• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

JDSನಿಂದ ಸಿಎಂ ಇಬ್ರಾಹಿಂ ಉಚ್ಛಾಟನೆ; HDD ಅದೇಶ – HDK ಹಂಗಾಮಿ ಅಧ್ಯಕ್ಷ!

Any Mind by Any Mind
October 19, 2023
in ಕರ್ನಾಟಕ
0
JDSನಿಂದ ಸಿಎಂ ಇಬ್ರಾಹಿಂ ಉಚ್ಛಾಟನೆ; HDD ಅದೇಶ – HDK ಹಂಗಾಮಿ ಅಧ್ಯಕ್ಷ!
Share on WhatsAppShare on FacebookShare on Telegram

ಬಿಜೆಪಿ ಜೊತೆಗಿನ ಮೈತ್ರಿಯಿಂದ ಮುನಿಸಿಕೊಂಡು ರೆಬೆಲ್ ಆಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಹೌದು, ಕಳೆದ ವಿಧಾನಸಭೆ ಚುನಾವಣೆ ಮುಗಿದ ಮೇಲೆ ಸ್ಥಗಿತಗೊಂಡಿದ್ದ ಪಕ್ಷದ ಚಟುವಟಿಕೆಗಳಿಗೆ ವೇಗ ನೀಡುವ ಉದ್ದೇಶದಿಂದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರು ರಾಜ್ಯದ ಜೆಡಿಎಸ್ ಘಟಕದ ಕಾರ್ಯಕಾರಿ ಸಮಿತಿಯನ್ನು ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ.

ADVERTISEMENT

ಅಲ್ಲದೆ; ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ರಾಜ್ಯ ಜೆಡಿಎಸ್ ಘಟಕದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಈ ಎರಡೂ ಆದೇಶಗಳು ತಕ್ಷಣದಿಂದಲೇ ಜಾರಿಗೆ ಬರುತ್ತವೆ ಎಂದು ರಾಷ್ಟ್ರೀಯ ಅಧ್ಯಕ್ಷರು ಮಾಧ್ಯಮಗೋಷ್ಠಿಯಲ್ಲಿ ಪ್ರಕಟಿಸಿದರು.

ಈ ಸಂದರ್ಭದಲ್ಲಿಯೇ ಎರಡು ಮಾಧ್ಯಮ ಹೇಳಿಕೆಗಳನ್ನು ಬಿಡುಗಡೆ ಮಾಡಿದರು ರಾಷ್ಟ್ರೀಯ ಅಧ್ಯಕ್ಷರು.

ರಾಜ್ಯ ಘಟಕ ವಿಸರ್ಜನೆ:

“ಜನತಾದಳ (ಜಾತ್ಯತೀತ) ಪಕ್ಷದ ಸಂವಿಧಾನ ಮತ್ತು ನಿಯಮಗಳ ಅಡಿಯಲ್ಲಿ, ಅಂದರೆ; ಆರ್ಟಿಕಲ್ 10ರ ಪ್ರಕಾರ, ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡಂತೆ ಈ ಕೂಡಲೇ ಜಾರಿಗೆ ಬರುವಂತೆ ಆ ಸಮಿತಿಯನ್ನು ವಿಸರ್ಜನೆ ಮಾಡಲಾಗಿದೆ” ಎಂದು ಆದೇಶದಲ್ಲಿ ದೇವೇಗೌಡರು ತಿಳಿಸಿದ್ದಾರೆ.

ಹಂಗಾಮಿ ಅಧ್ಯಕ್ಷರಾಗಿ ಕುಮಾರಸ್ವಾಮಿ:

“ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಒಳಗೊಂಡಂತೆ ಆ ಸಮಿತಿಯನ್ನು ಈಗಾಗಲೇ ವಿಸರ್ಜನೆ ಮಾಡಲಾಗಿದೆ. ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳನ್ನು ಸುಲಲಿತವಾಗಿ ಮುಂದುವರಿಸಿಕೊಂಡು ಹೋಗಲು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯ ಘಟಕದ ಅಡಾಕ್ ಅಧ್ಯಕ್ಷರನ್ನಾಗಿ ಕೂಡಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ” ಎಂದು ಮಾಜಿ ಪ್ರಧಾನಿಗಳು ಮತ್ತೊಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ, ಕಳೆದ ಕೆಲ ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆಗಳನ್ನು ಅವಲೋಕನ ಮಾಡಿದ ಜೆಡಿಎಸ್ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆಯು, ಈ ಮಹತ್ವದ ನಿರ್ಧಾರ ಕೈಗೊಳ್ಳಲು ರಾಷ್ಟ್ರೀಯ ಅಧ್ಯಕ್ಷರಿಗೆ ಸಂಪೂರ್ಣ, ಸರ್ವಸಮ್ಮತದ ಅಧಿಕಾರ ನೀಡಿತು.

ಅದಾದ ಬಳಿಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು ಸೇರಿದಂತೆ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ ಹಿರಿಯ ನಾಯಕರನ್ನು ಒಳಗೊಂಡಂತೆ ಮಾಧ್ಯಮಗೋಷ್ಠಿ ನಡೆಸಿದ ಮಾಜಿ ಪ್ರಧಾನಿಗಳು, ಸಮಿತಿ ಕೈಗೊಂಡ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದರು.

ಮಾಜಿ ಪ್ರಧಾನಿಗಳು ಹೇಳಿದ್ದಿಷ್ಟು;

ಚುನಾವಣೆ ಮುಗಿದು ನಾಲ್ಕು ತಿಂಗಳು ಆಯಿತು. ಇಲ್ಲಿ ಸಿ.ಎಂ.ಇಬ್ರಾಹಿಂ ಅವರು ನೀಡಿರುವ ಹೇಳಿಕೆಗಳ ಬಗ್ಗೆ ಪ್ರಸ್ತಾಪ ಮಾಡಲ್ಲ. ಆದರೆ ಹೆ.ಡಿ.ಕುಮಾರಸ್ವಾಮಿ ಹಾಗೂ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹಾಗೂ ಇತರೆ ಮುಖಂಡರ ಜತೆಗೆ ಸಮಾಲೋಚನೆ ಮಾಡಿದ್ದೇವೆ ಎಂದರು ಅವರು.

ಪಕ್ಷದ ವಿವಿಧ ರಾಜ್ಯಗಳ ಘಟಕಗಳಿಗೆ ಮಾಹಿತಿ ನೀಡಲಾಗಿದೆ.‌ ಅವರಿಗೆ ನಮ್ಮ ನಡೆ ಮನವರಿಕೆ ಆಗಿದೆ. ನಮ್ಮ ಬಿಜೆಪಿ ಮೈತ್ರಿ ನಿರ್ಧಾರಕ್ಕೆ ಕೇರಳದ ಘಟಕ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದರು.

ಪಕ್ಷದ ಹಲವು ಮುಸ್ಲಿಂ ನಾಯಕರು ಕೂಡ ನಮ್ಮ ಜತೆಗೆ ಇದ್ದಾರೆ. ಯಾರೂ ಧೃತಿಗೆಡಬೇಕಾಗಿಲ್ಲ. ಬೇರೆ ಬೇರೆ ರಾಜ್ಯದಲ್ಲಿ ಬೇರೆ ಬೇರೆ ಸನ್ನಿವೇಶ ಇದೆ. ಕುಮಾರಸ್ವಾಮಿ ಅವರು ಶಾಸಕಾಂಗ ಪಕ್ಷದ ನಾಯಕ ಜವಾಬ್ದಾರಿಯ ಜತೆಗೆ ಜತೆಗೆ ಪಕ್ಷದ ಅಧ್ಯಕ್ಷ ಸ್ಥಾನದ ಹೊಣೆಯನ್ನೂ ನಿರ್ವಹಣೆ ಮಾಡಬೇಕು ಎಂದು ನಿರ್ಧಾರ ಮಾಡಲಾಗಿದೆ ಎಂದು ಮಾಜಿ ಪ್ರಧಾನಿಗಳು ತಿಳಿಸಿದರು.

ವಿಜಯದಶಮಿ ನಂತರ ಪಕ್ಷ ಸಂಘಟನೆ:

ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಚುನಾವಣೆ ಬಳಿಕ ನಡೆದ ರಾಜಕೀಯ ಘಟನೆಗಳ ಹಿನ್ನಲೆಯಲ್ಲಿ ಹಳೆ ಘಟಕ ವಿಸರ್ಜನೆ ಮಾಡಿ ಹೊಸ ಸಮಿತಿ ರಚನೆ ಮಾಡಲಾಗಿದೆ. ಪಕ್ಷದಲ್ಲಿ ಪುನಶ್ಚೇತನ ಮಾಡಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಜವಾಬ್ದಾರಿ ನಿರ್ವಹಣೆ ಮಾಡಲು ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರ ಆದೇಶದಂತೆ ಪಕ್ಷವನ್ನು ಸಶಕ್ತಗೊಳಿಸಲಾಗುವುದು ಎಂದರು.

