೆ ಕೊಡಬೇಕಾದ ಸಂದರ್ಭ ಬಂದುಬಿಟ್ಟಾತು. ಆಮೇಲೆ ಶಾಸಕನಾಗೋಕೆ ಆಗೋಕಾಗಲ್ವಲ್ಲಾ? ಅವರು ಮಾಡಿದ ಅನಾಚಾರ ಜನರಿಗೆ ಗೊತ್ತಿದೆ. ರೆಫ್ರಿ ಜರೇಟರ್, ಸ್ಟವ್ ಎಲ್ಲಾ ಹಂಚುತ್ತಿದ್ದಾರೆ. ಇಷ್ಟೆಲ್ಲಾ ಕೊಡ್ತಾ ಇದ್ದಾರೆ ಅಂದರೆ, ಇವರು ಇನ್ನೆಷ್ಟು ಶ್ರೀಮಂತರು ಅಂತ ಜನರು ಮನೇಲಿ ಕೂರಿಸಿಬಿಟ್ಟರೆ ಕಷ್ಟ. ಎಚ್ಚರಿಕೆಯಿಂದ ಇದ್ದರೆ ಉತ್ತಮ ಎಂದು ಟಾಂಗ್ ಕೊಟ್ಟರು.

Tags: HdKumaraswamyJDSjdskarntakaKarnatakaKarnataka GovernmentKarnataka Politicslatestnewslatetsnewsnewsupdateಎಚ್ ಡಿ ಕುಮಾರಸ್ವಾಮಿ
Previous Post

ಸಿಲಿಕಾನ್‌ ಸಿಟಿಯಲ್ಲಿ ಮಳೆರಾಯನ ಅಬ್ಬರ.. ಜನ ತತ್ತರ..!

Next Post

ನಟ ಸುದೀಪ್‌ ಬಿಜೆಪಿ ಸೇರ್ಪಡೆ?

Related Posts

ಪವಿತ್ರಾ ಗೌಡಗೆ ಜೈಲಿನಲ್ಲಿ ರಾಜಾತಿಥ್ಯ? ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದೇನು?
Top Story

ಪವಿತ್ರಾ ಗೌಡಗೆ ಜೈಲಿನಲ್ಲಿ ರಾಜಾತಿಥ್ಯ? ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದೇನು?

by ಪ್ರತಿಧ್ವನಿ
August 18, 2026
0

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಜೈಲಿಗೆ ಭೇಟಿ ನೀಡಿ ಮಹಿಳಾ ಬ್ಯಾರಕ್‌ಗಳು, ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳು, ಆಹಾರದ ಗುಣಮಟ್ಟ ಹಾಗೂ ಮಕ್ಕಳ ಪರಿಸ್ಥಿತಿಯನ್ನು ಪರಿಶೀಲಿಸಿದರು....

Read moreDetails
ನಿರೂಪಣಾ ಪಯಣಕ್ಕೆ ಅನುಪಮಾ ಗೌಡ ವಿದಾಯ;ಕಾರಣವೇನು?

ನಿರೂಪಣಾ ಪಯಣಕ್ಕೆ ಅನುಪಮಾ ಗೌಡ ವಿದಾಯ;ಕಾರಣವೇನು?

August 18, 2026
ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

August 18, 2026
ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

August 18, 2026
ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

August 18, 2026
Next Post
ನಟ ಸುದೀಪ್‌ ಬಿಜೆಪಿ ಸೇರ್ಪಡೆ?

ನಟ ಸುದೀಪ್‌ ಬಿಜೆಪಿ ಸೇರ್ಪಡೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada