• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜೆಡಿಎಸ್ – ಬಿಜೆಪಿ ಮೈತ್ರಿ ಸರಕಾರ ಬಂದೇ ಬರುತ್ತದೆ;ನಮ್ಮ Unfinished ಅಜೆಂಡಾ ಪೂರ್ಣಗೊಳಿಸುತ್ತೇವೆ:ಹೆಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
December 23, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಸಕಲೇಶಪುರ / ಹಾಸನ: ಮುಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಸಿಎಂ ಆಗಿದ್ದ ಎರಡು ಅವಧಿಗಳಲ್ಲಿ ಅಪೂರ್ಣವಾಗಿರುವ ಎಲ್ಲಾ ಕೆಲಸಗಳನ್ನೂ ಆಗ ನಾವು ಮಾಡಿ ಮುಗಿಸುತ್ತೇವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ADVERTISEMENT

ಸಕಲೇಶಪುರದಲ್ಲಿ ಕಾಫಿ ಬೆಳೆಗಾರರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; 2006ರಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮ್ಮಿಶ್ರ ಸರಕಾರ ರಚನೆಯಾದಾಗ ಅನೇಕ ಜನಪರ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಅನೇಕ ಜನಪರ ಕಾರ್ಯಕ್ರಮಗಳ ಜಾರಿ ಬಾಕಿ ಉಳಿದಿದೆ. ಅವೆಲ್ಲವನ್ನೂ ಅನುಷ್ಠಾನಕ್ಕೆ ತರಬೇಕಾದರೆ ಮತ್ತೊಮ್ಮೆ ಮೈತ್ರಿ ಸರಕಾರ ಬರಬೇಕಿದೆ. ಶೀಘ್ರದಲ್ಲಿಯೇ ಬಂದೇ ಬರುತ್ತದೆ ಎಂದು ಹೇಳಿದರು.

ಮುಂದೆ ನಿಮ್ಮೆಲ್ಲರ ಆಶೀರ್ವಾದದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಬರುವ ಆಶಯವಿದೆ. ನನ್ನ ಕನಸಿನ ಕೆಲವು ಶಾಶ್ವತ ಯೋಜನೆಗಳು ಹಾಗೆಯೇ ಉಳಿದಿವೆ. ಅವುಗಳನ್ನೆಲ್ಲಾ ಸಾಕಾರಗೊಳಿಸಬೇಕಿದೆ. ರೈತರ ಬದುಕನ್ನು ಕಟ್ಟಿಕೊಡುತ್ತೇವೆ ಎಂದು ಕೇಂದ್ರ ಸಚಿವರು ನುಡಿದರು.

ಕಾಫಿ ಬೆಳೆಗಾರರಿಗೆ ಸಚಿವರ ಅಭಯ:

ಪ್ರಾಕೃತಿಕ ಕಾರಣ ಹಾಗೂ ಪ್ರತಿಕೂಲಕರ ಹವಾಮಾನದಿಂದ ಕಾಫಿ ಬೆಳೆಗಾರರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜಾಗತಿಕ ಮಾರುಕಟ್ಟೆ ತಲ್ಲಣಗಳಿಂದ ಬೆಳೆಗಾರರು ಸಮಸ್ಯೆ ಎದುರಿಸುತ್ತಿದ್ದಾರೆ. 1991ರಲ್ಲಿ ದೇವೇಗೌಡರು ಸಂಸದರಾಗಿದ್ದರು. ಸಕಲೇಶಪುರದಲ್ಲಿ ನಡೆದ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಅಂದಿನ ಕೇಂದ್ರ ಸಚಿವರಾಗಿದ್ದ ಐ.ಕೆ.ಗುಜ್ರಾಲ್ ಅವರು ಭಾಗವಹಿಸಿದ್ದರು. ಅಂದು ಗುಜ್ರಾಲ್ ಅವರಿಗೆ ದೇವೇಗೌಡರು ಕಾಫಿ ಬೆಳೆಗಾರರ ಸಮಸ್ಯೆ ವಿವರಿಸಿದ್ದರು. ಅವರನ್ನು ಬಿಟ್ಟರೆ ನಲವತ್ತು ವರ್ಷಗಳ ನಂತರ ಸಕಲೇಶಪುರಕ್ಕೆ ಬಂದಿರುವ ಕೇಂದ್ರ ಸಚಿವರು ಅಂದರೆ ಫಿಯುಷ್ ಗೋಯೆಲ್ ಅವರು ಮಾತ್ರ. ಅದಕ್ಕಾಗಿ ನಾನು ಗೋಯಲ್ ಅವರಿಗೆ ಆಭಾರಿ ಆಗಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಪಿಯೂಷ್ ಗೋಯಲ್ ಅವರು ಸಕಲೇಶಪುರಕ್ಕೆ ಬಂದಿರುವ ಕಾರಣಕ್ಕೆ ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಖಂಡಿತವಾಗಿಯೂ ಪರಿಹಾರ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ನನಗಿದೆ ಎಂದು ಕೇಂದ್ರ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಸಕಲೇಶಪುರ ಜನರು ಆನೆ ಹಾವಳಿಗೆ ತುತ್ತಾಗಿ ಬಹಳಷ್ಟು ಕಷ್ಟ ಎದುರಿಸುತ್ತಿದ್ದಾರೆ. ಈ ಬಗ್ಗೆ ದೆಹಲಿ ಮಟ್ಟದಲ್ಲಿ ಚರ್ಚೆಗಳು ನಡೆದಿವೆ. ನಾನೂ ಮನವಿ ಮಾಡಿದ್ದೇನೆ. ಕೇಂದ್ರದಲ್ಲಿ ಪರಿಸರ ಇಲಾಖೆ ಸಚಿವರು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಅವರ ಗಮನಕ್ಕೆ ಮತ್ತೊಮ್ಮೆ ಈ ವಿಷಯ ತರುತ್ತೇನೆ. ಪಿಯೂಷ್ ಗೋಯಲ್ ಮತ್ತು ನಾನು ಭೇಟಿ ಮಾಡಿ ಮನವಿ ಮಾಡುತ್ತೇವೆ. ಆನೆ ಕಾರಿಡಾರ್ ನಿರ್ಮಾಣ ಮಾಡಲು ಅರಣ್ಯ ಇಲಾಖೆ ಹದಿನೈದು ಸಾವಿರ ಎಕರೆ ಗುರುತಿಸಿದೆ. ರೈತರು ಮೂರು ಸಾವಿರ ಎಕರೆ ಬಿಟ್ಟುಕೊಡಲು ಸಿದ್ದರಿದ್ದಾರೆ. ಆದರೆ ಆ ಯೋಜನೆ ನೆನೆಗುದಿಗೆ ಬಿದ್ದಿದೆ. ನಾನು ಮುಖ್ಯಮಂತ್ರಿಯಾದಾಗ ತಡೆಗೋಡೆ ನಿರ್ಮಾಣ ಮಾಡಲು ನೂರು ಕೋಟಿ ಬಿಡುಗಡೆ ಮಾಡಿದ್ದೆ ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.

ಕಸ್ತೂರಿ ರಂಗನ್ ವರದಿ ಬಗ್ಗೆ ಎಲ್ಲರಲ್ಲೂ ಆತಂಕ ಇದೆ. ಹೇಮಾವತಿ ನದಿಯ ನೀರು ಮಲೆನಾಡು ಭಾಗದ ಜನರ ತ್ಯಾಗದ ಫಲ. ಎತ್ತಿನಹೊಳೆ ಯೋಜನೆ ಹೆಸರಿನಲ್ಲಿ ರಸ್ತೆ ಅಭಿವೃದ್ಧಿ ಮಾಡಲು ಅನುಕೂಲವಾಗಿದೆ ಎಂದು ಅವರು ಹೇಳಿದರು.

ದೇವೇಗೌಡರ ಮೇಲೆ ಅಪಾರ ಗೌರವ ಇಟ್ಟಿರುವ ನರೇಂದ್ರಮೋದಿ ಅವರು ತಮ್ಮ ಸಂಪುಟದಲ್ಲಿ ನನಗೊಂದು ಅವಕಾಶ ಮಾಡಿಕೊಟ್ಟಿದ್ದಾರೆ. ಅವರ ಕನಸಿನ ವಿಕಸಿತ ಭಾರತ್ ಸೇರಿದಂತೆ ಅನೇಕ ಯೋಜನೆಗಳನ್ನು ಸಾಕಾರಗೊಳಿಸಬೇಕು. ಆ ನಿಟ್ಟಿನಲ್ಲಿ ನಾವು ವೇಗವಾಗಿ ಕೆಲಸ ಮಾಡುತ್ತಿದ್ದೇವೆ ಎಂದರು ಸಚಿವರು.ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರು ಕಾಫಿ ಬೆಳೆಗಾರರನ್ನು ಉದ್ದೇಶಿಸಿ ಮಾತನಾಡಿದರು.

ಮಾಜಿ ಸಚಿವರಾದ ಹೆಚ್.ಕೆ.ಕುಮಾರಸ್ವಾಮಿ, ಮೋಟಮ್ಮ, ಕರ್ನಾಟಕ ಗ್ರೋವರ್ಸ್ ಫೆಡರೇಶನ್ ಅಧ್ಯಕ್ಷ ಡಾ.ಹೆಚ್.ಟಿ. ಮೋಹನ್ ಕುಮಾರ್, ಸಂಸದರಾದ ತೇಜಸ್ವಿ ಸೂರ್ಯ, ಶ್ರೇಯಸ್ ಪಟೇಲ್, ಶಾಸಕರಾದ ಎಸ್.ಮಂಜುನಾಥ್, ಹೆಚ್.ಕೆ. ಸುರೇಶ್, ಮಂಥರ್ ಗೌಡ, ಸ್ವರೂಪ್ ಪ್ರಕಾಶ್, ಕಾಫಿ ಮಂಡಳಿ ಅಧ್ಯಕ್ಷ ಡಿ.ಜೆ.ದಿನೇಶ್ ಸೇರಿದಂತೆ ಅನೇಕ ಗಣ್ಯರು, ಕಾಫಿ ಬೆಳೆಗಾರರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

Tags: Coffee Board President DJ Dinesh.Former Minister HK KumaraswamyH.K. SureshKarnataka Growers Federation President Dr. H.T. Mohan KumarManthar GowdaMLAs S. ManjunathMotammaMPs Tejaswi SuryaNext JDS-BJP alliance government will come to power.Sakaleshpur / Hassan:Shreyas PatelSwaroop PrakashUnion minister HD Kumaraswamy
Previous Post

ಶೂಟಿಂಗ್ ಮುಗಿಸಿದ ‘ಚೌಕಿದಾರ್’ಗೆ ಕುಂಬಳಕಾಯಿ ಪ್ರಾಪ್ತಿ….

Next Post

9,823 ಕೋಟಿ ರೂ.ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ : ಸಿಎಂ ಸಿದ್ದರಾಮಯ್ಯ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
9,823 ಕೋಟಿ ರೂ.ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ : ಸಿಎಂ ಸಿದ್ದರಾಮಯ್ಯ

9,823 ಕೋಟಿ ರೂ.ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ : ಸಿಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada