• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟ್ರಾಫಿಕ್‌ ಸಿಬ್ಬಂದಿ ಮೇಲೆ ಜೆಡಿಎಸ್‌ ನಾಯಕನ ದರ್ಪ; ಹಲ್ಲೆಗೆ ಮುಂದಾದ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
August 17, 2026
in Top Story
0
ಟ್ರಾಫಿಕ್‌ ಸಿಬ್ಬಂದಿ ಮೇಲೆ ಜೆಡಿಎಸ್‌ ನಾಯಕನ ದರ್ಪ; ಹಲ್ಲೆಗೆ ಮುಂದಾದ ಆರೋಪ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಜನಪ್ರತಿನಿಧಿಗಳ ಕುಟುಂಬಸ್ಥರು ಹಾಗೂ ರಾಜಕೀಯ ನಾಯಕರ ದರ್ಪದ ಘಟನೆಗಳು ಚರ್ಚೆಗೆ ಗ್ರಾಸವಾಗುತ್ತಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದೆ. ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜು ಅವರು ಟ್ರಾಫಿಕ್‌ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾದ ಆರೋಪ ಕೇಳಿಬಂದಿದೆ.ಬೆಂಗಳೂರಿನ ಗೊಟ್ಟಿಗೆರೆ ಪ್ರದೇಶದಲ್ಲಿ ಟ್ರಾಫಿಕ್‌ ನಿಯಂತ್ರಣ ಮಾಡುತ್ತಿದ್ದ ಪೊಲೀಸ್ ಸಿಬ್ಬಂದಿ, ವಾಹನಗಳ ಸಂಚಾರ ಸರಾಗಗೊಳಿಸುವ ಸಲುವಾಗಿ ಗೊಟ್ಟಿಗೆರೆ ಮಂಜು ಅವರ ಕಾರನ್ನು ಹ್ಯಾಂಡ್‌ ಸಿಗ್ನಲ್‌ ಮೂಲಕ ನಿಲ್ಲಿಸಲು ಸೂಚಿಸಿದ್ದಾರೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಮಂಜು, “ನನ್ನ ಗಾಡಿಯನ್ನೇ ಸ್ಟಾಪ್ ಮಾಡ್ತೀಯಾ?” ಎಂದು ಪ್ರಶ್ನಿಸಿ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ ಎಂದು ವರದಿಯಾಗಿದೆ.

ADVERTISEMENT
H. D. Kumaraswamy :  ಬರಗಾಲದ ಪರಿಸ್ಥಿತಿಗೆ 500 ಕೋಟಿ ಬೇಕಂತೆ..?

ವಾಗ್ವಾದದ ವೇಳೆ ಪೊಲೀಸ್ ಸಿಬ್ಬಂದಿಯ ಕೊರಳಪಟ್ಟಿ ಹಿಡಿದು ಹಲ್ಲೆಗೆ ಮುಂದಾಗಿದ್ದರು ಎನ್ನಲಾಗಿದ್ದು, ಕಾಲಿನಿಂದ ಹೊಡೆಯಲು ಯತ್ನಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಸ್ಥಳದಲ್ಲಿದ್ದ ಸಾರ್ವಜನಿಕರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಿಂದ ಮುಂದಿನ ಕ್ರಮದ ಬಗ್ಗೆ ಮಾಹಿತಿ ನಿರೀಕ್ಷಿಸಲಾಗಿದೆ.

HD Kumaraswamy : ಕೇಂದ್ರ, ರಾಜ್ಯ ಸರ್ಕಾರಗಳ ಸೌಲಭ್ಯಗಳು ರೈತರಿಗೆ ತಲುಪಲಿ..! | #pratidhvani

ಇದೇ ವೇಳೆ ಬೆಂಗಳೂರಿನ ಭಟ್ಟರಹಳ್ಳಿ ಬಳಿ ಟ್ರಾಫಿಕ್‌ ನಿರ್ವಹಣೆ ಮಾಡುತ್ತಿದ್ದ ಮಹಿಳಾ ಪೊಲೀಸ್‌ ಅಧಿಕಾರಿಯೊಂದಿಗೆ ಕೆಲವರು ಅನುಚಿತವಾಗಿ ವರ್ತಿಸಿದ ಆರೋಪವೂ ಕೇಳಿಬಂದಿದೆ.ಮಂಜುನಾಥ್‌ ಎಂಬ ಸಿಬ್ಬಂದಿ ಟ್ರಾಫಿಕ್‌ ನಿರ್ವಹಣೆ ಮಾಡುತ್ತಿದ್ದ ವೇಳೆ ಹೇಮಂತ್‌ ರೆಡ್ಡಿ, ರಾಧಾಕೃಷ್ಣ ರೆಡ್ಡಿ, ಹರ್ಷಿತ್‌ ರೆಡ್ಡಿ ಹಾಗೂ ರಾಹುಲ್‌ ಎಂಬವರು ಗಲಾಟೆ ನಡೆಸಿದ್ದಾರೆ ಎನ್ನಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಮಹಿಳಾ ಪಿಎಸ್‌ಐ ನಯನಾ ಸ್ಥಳಕ್ಕೆ ಆಗಮಿಸಿದ್ದರು.

 

ಜಗಳ ಬಿಡಿಸಲು ಮುಂದಾದ ವೇಳೆ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಲ್ಲದೆ, ಬಾಡಿ ಶೇಮಿಂಗ್ ಮಾಡಿದ ಆರೋಪವೂ ಕೇಳಿಬಂದಿದೆ. ಘಟನೆಯ ಕೆಲವು ದೃಶ್ಯಗಳು ಬಾಡಿ-ವೋರ್ನ್ ಕ್ಯಾಮೆರಾದಲ್ಲಿ ಸೆರೆಯಾಗಿವೆ ಎನ್ನಲಾಗಿದೆ.

ಈ ಸಂಬಂಧ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.ಒಂದೇ ದಿನದಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆಯ ಎರಡು ಪ್ರತ್ಯೇಕ ಘಟನೆಗಳು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

 

 

Tags: #BengaluruTrafficPolice#Bhatrahalli#BodyShaming#GottigereManju#JanataDalSecular#jds#KarnatakaPolitics#LawAndOrder #Karnataka#PoliceAttack#PoliceMisconduct#TrafficViolation#WomenPolicebengaluruBengaluruNewsbreakingnewskarnatakanewsKRPuramPolicecomplaintTrafficpolice
Previous Post

ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಇನ್ನು ಅನುಮತಿ ಕಡ್ಡಾಯ?; ನಿಯಮ ಉಲ್ಲಂಘಿಸಿದರೆ  ಜೈಲು!

Next Post

2027ರ ಏಕದಿನ ವಿಶ್ವಕಪ್; 51 ದಿನಗಳ ಕ್ರಿಕೆಟ್ ಹಬ್ಬಕ್ಕೆ ದಿನಾಂಕ ಫಿಕ್ಸ್!

Related Posts

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ
Top Story

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

by ಪ್ರತಿಧ್ವನಿ
August 19, 2026
0

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಫಾರ್ಮ್‌ಹೌಸ್‌ ಒಂದರಲ್ಲಿ ನಕಲಿ ಔಷಧಿಗಳನ್ನು ಮರುಪ್ಯಾಕ್‌ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ...

Read moreDetails
ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

ಮಧ್ಯಾಹ್ನದ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಬಳಕೆ..!

August 19, 2026
ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

August 19, 2026
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

August 19, 2026
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

August 19, 2026
Next Post
2027ರ ಏಕದಿನ ವಿಶ್ವಕಪ್; 51 ದಿನಗಳ ಕ್ರಿಕೆಟ್ ಹಬ್ಬಕ್ಕೆ ದಿನಾಂಕ ಫಿಕ್ಸ್!

2027ರ ಏಕದಿನ ವಿಶ್ವಕಪ್; 51 ದಿನಗಳ ಕ್ರಿಕೆಟ್ ಹಬ್ಬಕ್ಕೆ ದಿನಾಂಕ ಫಿಕ್ಸ್!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada