• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜೆಡಿಎಸ್ – ಬಿಜೆಪಿ ಮೈತ್ರಿ ಮಾತುಕತೆ ಆರಂಭಿಕ ಹಂತದಲ್ಲಿದೆ: ಎಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
September 9, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಎಚ್‌.ಡಿ.ಕುಮಾರಸ್ವಾಮಿ

ಎಚ್‌.ಡಿ.ಕುಮಾರಸ್ವಾಮಿ

Share on WhatsAppShare on FacebookShare on Telegram

ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರು ಎಲ್ಲಾ ವಿಚಾರಗಳು ಪ್ರಾರಂಭಿಕ ಹಂತದಲ್ಲಿ ಇದ್ದು, ಈವರೆಗೂ ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ, ಮುಂದೆ ಈ ಬಗ್ಗೆ ಹೇಳುತ್ತೇವೆ ಎಂದು ಶನಿವಾರ (ಸೆಪ್ಟೆಂಬರ್‌ 9) ಹೇಳಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಮೈತ್ರಿಗೆ ಮಾಜಿ ಪ್ರಧಾನಿ ದೇವೇಗೌಡರು ಮೈತ್ರಿಗೆ ಒಪ್ಪಿಗೆ ಸೂಚಿದ್ದಾರಾ ಎನ್ನುವ ಪ್ರಶ್ನೆಗೂ, ಕಾದು ನೋಡಿ ಎಂದಷ್ಟೇ ಉತ್ತರಿಸಿದರು.

ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರು ಮೈತ್ರಿ ಬಗ್ಗೆ ಮಾತನಾಡಿದ್ದಾರೆ. ಅವರಿಗೆ ನಾನು ಅಭಾರಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈತ್ರಿಕೂಟದ ಬಗ್ಗೆ ಅವರು ಹೇಳಿದ್ದಾರೆ. ರಾಜ್ಯದ ಜನರನ್ನು ಲೂಟಿ ಮಾಡುತ್ತಿರುವವರಿಗೆ ಕಡಿವಾಣ ಹಾಕಬೇಕಿದೆ. 2006ರಲ್ಲಿಯೂ ನಾನು ಬಿಜೆಪಿ ಜತೆ ಸೇರಿ ಸರಕಾರ ಮಾಡಿದ್ದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಮೂರೇ ತಿಂಗಳಿಗೆ ಜನರು ರೋಸಿ ಹೋಗಿದ್ದಾರೆ. ಯಾವುದೇ ಸರಕಾರಕ್ಕೆ ನಾಲ್ಕು ವರ್ಷ ಕಳೆದ ಮೇಲೆ ಆಡಳಿತ ವಿರೋಧಿ ಅಲೆ ಎದುರಾಗುತ್ತದೆ. ಆದರೆ, ಈ ಸರಕಾರ ಮೂರೇ ತಿಂಗಳಿಗೆ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ಇಂಥ ಸರಕಾರದ ವಿರುದ್ಧ ಸಂಘಟಿವಾಗಿ ಹೋರಾಟ ನಡೆಸಬೇಕಿದೆ ಎಂದರು ಎಚ್‌.ಡಿ.ಕುಮಾರಸ್ವಾಮಿ.

ಮೈತ್ರಿಯ ಮಾತುಕತೆ ಪ್ರಾಥಮಿಕ ಹಂತದಲ್ಲಿದೆ. ರಾಜ್ಯದ ಹಿತದೃಷ್ಟಿಯಿಂದ ಈ ರೀತಿಯ ಕೆಲವು ತೀರ್ಮಾನವಾಗುತ್ತದೆ. ಕೆಲದಿನ ಕಾದು ನೋಡಿ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಕೆಲವರು ಸಿದ್ದಾಂತಗಳ ಬಗ್ಗೆ ಮಾತನಾಡುತ್ತಾರೆ. ಅದರ ಬಗ್ಗೆ ಮುಂದೆ ಮಾತಡೋಣ. ಇನ್ನು ಮೈತ್ರಿ ವಿಷಯಕ್ಕೆ ಬಂದರೆ, ಅದಕ್ಕೆ ಇನ್ನೂ ಸಮಯ ಇದೆ. ಇನ್ನು ಹಲವಾರು ವಿಚಾರಗಳ ಬಗ್ಗೆ ಚರ್ಚೆ ಆಗಬೇಕಿದೆ. ಇಲ್ಲಿ ಪರಸ್ಪರ ಕೊಟ್ಟು ತೆಗೆದುಕೊಳ್ಳುವುದಲ್ಲ.. ವಿಶ್ವಾಸ, ಗೌರವ ಮುಖ್ಯ ಎಂದು ಅವರು ಹೇಳಿದರು.

ದಿನೇಶ್ ಗುಂಡೂರಾವ್ ವಿರುದ್ಧ ಕಿಡಿ:

ಕಾಂಗ್ರೆಸ್ ಪಕ್ಷದ ಯಾರೋ ಒಬ್ಬರು ನಾಯಕರು, ನಾಯಿ ಹಸಿದಿತ್ತು, ಅನ್ನ ಹಳಸಿತ್ತು ಅಂತ ಹೇಳಿದ್ದಾರೆ. 2018ರಲ್ಲಿ ಅವತ್ತು ಯಾವ ಅನ್ನ ಹಳಸಿತ್ತು? ಯಾವ ನಾಯಿ ಹಸಿದಿತ್ತು ಎನ್ನುವುದನ್ನು ನೆನಪು ಮಾಡಿಕೊಳ್ಳಬೇಕು. ಅವತ್ತು ನಮ್ಮ ಮನೆಗೆ ಬಂದಿದ್ದವರು ಯಾರು? ಎಂದು ಸಚಿವ ದಿನೇಶ್ ಗುಂಡೂರಾವ್ ಅವರಿಗೆ ತಿರುಗೇಟು ಕೊಟ್ಟರು ಕುಮಾರಸ್ವಾಮಿ ಅವರು.

ರಾಜ್ಯದ ಪರಿಸ್ಥಿತಿಯನ್ನು ನೋಡುತ್ತಿದ್ದೇನೆ. ಅಮಲಿನಲ್ಲಿ ನಾವು ಏನೋ ಮಾಡಿಬಿಟ್ಟಿದ್ದೇವೆ, ಜೆಡಿಎಸ್ ಪಕ್ಷವನ್ನು ಮುಗಿಸಿಬಿಟ್ಟಿದ್ದೇವೆ, ಅಲ್ಲಿಂದ ಇಲ್ಲಿಂದ ಕರೆದುಕೊಂಡು ಬರುತ್ತಿದ್ದೇವೆ ಎಂದು ಬೀಗುತ್ತಿದ್ದಾರೆ. ಅದಕ್ಕೆಲ್ಲಾ ಉತ್ತರ ಕೊಡುತ್ತೇವೆ ಎಂದು ಅವರು ತಿಳಿಸಿದರು.

ನಾಳೆ ಸಭೆಗೆ 10,000 ಕಾರ್ಯಕರ್ತರು:

ಈ ಎಲ್ಲಾ ಬೆಳವಣಿಗೆಗಳ ನಡುವೆ ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ಕೊಟ್ಟಿದ್ದೇವೆ. ಈಗಾಗಲೇ ಮುಖಂಡರ ಸಭೆ ನಡೆಸಿದ್ದೇವೆ. ಭಾನುವಾರ ಕೂಡ ಮಹತ್ವದ ಸಭೆ ಕರೆಯಲಾಗಿದೆ. ಲೋಕಸಭೆ ಚುನಾವಣೆಗೆ ಮುನ್ನ ಇಂತಹ ಸಭೆ ನಡೆಯಬೇಕು ಎಂದು ದೇವೇಗೌಡರು ಬಯಸಿದ್ದರು. ಅದರಂತೆ ಸಭೆ ನಡೆಯುತ್ತಿದೆ. 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗುತ್ತಾರೆ. ಆ ಸಭೆಯಲ್ಲಿ ಮುಕ್ತವಾಗಿ ಚರ್ಚೆ ನಡೆಸುತ್ತೇವೆ. ಬಳಿಕ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಎಚ್‌.ಡಿ.ಕುಮಾರಸ್ವಾಮಿ ಮಾಹಿತಿ ನೀಡಿದರು.

ಕಾಂಗ್ರೆಸ್ ಗೆ ಈಗ ಡೆಸ್ಪರೇಟ್ ಆಗಿದೆ:

ರಾಜಕಾರಣದಲ್ಲಿ ನಿರಾಶೆ, ಹತಾಶೆ ಎನ್ನುವುದು ಬರಲ್ಲ. ಡೆಸ್ಪರೇಟ್ ಅನ್ನುವ ಪದ ರಾಜಕಾರಣದಲ್ಲಿ ಬರಲ್ಲ. ರಾಜಕಾರಣದ ಡಿಕ್ಷನರಿಯಲ್ಲೇ ಆ ಪದ ಇಲ್ಲ. ಈಗ ಕಾಂಗ್ರೆಸ್ ಪಕ್ಷಕ್ಕೆ ಡೆಸ್ಪರೇಟ್ ಆಗುತ್ತದೆ. ಹೊರನೋಟಕ್ಕೆ ಅವರು ಏನು ಬೇಕಾದರೂ ಹೇಳಬಹುದು. ಆದರೆ ಒಳಗಡೆ ಏನಿದೆ ಅನ್ನುವುದು ನನಗೂ ಗೊತ್ತಿದೆ. ಅವರ ಶಕ್ತಿ ಏನಿದೆ ಅನ್ನುವುದು ನನಗೂ ಗೊತ್ತಿದೆ. ರಾಜಕಾರಣದಲ್ಲಿ ಸದಾಕಾಲ ಒಂದೇ ರೀತಿ ಇರಲ್ಲ. ರಾಜಕಾರಣದ ಚಕ್ರ ಉರುಳುತ್ತಿರುತ್ತದೆ. ಅವರು ಏನು ಸಾಧನೆ ಮಾಡಿದ್ದಾರೆ ಅಂತ ಜನ ಸೀಟು ಕೊಡುತ್ತಾರೆ. ಲೂಟಿ ಮಾಡಿದ್ದಾರೆ, ಆ ಹಣದಲ್ಲಿ ಜನರನ್ನು ಕೊಂಡುಕೊಳ್ಳಬಹುದು ಅಂದುಕೊಂಡಿದ್ದಾರೆ, ಅದು ಸಾಧ್ಯ ಆಗಲ್ಲ ಎಂದರು.

Tags: BJP JDS AllianceHD Kumaraswamyಎಚ್‌.ಡಿ.ಕುಮಾರಸ್ವಾಮಿಬಿಜೆಪಿ ಜೆಡಿಎಸ್‌ ಮೈತ್ರಿ
Previous Post

ಕೃಷಿ ಮೇಳಗಳು ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಮೈಸೂರು | ಶ್ರೀರಾಮೇಶ್ವರ ದೇವಾಲಯಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಭಕ್ತರ ಆಗ್ರಹ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
ಶ್ರೀರಾಮೇಶ್ವರ ದೇವಾಲಯ

ಮೈಸೂರು | ಶ್ರೀರಾಮೇಶ್ವರ ದೇವಾಲಯಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಭಕ್ತರ ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada