• Home
  • About Us
  • ಕರ್ನಾಟಕ
Friday, November 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಜೆಡಿಎಸ್ ಒಂದು ಅವಕಾಶವಾದಿ ಪಕ್ಷ: ಮಾಜಿ ಸಿಎಂ ಸಿದ್ದರಾಮಯ್ಯ

Any Mind by Any Mind
November 2, 2021
in ಕರ್ನಾಟಕ, ರಾಜಕೀಯ
0
ಮೈಸೂರಿನ ಪ್ರತಿ ದಲಿತರ ಮನೆಯಲ್ಲಿ ಇಂದಿರಾ ಗಾಂಧಿಯವರ ಭಾವಚಿತ್ರವಿತ್ತು : ಮಾಜಿ ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು ಯಾಕೆ ಗೊತ್ತೇ?
Share on WhatsAppShare on FacebookShare on Telegram

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾನಗಲ್‌ನ ಪಕ್ಕದ ಕ್ಷೇತ್ರದವರು. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ಬಿಜೆಪಿ ಸೋತಿದೆ. ಹಾನಗಲ್‌ನಲ್ಲಿ ಪ್ರಚಾರದ ವೇಳೆ ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಮಣ್ಣಾಗುತ್ತೇನೆ, ನಾನು ಅಕ್ಕಿಆಲೂರಿನ ಅಳಿಯ ಎಂದೆಲ್ಲಾ ಭಾವನಾತ್ಮಕವಾಗಿ ಮಾತನಾಡಿದರೂ ಕೂಡ ಜನರು ಅವರ ಮಾತಿಗೆ ಮರುಳಾಗದೆ ನಮ್ಮ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ಯಡಿಯೂರಪ್ಪ ಮತ್ತು ಅವರ ಮಗ ಎರಡೂ ಕಡೆಗಳಲ್ಲಿ ಕ್ರಿಯಾಶೀಲರಾಗಿ ಪ್ರಚಾರ ಮಾಡಿದರು. ಮುಖ್ಯಮಂತ್ರಿಗಳು, ಸಚಿವರು ಚುನಾವಣೆ ನಡೆಯುವ ಕ್ಷೇತ್ರದಲ್ಲೇ ಬೀಡುಬಿಟ್ಟಿದ್ದರು, ಇಷ್ಟೆಲ್ಲದರ ಹೊರತಾಗಿಯೂ ಜನ ಬಿಜೆಪಿ ಗೆ ಮತ ನೀಡದೆ, ಕಾಂಗ್ರೆಸ್ ಗೆ ಮತ ನೀಡುವ ಮೂಲಕ ಬದಲಾವಣೆ ಬಯಸಿದ್ದಾರೆ. ಯಡಿಯೂರಪ್ಪ ಅವರೇ ಅಧಿಕಾರದಲ್ಲಿ ಇದ್ದಿದ್ದರೂ ಫಲಿತಾಂಶ ಹೀಗೆ ಇರುತ್ತಿತ್ತು. ಸಿಂದಗಿಯಲ್ಲಿ ಜೆಡಿಎಸ್‌ನಿಂದ ಬಂದ ಕಾರ್ಯಕರ್ತರು ಮತ್ತು ಕಾಂಗ್ರೆಸ್ ನ ಕಾರ್ಯಕರ್ತರ ನಡುವೆ ಹೊಂದಾಣಿಕೆ ಕೊರತೆಯಾಗಿದ್ದು ಇದೇ ನಮ್ಮ ಅಭ್ಯರ್ಥಿ ಸೋಲಿಗೆ ಕಾರಣವಾಗಿರಬಹುದು ಎಂಬ ಅನುಮಾನವಿದೆ. ಈ ಬಗ್ಗೆ ಪೂರ್ಣ ಮಾಹಿತಿ ಬಂದ ನಂತರ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ಅವನತಿ ಶುರುವಾಗಿದೆ. ನರೇಂದ್ರ ಮೋದಿ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಬಿಜೆಪಿ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಹಾಗಾಗಿ ಈ ಸರ್ಕಾರದ ಆಡಳಿತದ ವಿರುದ್ಧದ ಅಲೆ ಆರಂಭಗೊಂಡಿದೆ. ಮುಂದಿನ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ಮುಂದಿನ ಬಾರಿ ಪಕ್ಷದಿಂದ ತಾನು ಮುಖ್ಯಮಂತ್ರಿ ಆಗಬೇಕು ಎಂದು ಪಕ್ಷದ ಯಾವ ನಾಯಕರು ಬೇಕಾದರೂ ಕೇಳಬಹುದು. ಅದರಲ್ಲಿ ಯಾವ ತಪ್ಪಿಲ್ಲ. ಆದರೆ ಪಕ್ಷದ ಹೆಚ್ಚಿನ ಶಾಸಕರ ಅಭಿಪ್ರಾಯ ಮತ್ತು ಹೈಕಮಾಂಡ್ ತೀರ್ಮಾನ ಅಂತಿಮವಾಗಲಿದೆ ಎಂದು ತಿಳಿಸಿದ್ದಾರೆ.

ಹಾನಗಲ್‌ನಲ್ಲಿ ಜೆಡಿಎಸ್ ಪಕ್ಷ ನಾಲ್ಕಂಕಿ ಮತಗಳನ್ನು ಪಡೆಯದೆ, ಠೇವಣಿ ಕಳೆದುಕೊಂಡಿದೆ. ದೇವೇಗೌಡ್ರು ಹತ್ತು ದಿನ ಹಾನಗಲ್ ಮತ್ತು ಸಿಂದಗಿಯಲ್ಲಿ ಪ್ರಚಾರ ಮಾಡಿದ್ರು, ಮಾಜಿ ಪ್ರಧಾನಿಗಳು ಅವರು, ಅನುಭವ ಹೆಚ್ಚಿದೆ. ಅವರ ಪಕ್ಷದ ಸೋಲಿಗೆ ಏನು ಕಾರಣ ಎಂದು ಅವರನ್ನೇ ಕೇಳಬೇಕು ಎಂದು ಹೇಳಿದ್ದಾರೆ.

ಬಿಟ್ ಕಾಯಿನ್ ಪ್ರಕರಣದ ಆರೋಪಿಯಾದ ಶ್ರೀ ಕೃಷ್ಣ ಎಂಬುವವರನ್ನು ಬಂಧಿಸಲಾಗಿತ್ತು. ಆತನ ಮೇಲೆ ಚಾರ್ಜ್ ಶೀಟ್ ಹಾಕಲಾಗಿದೆ, ಸಾಕ್ಷಿಗಳನ್ನು ಸಂಗ್ರಹಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ರಾಜಕೀಯ ನಾಯಕರ ಹೆಸರನ್ನು ಮುಖ್ಯಮಂತ್ರಿಗಳೇ ಬಹಿರಂಗಪಡಿಸಬೇಕು. ಅವದು ಕಾಂಗ್ರೆಸ್ ನವರಾದರೂ ಸರಿ, ಬಿಜೆಪಿ ಯವರಾದರೂ ಸರಿ. ಜನರಿಗೆ ಸತ್ಯ ಗೊತ್ತಾಗಲೇಬೇಕು ಎಂದು ಆಗ್ರಹಿಸಿದ್ದಾರೆ.

ನಾನು ತನಿಖಾ ಸಂಸ್ಥೆಗೆ ಸಾಕ್ಷಿ ಕೊಡುವುದಾದರೆ ತನಿಖೆ ಯಾಕೆ ಬೇಕು? ಪ್ರಕರಣದಲ್ಲಿ ರಾಜಕೀಯ ನಾಯಕರು ಭಾಗಿಯಾದ ಬಗ್ಗೆ ನನಗೆ ಮಾಹಿತಿ ಇದೆ ಅಷ್ಟೆ. ಕಾನೂನು ಬಾಹಿರ ಕೃತ್ಯವೊಂದು ನಡೆಯದೆ ಹೋಗಿದ್ದರೆ ಬಸವರಾಜ ಬೊಮ್ಮಾಯಿ ಪ್ರಕರಣವನ್ನು ಇ.ಡಿಗೆ ಯಾಕೆ ವಹಿಸಿದ್ದು? ತನಿಖೆ ಯಾಕೆ ಮಾಡುತ್ತಿರೋದು? ಎಂದು ಪ್ರಶ್ನಿಸಿದ್ದಾರೆ.

ಜೆಡಿಎಸ್ ನಿಂದ ಬಂದ ಜಮೀರ್ ಅಹ್ಮದ್, ಅಖಂಡಾ ಶ್ರೀನಿವಾಸಮೂರ್ತಿ, ಭೀಮಾ ನಾಯಕ್ ಗೆದ್ದಿದ್ದಾರೆ. ನಾನು ಕೂಡ ಜೆಡಿಎಸ್ ನಿಂದ ಕಾಂಗ್ರೆಸ್ ಸೇರಿ ಗೆದ್ದಿದ್ದೇನೆ. ಜೆಡಿಎಸ್ ನಿಂದ ಬಂದ ಮತ್ತು ಕಾಂಗ್ರೆಸ್ ನ ಹಳೆಯ ಕಾರ್ಯಕರ್ತರ ನಡುವೆ ಎಲ್ಲಾ ಕಡೆ ಹೊಂದಾಣಿಕೆ ಕೊರತೆ ಆಗುವುದಿಲ್ಲ, ಕೆಲವೊಂದು ಕ್ಷೇತ್ರದಲ್ಲಿ ಹೊಂದಾಣಿಕೆಯಲ್ಲಿ ಹೆಚ್ಚು ಕಡಿಮೆ ಆಗುತ್ತೆ, ಅದನ್ನು ಮುಂದೆ ಸರಿಪಡಿಸಬಹುದು ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತ ಬಂಧುಗಳು ಹಿಂದೆಯೂ ಜೆಡಿಎಸ್‌ ಅನ್ನು ನಂಬಿಲ್ಲ, ಮುಂದೆಯೂ ನಂಬಲ್ಲ. ಜೆಡಿಎಸ್ ಒಂದು ಅವಕಾಶವಾದಿ ಪಕ್ಷ ಎಂಬುದು ಅವರಿಗೆ ಗೊತ್ತಿದೆ.

ನವೆಂಬರ್ ತಿಂಗಳಿನಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುವಂತೆ ನಾನು ಕೂಡ ಸರ್ಕಾರವನ್ನು ಒತ್ತಾಯ ಮಾಡಿದ್ದೇನೆ. ಕಳೆದ ಮೂರು ವರ್ಷದಲ್ಲಿ ಒಂದು ಬಾರಿಯೂ ಬೆಳಗಾವಿಯಲ್ಲಿ ಅಧಿವೇಶನ ನಡೆದಿಲ್ಲ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು ಚರ್ಚೆಯಾಗಬೇಕು ಎಂಬ ಉದ್ದೇಶದಿಂದಲೆ ಸುವರ್ಣಸೌಧ ಕಟ್ಟಿದ್ದು. ಉತ್ತರ ಕರ್ನಾಟಕದ ಬಗ್ಗೆ ಬಹಳ ಮಾತನಾಡುವ ಬಿಜೆಪಿಯವರು ಅಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮನಸಿದ್ದರೆ ಬೆಳಗಾವಿಯಲ್ಲೇ ಅಧಿವೇಶನ ಕರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Tags: BJPByElectionByelection ResultbypollCongress PartyhanagalJDSJDS KarnatakaKarnatakaBypollssindhagiಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹಾನಗಲ್‌ ಉಪಚುನಾವಣೆ ಗೆಲುವಿಗೆ, ಕ್ಷೇತ್ರದ ಮತದಾರರಿಗೆ ಸಲ್ಯೂಟ್‌ ಮಾಡಿದ : DK Shivakumar

Next Post

ಶಿವಮೊಗ್ಗದ ರಸ್ತೆಗೆ ಅಪ್ಪು ಹೆಸರು, ಸರ್ಕಾರದ ಮುಂದೆ ಸಾಲು ಸಾಲು ಬೇಡಿಕೆ ಇಟ್ಟ ಅಭಿಮಾನಿಗಳು!

Related Posts

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ
Top Story

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

by ಪ್ರತಿಧ್ವನಿ
November 14, 2025
0

ಪುಣೆ: ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟದಲ್ಲಿ ಹತ್ತಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ದೇಶದಲ್ಲಿ ಮತ್ತೊಂದು ದೊಡ್ಡ ಅವಘಡ ನಡೆದಿದೆ. ಪುಣೆ-ಬೆಂಗಳೂರು...

Read moreDetails
ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

November 14, 2025
ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

November 14, 2025
ಇಂದಿನ ರಾಶಿ ಭವಿಷ್ಯ: ಈ ದಿನದ ಅದೃಷ್ಟದ ರಾಶಿಗಳಿವು

ಇಂದಿನ ರಾಶಿ ಭವಿಷ್ಯ: ಈ ದಿನದ ಅದೃಷ್ಟದ ರಾಶಿಗಳಿವು

November 14, 2025
ಆರ್‌ಎಸ್‌ಎಸ್‌ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ- ಸಚಿವ ಪ್ರಿಯಾಂಕ್‌ ಖರ್ಗೆ

ಆರ್‌ಎಸ್‌ಎಸ್‌ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ- ಸಚಿವ ಪ್ರಿಯಾಂಕ್‌ ಖರ್ಗೆ

November 13, 2025
Next Post
ಶಿವಮೊಗ್ಗದ ರಸ್ತೆಗೆ ಅಪ್ಪು ಹೆಸರು, ಸರ್ಕಾರದ ಮುಂದೆ ಸಾಲು ಸಾಲು ಬೇಡಿಕೆ ಇಟ್ಟ ಅಭಿಮಾನಿಗಳು!

ಶಿವಮೊಗ್ಗದ ರಸ್ತೆಗೆ ಅಪ್ಪು ಹೆಸರು, ಸರ್ಕಾರದ ಮುಂದೆ ಸಾಲು ಸಾಲು ಬೇಡಿಕೆ ಇಟ್ಟ ಅಭಿಮಾನಿಗಳು!

Please login to join discussion

Recent News

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ
Top Story

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

by ಪ್ರತಿಧ್ವನಿ
November 14, 2025
ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌
Top Story

ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

by ಪ್ರತಿಧ್ವನಿ
November 14, 2025
ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ
Top Story

ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

by ಪ್ರತಿಧ್ವನಿ
November 14, 2025
ಇಂದಿನ ರಾಶಿ ಭವಿಷ್ಯ: ಈ ದಿನದ ಅದೃಷ್ಟದ ರಾಶಿಗಳಿವು
Top Story

ಇಂದಿನ ರಾಶಿ ಭವಿಷ್ಯ: ಈ ದಿನದ ಅದೃಷ್ಟದ ರಾಶಿಗಳಿವು

by ಪ್ರತಿಧ್ವನಿ
November 14, 2025
Children’s Day 2025: ಮಕ್ಕಳು-ದಿನಾಚರಣೆ ಮತ್ತು ಸೂಕ್ಷ್ಮ ಸಂವೇದನೆ
Top Story

Children’s Day 2025: ಮಕ್ಕಳು-ದಿನಾಚರಣೆ ಮತ್ತು ಸೂಕ್ಷ್ಮ ಸಂವೇದನೆ

by ನಾ ದಿವಾಕರ
November 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

November 14, 2025
ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

November 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!