ಕೋರ್ ಕಮಿಟಿ ಸದಸ್ಯರು ಹಾಗೂ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ಸಭೆಯಲ್ಲಿ ಭಾಗಿಯಾಗಿದ್ದರು. ಎಲ್ಲರ ಸಹಮತದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ಎಲ್ಲರನ್ನೂ ವಿಶ್ವಾಸ ತೆಗೆದುಕೊಳ್ಳುವ ಮೂಲಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು ಮಾಜಿ ಮುಖ್ಯಮಂತ್ರಿಗಳು.

ಪಕ್ಷವನ್ನು ಬಲಿಷ್ಠವಾಗಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುತ್ತದೆ. ವಿಜಯದಶಮಿ ಬಳಿಕ ಪಕ್ಷ ಸಂಘಟನೆ ಹಾಗೂ ರಾಜ್ಯದ ಸಮಸ್ಯೆ ಹಿನ್ನಲೆಯಲ್ಲಿ ಪರಿಣಾಮವಾಗಿ ಕೆಲಸ ಮಾಡಲು ನಿರ್ಧಾರ ಮಾಡಲಾಗಿದೆ ಎಂದರು ಅವರು.

ಇನ್ನು ಕುಟುಂಬ ರಾಜಕಾರಣದ ಕುರಿತಾದ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆಯಾಗಿ, ಕಾಂಗ್ರೆಸ್ ಪಕ್ಷದ ಏನು? ಅವರದೂ ಕುಟುಂಬ ಮೂಲ ಅಲ್ಲವೇ? ಅವರಿಗೆ ಯಾವ ನೈತಿಕತೆ‌ ಇದೆ ನಮ್ಮ ಪಕ್ಷದ ಬಗ್ಗೆ ಮಾತನಾಡಲು ಎಂದು ಎಚ್ ಡಿ ಕೆ ಪ್ರಶ್ನಿಸಿದರು.

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು, ಪಕ್ಷದ ಮಾಜಿ ರಾಜ್ಯಾಧ್ಯಕ್ಷರಾದ ಹೆಚ್.ಕೆ.ಕುಮಾರಸ್ವಾಮಿ, ಮಾಜಿ ಸಚಿವರಾದ ಬಂಡೆಪ್ಪ ಕಾಷೆಂಪೂರ್, ಅಲ್ಕೊಡ್ ಹನುಮಂತಪ್ಪ, ವೆಂಕಟರಾವ್ ನಾಡಗೌಡ, ಕೋರ್ ಕಮಿಟಿ ಸಂಚಾಲಕ ವೈ.ಎಸ್.ವಿ.ದತ್ತ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿದಂತೆ ಪಕ್ಷದ ಎಲ್ಲ ನಾಯಕರು ಹಾಜರಿದ್ದರು.

ಜನತಾದಳ (ಜಾತ್ಯಾತೀತ) ಪಕ್ಷದ ಸಂವಿಧಾನ ಮತ್ತು ನಿಯಮಗಳ ಅಡಿಯಲ್ಲಿ ಅಂದರೆ Article XX (10) ಪ್ರಕಾರ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾಲಿಗಳನ್ನು ಒಳಗೊಂಡಂತೆ ಈ ಕೂಡಲೇ ಜಾರಿಗೆ ಬರುವಂತೆ ವಿಸರ್ಜನೆ ಮಾಡಲಾಗಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡರು ಆದೇಶ ಪತ್ರ ಹೊರಡಿಸಿದ್ದಾರೆ.

ಇದಲ್ಲದೇ ರಾಜ್ಯ ಕಾರ್ಯಕಾರಿ ಸಮಿತಿಯನ್ನು ವಿಸರ್ಜನೆ ಮಾಡಲಾಗಿದ್ದು ಈ ತಕ್ಷಣದಿಂದ ಹೆಚ್ ಡಿ. ಕುಮಾರಸ್ವಾಮಿ ಅವರನ್ನು ಅಡಹಾಕ್ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹಾಲಿಂದು ಹಾಲಿಗೆ, ನೀರಿಂದು ನೀರಿಗೆ: ಸಿ.ಟಿ. ರವಿ ಟಾಂಗ್‌

Next Post

ಟಗರು ಪಲ್ಯ ಟ್ರೇಲರ್ ರಿಲೀಸ್ ಮಾಡಿದ ಡಿಬಾಸ್

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಟಗರು ಪಲ್ಯ ಟ್ರೇಲರ್ ರಿಲೀಸ್ ಮಾಡಿದ ಡಿಬಾಸ್

ಟಗರು ಪಲ್ಯ ಟ್ರೇಲರ್ ರಿಲೀಸ್ ಮಾಡಿದ ಡಿಬಾಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada