• Home
  • About Us
  • ಕರ್ನಾಟಕ
Thursday, June 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಹೈಕಮಾಂಡ್ ನಾಗಪುರದಲ್ಲಿದೆ, ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿದೆ ಆದರೆ ಜೆಡಿಎಸ್ ಹೈಮಾಂಡ್ ಬಿಡದಿಯಲ್ಲೇ ಇದೆ – HDK

Any Mind by Any Mind
October 4, 2021
in ಕರ್ನಾಟಕ
0
ಬಿಜೆಪಿ ಹೈಕಮಾಂಡ್ ನಾಗಪುರದಲ್ಲಿದೆ, ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿದೆ ಆದರೆ ಜೆಡಿಎಸ್ ಹೈಮಾಂಡ್ ಬಿಡದಿಯಲ್ಲೇ ಇದೆ – HDK
Share on WhatsAppShare on FacebookShare on Telegram

ಬಿಜೆಪಿ ಹೈಮಾಂಡ್ ನಾಗಪುರದಲ್ಲಿದೆ. ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ಇದೆ. ಜೆಡಿಎಸ್ ಹೈಕಮಾಂಡ್ ಬಿಡದಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ADVERTISEMENT

ಬಿಡದಿಯ ತೋಟದಲ್ಲಿ ನಡೆಯುತ್ತಿರುವ ಜನತಾ ಪರ್ವ 1.O ಮಿಷನ್ 123 ಕಾರ್ಯಾಗಾರದ ಆರನೇ ದಿನ ಎಸ್ ಸಿ, ಎಸ್ ಟಿ ಹಾಗೂ ಹಿಂದುಳಿದ ವರ್ಗದ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿ, ನಿಮ್ಮ ಕೂಗಳತೆಯಲ್ಲಿ ನಿಮ್ಮ ಪಕ್ಷದ ವರಿಷ್ಠ ನಾಯಕರು ಇದ್ದಾರೆ. ಕಾರ್ಯಕರ್ತರು ಹೈಕಮಾಂಡ್ ನೋಡಲು ವಿಮಾನ ಹತ್ತಿ ದೆಹಲಿಗೆ ಹೋಗಬೇಕಿಲ್ಲ. ಸಾವಿರಾರು ರೂಪಾಯಿ ಖರ್ಚು ಮಾಡಬೇಕಿಲ್ಲ ಎಂದು ಅವರು ಹೇಳಿದ್ದಾರೆ.

ಮುಂದುವರೆದು, ಕಾಂಗ್ರೆಸ್ ಜತೆ ಮೈತ್ರಿ ಸರಕಾರ ಬಿದ್ದ ಮೇಲೆ ನಾನು ಈ ರಾಜಕೀಯದ ಬಗ್ಗೆ ಜಿಗುಪ್ಸೆಗೊಂಡಿದ್ದೆ. ಪರಸ್ಪರ ಕಾಲೆಳೆಯುವ ಪ್ರವೃತ್ತಿ ಕಂಡು ನನಗೆ ರಾಜಕೀಯ ಸಾಕೆನಿಸಿತ್ತು. ನಂಗೆ ನೆಮ್ಮದಿ ಬೇಕಿತ್ತು ಹಾಗಾಗಿ ಬಿಡದಿಯ ತೋಟ ಸೇರಿಕೊಂಡೆ ಎಂದಿದ್ದಾರೆ.

ಸಮ್ಮಿಶ್ರ ಸರಕಾರ ಹೋಗುತ್ತೆ ಅಂತ ನಂಗೆ ಗೊತ್ತಿತ್ತು. ಜನತೆಯ ಕೆಲಸ ಮಾಡಲು ಹೆಜ್ಜೆ ಹೆಜ್ಜೆಗೂ ಅಡ್ಡಿಗಳು, ಒತ್ತಡಗಳು. ಯಾವುದೇ ಸಂದರ್ಭದಲ್ಲೂ ಸರಕಾರ ಹೋಗುತ್ತದೆ ಅಂತ ಗೊತ್ತಿದ್ದೂ ನಾನು ಅಮೆರಿಕಕ್ಕೆ ಹೋದೆ. ಅಂತಹ ಹಂಗಿನ ಸರಕಾರ ನನಗೆ ಬೇಕಿರಲಿಲ್ಲ. ಮುಂದಿನ ಸಲ ಇದೇ ರೀತಿಯ ಅತಂತ್ರ ಸ್ಥಿತಿ ಬಂದರೆ ಮುಂದೆಂದೂ ನಾನು ಮತ ಕೇಳಲು ಬರುವುದಿಲ್ಲ ಎಂದಿದ್ದಾರೆ.

ಸರಕಾರ ಹೋದ ಮೇಲೆ ನಾನು ಬಿಡದಿ ತೋಟಕ್ಕೆ ಬಂದ ಮೇಲೆ ದಿನವೂ ಕಾರ್ಯಕರ್ತರು ಬರುತ್ತಿದ್ದರು. ಪಕ್ಷದ ಮೇಲಿನ ಅವರ ಪ್ರೀತಿ, ಬದ್ಧತೆ ನನ್ನ ರಾಜಕೀಯ ನಿವೃತ್ತಿಯ ನಿರ್ಧಾರವನ್ನು ಬದಲಿಸಿತು. ಬಿಡದಿಯಲ್ಲಿ ನೀವು ಕೂತಿರುವ ಈ ಜಾಗ ಹಾಗೂ ಈ ತೋಟ ನನ್ನ ಪಾಲಿನ ಪುಣ್ಯಭೂಮಿ. ನನ್ನ ಕಷ್ಟದ ದುಡಿಮೆಯಿಂದ 1983ರಲ್ಲಿ ಈ ಭೂಮಿಯನ್ನು ಖರೀದಿ ಮಾಡಿದೆ. ಕೃಷಿ ಮಾಡುವ ಉದ್ದೇಶ ನನಗಿತ್ತು. ಆದರೆ ಈ ಭೂಮಿ ನನ್ನನ್ನು ರಾಜಕೀಯಕ್ಕೆ ಎಳೆದು ತಂದಿತು ಎಂದಿದ್ದಾರೆ.

ಒಂದು ದಿನ ನನ್ನನ್ನು ದೊಡ್ಡ ಸಂಖ್ಯೆಯ ಕಾರ್ಯಕರ್ತರು ತೋಟಕ್ಕೆ ಬಂದರು. ಅವರು ಒತ್ತಾಯ ಮಾಡಿ ಹೀಗೆ ಹೇಳಿದರು. ನೀವು ಬಿಡದಿಯಲ್ಲಿ ಹೊಂದಿದ್ದೀರಿ. ಆದರೆ, ರಾಮನಗರದಲ್ಲಿ ಜೆಡಿಎಸ್ 3ನೇ ಸ್ಥಾನದಲ್ಲಿದೆ. ಪಕ್ಷಕ್ಕಾಗಿ ತಾವು ಕೆಲಸ ಮಾಡಬೇಕು. ನಮಗೆ ಮಾರ್ಗದರ್ಶನ ಮಾಡಬೇಕು ಎಂದಾಗ ನಾನು ಅವರ ಒತ್ತಾಯಕ್ಕೆ ಮಣಿದು ರಾಜಕೀಯಕ್ಕೆ ಬರಬೇಕಾಯಿತು. ಆಗ ತಂದೆಯವರು ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಬೇಕು ಎಂದು ವರದೇಗೌಡರು ಭಾರೀ ಒತ್ತಡ ಹೇರಿದರು.ಆದರೆ ನಾನು ರಾಮನಗರದಲ್ಲಿ ಕಣಕ್ಕೆ ಇಳಿಯುವಂತೆ ಮನವಿ ಮಾಡಿದೆ. ಆಗ ದೇವೇಗೌಡರು ರಾಮನಗರದಿಂದ ಸ್ಪರ್ಧಿಸಿ ಗೆದ್ದು ಸಿಎಂ ಆದರು. ಒಂದು ವೇಳೆ ಆ ಘಟನೆ ನಡೆದಿದ್ದರೆ ನಾನಿಂದು ಇಲ್ಲಿ ನಿಂತು ಮಾತನಾಡುವ ಅವಕಾಶವೇ ಇರುತ್ತಿರಲಿಲ್ಲ ಎಂದಿದ್ದಾರೆ.

ದೇವರ ಪ್ರೇರಣೆಯಿಂದ ನಾನು ಈ ಭೂಮಿ ಖರೀದಿ ಮಾಡಿದೆ ಎಂದು ಮತ್ತೆ ಹೇಳ ಬಯಸುತ್ತೇನೆ. ಅದೇ ನಂಬಿಕೆ, ಪ್ರೇರಣೆಯಿಂದ ಇಲ್ಲೇ ಈ ಕಾರ್ಯಗಾರ ನಡೆಯುತ್ತಿದೆ. ಪಕ್ಷದ ಕಚೇರಿಯಲ್ಲಿ ಅಥವಾ ರೆಸಾರ್ಟ್ ನಲ್ಲಿ ಮಾಡಬಹುದಿತ್ತು. ನಾನು ಹಾಗೆ ಮಾಡದೆ ಈ ಮಣ್ಣಿನ ಮಡಿಲಲ್ಲಿ ಈ ಕಾರ್ಯಕ್ರಮ ಮಾಡಲು ತೀರ್ಮಾನ ಮಾಡಿದೆ ಎಂದಿದ್ದಾರೆ.

ಈ ಕಾರ್ಯಗಾರ ಸ್ಥಳದ ಈ ಎರಡೂವರೆ ಎಕರೆ ಜಾಗದಲ್ಲಿ ನನ್ನ ತಂದೆ ತಾಯಿ ಹೆಸರಿನಲ್ಲಿ ಶಾಶ್ವತವಾದ ಒಂದು ಅನಾಥಾಶ್ರಮ, ಒಂದು ದೇಗುಲ ಹಾಗೂ ಎಂದು ಛತ್ರ ಕಟ್ಟುವ ಉದ್ದೇಶ ನನ್ನದು. ಅದನ್ನು ಮಾಡಲು ಈ ಕಾರ್ಯಕ್ರಮದ ಜಾಗ ಮೀಸಲು ಇಟ್ಟಿದ್ದೇನೆ. ಇದು ಎಲ್ಲರಿಗೂ ಮುಕ್ತವಾಗಿರುತ್ತದೆ ಎಂದು ಹೇಳಿದ್ದಾರೆ.

ಇಂತಹ ಜಾಗದಿಂದಲೆ ಪಕ್ಷ ಮತ್ತೆ ಪುಟಿದೇಳುತ್ತಿದೆ. ಈಗ ಎಲ್ಲವೂ ಶುಭಾರಂಭ ಆಗಿದೆ. ಇನ್ನು ಮುಂದುವರೆಸಿಕೊಂಡು ಹೋಗಬೇಕಿದೆ. ಅದನ್ನು ಎಲ್ಲರೂ ಚಾಚೂ ತಪ್ಪದೇ ಮಾಡಬೇಕಿದೆ ಎಂದಿದ್ದಾರೆ.

ಮುಂದೆ ನಾನು ಮುಖ್ಯಮಂತ್ರಿ ಆಗುವ ಉದ್ದೇಶಕ್ಕೆ ಮಾಡುತ್ತಿರುವ ಕಾರ್ಯಗಾರ ಇದಲ್ಲ. ರಾಜ್ಯದ ಭವಿಷ್ಯಕ್ಕಾಗಿ ಇದು. ಎಲ್ಲರೂ ಯೋಧರಂತೆ ಕೆಲಸ ಮಾಡಬೇಕು ಎಂದಿದೆ.

ರಾಷ್ಟ್ರೀಯ ಪಕ್ಷಗಳು ದಲಿತ-ಹಿಂದುಳಿದ ಜನರಿಗೆ ಮಾಡಿದ್ದೇನು? ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಿಜೆಪಿ ಸರಕಾರ ಹಾಗೂ ಸಿದ್ದರಾಮಯ್ಯ ಸರಕಾರ ಈ ಜನರಿಗೆ ಕೊಟ್ಟಿದೇನು ಇಲ್ಲ. ಐದು ವರ್ಷ ಸಿಎಂ ಆಗಿದ್ದ ಅವರು ಎಷ್ಟೆಲ್ಲ ಮಾಡಬೇಕಿತ್ತು, ಆದರೆ ಮಾಡಲಿಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು 85,000 ಕೋಟಿ ರೂಪಾಯಿ ಹಣವನ್ನು ದಲಿತ ಸಮುದಾಯದ ಉದ್ಧಾರಕ್ಕೆ ಕೊಟ್ಟಿದ್ದೇವೆ ಎಂದು ಹೇಳಿದ್ದರು. ಆದರೆ ಆಗಿದೆಯಾ? ಯಾರಿಗೆ ಹೋಯಿತು ಆ ದುಡ್ಡು? ಗಂಗಾ ಕಲ್ಯಾಣ ಯೋಜನೆಯಲ್ಲೂ 2016ರಿಂದ ಯಾರಿಗೂ ಉಪಯೋಗವಾಗಿಲ್ಲ. ನಿಜವಾದ ಒಬ್ಬ ಫಲಾನುಭವಿಯನ್ನೂ ಗುರುತಿಸಿಲ್ಲ ಎಂದಿದ್ದಾರೆ.

ಇನ್ನು ನರೇಂದ್ರ ಮೋದಿ ಅವರು ಸ್ವತಂತ್ರವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಎಲ್ಲವನ್ನೂ ಆರೆಸ್ಸೆಸ್ ನಿರ್ಧಾರ ಮಾಡುತ್ತದೆ. ಸೂಪರ್ ಹೈಕಮಾಂಡ್ ಆಗಿ ಆರೆಸ್ಸೆಸ್ ಕೆಲಸ ಮಾಡುತ್ತಿದೆ ಎಂದಿದ್ದಾರೆ.

ಶಿಕ್ಷಣ, ಆರೋಗ್ಯ, ವಸತಿ, ಕೃಷಿ, ಉದ್ಯೋಗ ಕ್ಷೇತ್ರಗಳಲ್ಲಿ ಗುಣಮಟ್ಟದ ಆಮೂಲಾಗ್ರ ಬದಲಾವಣೆ ಮಾಡುವ ಉದ್ದೇಶ ನಮ್ಮದು. 6000 ಪಂಚಾಯತಿಗಳಲ್ಲಿ, ರಾಜ್ಯದ ಎಲ್ಲಾ ಹಳ್ಳಿಗಳಲ್ಲೂ ಈ ಬದಲಾಣೆ ಆಗಲಿದೆ. ನಾನು ಹೇಳಿದ್ದೆಲ್ಲಾ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಈಗ ರಾಜ್ಯದಲ್ಲಿ ಅಮಾನುಷ ಸರಕಾರ ಇದೆ. ಹೃದಯ ಇಲ್ಲದ ಸರಕಾರ ಇದು. ಕೋರೋನ ದಿಂದ ಪ್ರಾಣ ಬಿಟ್ಟವರ ನೆರವಿಗೆ ಬರಲಿಲ್ಲ, ನೆಲಮಂಗಲ ಘಟನೆ ನೋಡಿ. ನೇಣಿಗೆ ಕೊರಳು ಕೊಟ್ಟ ಆ ಹೆಣ್ಣು ಮಗಳಿಗೆ ಒಂದು ಅನುಕಂಪದ ಕೆಲಸ, ಒಂದಿಷ್ಟು ಪರಿಹಾರ ಕೊಟ್ಟಿದ್ದರೆ ಆ ಮೂರು ಜೀವಗಳು ಉಳಿಯುತ್ತಿದ್ದವು. ಅದನ್ನು ಸರಕಾರ ಮಾಡಲಿಲ್ಲ. ವಾರಿಯರುಗಳು ಸತ್ತರೆ 30 ಲಕ್ಷ ಪರಿಹಾರ ಕೊಡಬೇಕು. ಅದನ್ನು ಕೂಡ ಕೊಟ್ಟಿಲ್ಲ ಎಂದಿದ್ದಾರೆ.

ಇನ್ನು ಕುರಿ ಸತ್ತರೆ 5000 ಕೊಡಲಾಗುವುದು ಎಂದಿದ್ದರು ಸಿದ್ದರಾಮಯ್ಯ. ಬೆಳಗಾವಿಯಲ್ಲಿ ಭೀಮಪ್ಪ ಎಂಬಾತನ 30 ಕುರಿಗಳು ಮಣ್ಣು ಕುಸಿದು ಸತ್ತು ಹೋದವು. ಸಿಎಂ ಕಚೇರಿ ಹತ್ತಿರ ಆತ ಹೋದರೆ ಏನು ಆಗಲಿಲ್ಲ. ಸಿದ್ದರಾಮಯ್ಯ ಕಣ್ಣೆತ್ತಿ ನೋಡಲಿಲ್ಲ. ಕುರುಬ ಸಮುದಾಯದ ವ್ಯಕ್ತಿ ಆತ. ನಾನು 25000 ಕೊಟ್ಟು ಎರಡು ಕುರಿಯನ್ನು ನೀಡಿ ಕಳಿಸಿದೆ ಎಂದು ಹೇಳಿದ್ದಾರೆ.

Tags: BJPCovid 19ಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ಕಾಂಗ್ರೆಸ್ ಹೈಕಮಾಂಡ್ಜೆಡಿಎಸ್ಜೆಡಿಎಸ್ ಪಕ್ಷದೆಹಲಿನಾಗಪುರಬಿಜೆಪಿಬಿಜೆಪಿ ಹೈಕಮಾಂಡ್ಬಿಡದಿಹೈಕಮಾಂಡ್
Previous Post

ಉ.ಪ್ರ:ರೈತರ ಮೇಲೆ ನಡೆದ ಹಿಂಸಾಚಾರದ ವಿರುದ್ಧ ನಡೆಸಿದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಡಿಕೆಶಿ,ಸಿದ್ದು ಸೇರಿ ಹಲವರ ಬಂಧನ

Next Post

ಡ್ರಗ್ಸ್ ಪ್ರಕರಣ : ಆರ್ಯನ್ ಖಾನ್ ಸೇರಿ ಇನ್ನಿಬ್ಬರು ಅಕ್ಟೋಬರ್ 7 ರವರೆಗೆ NCB ವಶಕ್ಕೆ – ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ!

Related Posts

ಅಂಕಣ

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 12, 2025
0

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜಾಥಾ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್‌ ಲಾಡ್‌.ಜಿಲ್ಲಾ ಮಟ್ಟದ ಅಧಿಕಾರಿಗಳು ಜಾಗೃತರಾಗಿ ಕೆಲಸ ಮಾಡಿಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ...

Read moreDetails

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

June 12, 2025
ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು

ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು

June 12, 2025

ವರ್ಗಾವಣೆಗೊಂಡಿದ್ದ ಐಪಿಎಸ್ ಹೇಮಂತ್ ನಿಂಬಾಳ್ಕರ್ 16ದಿನಗಳ ವಿದೇಶ ಪ್ರವಾಸಕ್ಕೆ ರಜೆ.

June 11, 2025

ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

June 11, 2025
Next Post
ಡ್ರಗ್ಸ್ ಪ್ರಕರಣ : ಆರ್ಯನ್ ಖಾನ್ ಸೇರಿ ಇನ್ನಿಬ್ಬರು ಅಕ್ಟೋಬರ್ 7 ರವರೆಗೆ NCB ವಶಕ್ಕೆ – ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ!

ಡ್ರಗ್ಸ್ ಪ್ರಕರಣ : ಆರ್ಯನ್ ಖಾನ್ ಸೇರಿ ಇನ್ನಿಬ್ಬರು ಅಕ್ಟೋಬರ್ 7 ರವರೆಗೆ NCB ವಶಕ್ಕೆ – ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ!

Please login to join discussion

Recent News

Top Story

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

by ಪ್ರತಿಧ್ವನಿ
June 12, 2025
ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು
Top Story

ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು

by ಪ್ರತಿಧ್ವನಿ
June 12, 2025
Top Story

ವರ್ಗಾವಣೆಗೊಂಡಿದ್ದ ಐಪಿಎಸ್ ಹೇಮಂತ್ ನಿಂಬಾಳ್ಕರ್ 16ದಿನಗಳ ವಿದೇಶ ಪ್ರವಾಸಕ್ಕೆ ರಜೆ.

by ಪ್ರತಿಧ್ವನಿ
June 11, 2025
Top Story

ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

by ಪ್ರತಿಧ್ವನಿ
June 11, 2025
ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ
Top Story

ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
June 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

June 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada