• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪಕ್ಷಕ್ಕಾಗಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ – ಸಿದ್ದರಾಮಯ್ಯ ವಿರುದ್ಧ ಎಚ್‌ಡಿ. ಕುಮಾರಸ್ವಾಮಿ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
October 16, 2021
in ಕರ್ನಾಟಕ
0
ದಿವಂಗತ ಮನಗೂಳಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ: ಹೆಚ್.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಕಳೆದ ಒಂದು ವಾರದಿಂದ ಟ್ವೀಟರ್ ನಲ್ಲಿ ಪರಸ್ಪರ ಕಾಲೆಳೆಯುತಿದ್ದ ಇಬ್ಬರು ಮಾಜಿ ಮುಖ್ಯಮಂತ್ರಿಗಳ ವಾಕ್ಸಮರ ಮುಂದುವರೆದಿದೆ. ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ವಿಚಾರವಾಗಿ ಜೆಡಿಎಸ್ ವಿರುದ್ಧ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಾಡಿರುವ ಆರೋಪಗಳಿಗೆ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ! ಎಂದು ಗಂಭೀರ ಆರೋಪ ಮಾಡಿದ್ದಾರೆ.

ADVERTISEMENT

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಎಚ್ ಡಿ ಕುಮಾರಸ್ವಾಮಿ, ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ʼಸಿದ್ದಹಸ್ತʼ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ #ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ! ಎಂದು ಗಂಭೀರ ಆರೋಪ ಮಾಡಿದ್ದಾರೆ.

ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲ ಪೋಣಿಸಿ ʼಅಹಿಂದʼ ಎಂದು ಜನರನ್ನು ‘ಅಡ್ಡದಾರಿ’ ಹಿಡಿಸಿದ ʼಸಿದ್ದಹಸ್ತ ಶೂರರುʼ ತಮ್ಮ ಸ್ವಪಕ್ಷದಲ್ಲೇ ಮುಸ್ಲೀಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಟಾರ್ಗೆಟ್ ಮಾಡುತ್ತಾ ʼಅಲ್ಪಸಂಖ್ಯಾತರ ಅಂತ್ಯ ರಾಜಕಾರಣʼದ #ಟರ್ಮಿನೇಟರ್ ಆಗಿ ಹೊರಹೊಮ್ಮಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ನಂಬಿ ಅಧಿಕಾರ ಕೊಟ್ಟ ಪಕ್ಷದ ಕತ್ತನ್ನೇ ಕುಯ್ಯುವ, ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವ ʼಸಿದ್ದಹಸ್ತ ಸೂತ್ರಧಾರಿʼಯ ಒಳ ರಾಜಕೀಯಕ್ಕೆ ಬಲಿಯಾಗುತ್ತಿರುವ ಅಲ್ಪಸಂಖ್ಯಾತ ನಾಯಕರ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್ʼನಲ್ಲಿ ನಡೆದಿರುವ ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣ ಎಂದು ಜನರಿಗೆ ಗೊತ್ತಾಗಲಿ ಎಂದಿದ್ದಾರೆ.

2012ರ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಇಕ್ಬಾಲ್ ಅಹಮದ್ ಸರಡಗಿ ಸೋಲುತ್ತಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಭೈರತಿ ಸುರೇಶ್ ತಮ್ಮ ಗೆಲುವಿಗೆ ಬೇಕಿದ್ದ 19 ಮತ ಮೀರಿ 23 ಮತ ಪಡೆದು ಗೆಲ್ಲುತ್ತಾರೆ!! ಇಲ್ಲಿ ಸರಡಗಿ ಸೋಲಿಗೆ, ಬೈರತಿ ಸುರೇಶ್ ಗೆಲುವಿಗೆ ಕಾರಣವಾದ ʼಸಿದ್ದಸೂತ್ರʼ ಹಣೆದಿದ್ದು ಯಾರು? ಎಂದು ಪ್ರಶ್ನಿಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ʼಸಿದ್ದಹಸ್ತʼ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ #ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ! 1/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 16, 2021

ಈ ʼಸಿದ್ದಹಸ್ತರ ಸಿದ್ದಸೂತ್ರʼ ಅಲ್ಲಿಗೇ ನಿಲ್ಲುವುದಿಲ್ಲ. 2016ರಲ್ಲಿ ಹೆಬ್ಬಾಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಅವರಿಗೆ ಅಧಿಕೃತ ಟಿಕೆಟ್ ಕೊಡುತ್ತದೆ.

ಆಗ ಭೈರತಿ ಸುರೇಶ್ ಪರ ಲಾಬಿ ಮಾಡಿದ್ದ ಸಿದ್ಧಕಲೆ ಸೂತ್ರಧಾರರು, ಅವರನ್ನೇ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿ ಒಳಸುಳಿ ಸೃಷ್ಟಿಸಿ ಷರೀಫರ ಮೊಮ್ಮಗನನ್ನು ಸೋಲಿಸುತ್ತಾರೆ! 2023ರ ಚುನಾವಣೆಯಲ್ಲಿ ಭೈರತಿ ಸುರೇಶ್ʼಗೇ ಹೆಬ್ಬಾಳದ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ. ಹಾಗಾದರೆ ಜಾಫರ್ ಷರೀಫರ ಮೊಮ್ಮಗನ ಕಥೆ ಏನು? ಎಂದು ಪ್ರಶ್ನಿಸಿದ್ದಾರೆ.

ಕಳೆದ ಲೋಕಸಭೆ ಚುನಾವಣೆ ನಂತರ ತಮಗೆ ಆಗುತ್ತಿರುವ ಅನ್ಯಾಯ ಪ್ರಶ್ನಿಸಿದ ರೋಷನ್ ಬೇಗ್ʼಗೆ ಶೋಕಾಸ್ ನೊಟೀಸ್ ನೀಡಿ, ತಮ್ಮನ್ನು ಬಹಿರಂಗವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರನ್ನು ಬೇಕಾಬಿಟ್ಟಿ ನಡೆಸಿಕೊಂಡು ಅಪಮಾನ ಮಾಡುತ್ತಾರೆ ಸಿದ್ದಹಸ್ತರು. ಕೊನೆಗೆ ರೋಷನ್ ಬೇಗ್ ಕಾಂಗ್ರೆಸ್ ಪಕ್ಷದಿಂದಲೇ ದೂರವಾಗುತ್ತಾರೆ.

ಮೈಸೂರಿನ ಹಿರಿಯ ನಾಯಕ ತನ್ವೀರ್ ಸೇಠ್ ಅವರನ್ನು ಅಪಮಾನಕರವಾಗಿ ನಡೆಸಿಕೊಂಡಿದ್ದು ಇದೇ ಸಿದ್ದಹಸ್ತರು. ಅಲ್ಲಿನ ಪಾಲಿಕೆಯಲ್ಲಿ ಜಾತ್ಯತೀತ ಶಕ್ತಿಗಳನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ ತನ್ವೀರ್ ಮೇಲೆ ಕೂಗಾಡಿದ ಸಿದ್ದಸೂತ್ರ ಪ್ರವೀಣರು, ಇನ್ನಿಲ್ಲದ ಅಪಮಾನ ಮಾಡಿ ನಿಂದಿಸುತ್ತಾರೆ.

ಈಗ ಆಡಿಯೋ ನೆಪದಲ್ಲಿ ಸಲೀಂ ಮೊಹಮದ್ ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಸಲೀಂ ಹೇಳಿದ್ದೆಲ್ಲವನ್ನೂ ಕೇಳಿಕೊಂಡು ʼರಸಸ್ವಾದʼ ಮಾಡಿ ಪುಕ್ಕಟೆ ಮನರಂಜನೆ ಪಡೆದ ವ್ಯಕ್ತಿಗೆ ರಕ್ಷಣೆ ನೀಡಿ ಓರ್ವ ಅಲ್ಪಸಂಖ್ಯಾತ ನಾಯಕನನ್ನು 6 ವರ್ಷ ಉಚ್ಚಾಟಿಸಲಾಗಿದೆ. ಇದು ಯಾವ ಸೀಮೆ ನ್ಯಾಯ? ಎಂದು ಪ್ರಶ್ನಿಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಇದೇನಾ ಸಿದ್ದಹಸ್ತರೇ? ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುತ್ತಾ, ಸಾಧ್ಯವಾದರೆ ಆ ಮಗುವಿನ ಕತ್ತನ್ನೂ ಕುಯ್ಯುತ್ತಾ ನಡೆಸುತ್ತಿರುವ ಇಂಥ ನೀಚ ರಾಜರಾರಣ ಮುಸ್ಲೀಂ ಬಾಂಧವರಿಗೆ ಈಗ ಗೊತ್ತಾಗಿಬಿಟ್ಟಿದೆ.

ಇಕ್ಬಾಲ್ ಸರಡಗಿ ಅವರನ್ನು ಸೋಲಿಸಿದಿರಿ, ಜಾಫರ್ ಷರೀಫರ ಮೊಮ್ಮಗನನ್ನು ಮುಗಿಸಿದಿರಿ, ರೋಷನ್ ಬೇಗ್ ವಿರುದ್ಧ ರೋಷ ತೀರಿಸಿಕೊಂಡಿರಿ, ತನ್ವೀರ್ ಸೇಠ್ ಮೇಲೆ ಹಗೆ ಸಾಧಿಸಿದಿರಿ, ಇನ್ನೊಬ್ಬರ ಮೇಲಿನ ಸೇಡನ್ನು ಬಡಪಾಯಿ ಸಲೀಂ ಮೇಲೆ ತಿರುಗಿಸಿ ಒಂದೇ ಕಲ್ಲಿನಲ್ಲಿ 2 ಹಕ್ಕಿ ಹೊಡೆದು ʼಕಿರಾತಕ ರಾಜಕಾರಣʼ ಮಾಡಿದಿರಿ.

ಚಕ್ರ ತಿರುಗುತ್ತಿದೆ, ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ. ಅಲ್ಪಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ. ನಿಮಗೆ ಪಾಠ ಕಲಿಸುವ #ಜನತಾಪರ್ವ ಈಗಷ್ಟೇ ಆರಂಭವಾಗಿದೆ. ಕಾದು ನೋಡಿ ಎಂದಿದ್ದಾರೆ.

Tags: BJPCongress Partyಅಲ್ಪಸಂಖ್ಯಾತಎಚ್ ಡಿ ಕುಮಾರಸ್ವಾಮಿಬಿಜೆಪಿಸಿದ್ದರಾಮಯ್ಯ
Previous Post

ನಿನ್ನೆ ಜಂಬೂ ಸವಾರಿ ವೀಕ್ಷಣೆಗೆ ಜನರು ಮುಗಿಬಿದ್ದ ಹಿನ್ನೆಲೆ: ಮುರಿದು ಬಿದ್ದ ಜಯಚಾಮರಾಜ ಒಡೆಯರ್‌ ಅವರ ಪ್ರತಿಮೆಯ ಖಡ್ಗ

Next Post

ಸಿಂದಗಿಯ ಚೆಕ್‌ ಪೋಸ್ಟ್ ಬಳಿ ಡಿ.ಕೆ. ಶಿವಕುಮಾರ್ ಅವರ ಕಾರನ್ನು ತಪಾಸಣೆ ನಡೆಸಿದ ಚುನಾವಣೆ ಅಧಿಕಾರಿಗಳು ಮತ್ತು ಪೊಲೀಸರು

Related Posts

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
0

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ, ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ - ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ,ಜುಲೈ 10 :...

Read moreDetails

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
Next Post
ಸಿಂದಗಿಯ ಚೆಕ್‌ ಪೋಸ್ಟ್ ಬಳಿ ಡಿ.ಕೆ. ಶಿವಕುಮಾರ್ ಅವರ ಕಾರನ್ನು ತಪಾಸಣೆ ನಡೆಸಿದ ಚುನಾವಣೆ ಅಧಿಕಾರಿಗಳು ಮತ್ತು ಪೊಲೀಸರು

ಸಿಂದಗಿಯ ಚೆಕ್‌ ಪೋಸ್ಟ್ ಬಳಿ ಡಿ.ಕೆ. ಶಿವಕುಮಾರ್ ಅವರ ಕಾರನ್ನು ತಪಾಸಣೆ ನಡೆಸಿದ ಚುನಾವಣೆ ಅಧಿಕಾರಿಗಳು ಮತ್ತು ಪೊಲೀಸರು

Please login to join discussion

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada