• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರು ಭಾಗದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಜೆಡಿಎಸ್

ಪ್ರತಿಧ್ವನಿ by ಪ್ರತಿಧ್ವನಿ
October 21, 2022
in ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಶತಾಯ ಗತಾಯ ಅಧಿಕಾರದ ಗದ್ದುಗೆ ಏರಬೇಕೆಂಬ ಹಂಬಲದಲ್ಲಿರುವ ಜೆಡಿಎಸ್ ಈಗಾಗಲೇ ತನ್ನ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಪಂಚರತ್ನ ಹಾಗೂ ಮಿಷನ್ 123ಎಂಬ ಕಾರ್ಯಾಗಾರವನ್ನ ಮಾಡುವ ಮೂಲಕ ತುಸು ವಿಭಿನ್ನ ಎನ್ನಿಸಿದೆ.

ADVERTISEMENT

ಈಚೆಗೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪಂಚರತ್ನ ಕಾರ್ಯಾಗಾರ ನಡೆಸಿದ ಜೆಡಿಎಸ್ ಕಾರ್ಯಕ್ರಮದ ನಂತರ ಹಿರಿಯ ಶಾಸಕ ಜೆ.ಟಿ.ದೇವೇಗೌಡ ಮನೆಗೆ ಭೇಟಿ ದೇವೇಗೌಡ ಹಾಗೂ ಕುಮಾರಸ್ವಾಮಿ ಜಿಟಿಡಿಯನ್ನು ಪಕ್ಷದಲ್ಲೇ ಉಳಿಸಿಕೊಳ್ಳುವುದರಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ಶುಕ್ರವಾರ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಮೈಸೂರು ಭಾಗದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ.

ಚಾಮುಂಡೇಶ್ವರಿ, ಕೆ.ಆರ್.ನಗರ, ಟಿ.ನರಸೀಪುರ, ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರಗಳ ಹಾಲಿ ಜೆಡಿಎಸ್ ಶಾಸಕರಿಗೆ ಟಿಕೆಟ್ ಖಾತ್ರಿಯಾಗಿದ್ದು ಹುಣಸೂರಿನಿಂದ ಜೆಟಿಡಿ ಪುತ್ರ ಹರೀಶ್ ಗೌಡ ಹಾಗೂ ಹೆಚ್.ಡಿ.ಕೋಟೆಯಿಂದ ಮಾಜಿ ಶಾಸಕ ಚಿಕ್ಕಣ್ಣನವರ ಪುತ್ರ ಜಯಪ್ರಕಾಶ್ಗೆ ಟಿಕೆಟ್ ಘೋಷಣೆಯಾಗಿದೆ.

ಪಟ್ಟಿ ಬಿಡುಗಡೆ ನಂತರ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಜಿಲ್ಲೆಯ ಎಲ್ಲಾ ಉಸ್ತುವಾರಿಯನ್ನು ನಾನು ಸಂಪೂರ್ನವಾಗಿ ಜಿಟಿಡಿಗೆ ವಹಿಸುತ್ತಿದ್ದೇನೆ. ಜಿಟಿಡಿ ನಾಯಕತ್ವದಲ್ಲೇ ಎಲ್ಲವೂ ನಡೆಯುತ್ತದೆ ಅವರ ನಾಯಕತ್ವದ ಬಗ್ಗೆ ಒಂದೇ ಒಂದು ದೂರು ಕೇಳಿಬಂದರೂ ನಾನು ಸಹಿಸುವುದಿಲ್ಲ ಅಪಸ್ವರ ಎತ್ತುವವರು ಹೊರ ನಡೆಯಬಹುದು ಎಂದು ಪರೋಕ್ಷವಾಗಿ ಜಿಟಿಡಿ ವಿರೋಧಿ ಬಣಕ್ಕೆ ದೊಡ್ಡ ಗೌಡರು ಚಾಟಿ ಬೀಸಿದ್ದಾರೆ.

ಇನ್ನು ಅಬ್ಯರ್ಥಿಗಳ ಪಟ್ಟಿ ಬಿಡುಗಡೆ ನಂತರ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ನಾನು ದೇವೇಗೌಡರು ಮನೆಗೆ ಬಂದ ದಿನವೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇನೆ. ನನ್ನ ಹಾಗೂ ಪಕ್ಷದ ನಡುವೆ ಯಾವುದೇ ಗೊಂದಲಗಳು ಉಳಿದಿಲ್ಲ ಎಂದಿದ್ದಾರೆ.

ಚಾಮುಂಡೇಶ್ವರಿ ತಾಯಿಗೆ ದೇವೇಗೌಡರು ವಿಶೇಷ ಪೂಜೆ ಸಲ್ಲಿಸಿದ್ದಾರೆ ಜನವರಿಯಲ್ಲಿ ಚಂಡಿಕಾ ಯಾಗ ನಡೆಸಲಿದ್ದಾರೆ ಅವರ ಉತ್ಸಾಹವೇ ನಮ್ಮಗೆ ಪ್ರೇರಣೆ ಎಂದು ಹೇಳಿದ್ದಾರೆ.

ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದ ಜಿಟಿಡಿ

ಇನ್ನು ಚಾಮುಂಡೇಶ್ವರಿ ಕ್ಷೇತ್ರವನ್ನು ಉಳಿಸಿಕೊಳ್ಳುವುದರಲ್ಲಿ ಯಶಸ್ವಿಯಾಗಿರುವ ಜಿಟಿಡಿ ತಮ್ಮ ಪುತ್ರ ಬಿಡಿಸಿಸಿ ಅಧ್ಯಕ್ಷ ಜಿ.ಡಿ.ಹರೀಶ್ ಗೌಡಗೆ ಹುಣಸೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಮೂಲಕ ತಮ್ಮ ರಾಜಕೀಯ ಕಡುವೈರಿ ಶಾಸಕ ಸಾ.ರಾ.ಮಹೇಶ್ ವಿರುದ್ದ ಹಳೇ ಸೇಡನ್ನು ತೀರಿಸಿಕೊಂಡರು ಮತ್ತು ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅಗ್ನಿ ಪ್ರೈಮ್‌ ಖಂಡಾಂತರ ಕ್ಷಿಪಣಿ ಯಶಸ್ವಿ ಪರೀಕ್ಷೆ

Next Post

ಟಿ-20 ವಿಶ್ವಕಪ್‌: ಸೂಪರ್‌-12ಗೆ ಲಗ್ಗೆ ಹಾಕಿದ ಜಿಂಬಾಬ್ವೆ!

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post
ಟಿ-20 ವಿಶ್ವಕಪ್‌: ಸೂಪರ್‌-12ಗೆ ಲಗ್ಗೆ ಹಾಕಿದ ಜಿಂಬಾಬ್ವೆ!

ಟಿ-20 ವಿಶ್ವಕಪ್‌: ಸೂಪರ್‌-12ಗೆ ಲಗ್ಗೆ ಹಾಕಿದ ಜಿಂಬಾಬ್ವೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada