2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ವಿಭಿನ್ನವಾಗಿ ಪ್ರಚಾರ ಕಾರ್ಯ ಕೈಗೊಂಡಿರುವ ಜೆಡಿಎಸ್ 93 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಪ್ರಕಟಿಸಿದೆ.
ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪಟ್ಟಿಯನ್ನ ಬಿಡುಗಡೆ ಮಾಡಿ ಅಭ್ಯರ್ಥಿಗಳಿಗೆ ಶುಭ ಹಾರೈಸಿದ್ದಾರೆ.
ಶನಿವಾರ ರಾಮನಗರದಲ್ಲಿ ನಡೆದ ಪಂಚರತ್ನ ರಥಯಾತ್ರೆಯ ವೇಳೆ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರನ್ನ ಮೊದಲ ಅಭ್ಯರ್ಥಿಯಾಗಿ ಪಕ್ಷ ಘೋಷಿಸಿತ್ತು.