• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

HM Ramesh Gowda: ಗ್ರೇಟರ್‌ ಬೆಂಗಳೂರು ವಾರ್ಡ್‌ ವಿಂಗಡಣೆ ಬಗ್ಗೆ ಜೆಡಿಎಸ್‌ ಅತೃಪ್ತಿ

ಪ್ರತಿಧ್ವನಿ by ಪ್ರತಿಧ್ವನಿ
October 11, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಜಿಬಿಎ ಚುನಾವಣೆಗೆ ಸಿದ್ಧರಾಗುವಂತೆ ಕಾರ್ಯಕರ್ತರು, ಮುಖಂಡರಿಗೆ ನಿರ್ದೇಶನ, ನ್ಯೂನತೆ ಸರಿಪಡಿಸುವಂತೆ ಮಾಜಿ ಶಾಸಕ ಹೆಚ್.ಎಂ. ರಮೇಶ್‌ ಗೌಡ ಆಗ್ರಹ.

ADVERTISEMENT


ಗ್ರೇಟರ್ ಬೆಂಗಳೂರು ಅಥಾರಿಟಿ ರಚನೆಯೇ ಬೆಂಗಳೂರು ನಗರ ಜನರಿಗೆ ಮಾರಕವಾಗಿದ್ದು, ಈಗ ವಾರ್ಡ್‌ʼಗಳ ವಿಂಗಡಣೆಯೂ ದೋಷಪೂರಿತವಾಗಿದೆ. ಇದನ್ನು ತಕ್ಷಣವೇ ಸರಿಪಡಿಸಬೇಕು ಎಂದು ಜೆಡಿಎಸ್‌ ನಗರ ಘಟಕದ ಅಧ್ಯಕ್ಷ, ಮಾಜಿ ಶಾಸಕ ಹೆಚ್.ಎಂ. ರಮೇಶ್‌ ಗೌಡ ಅವರು ರಾಜ್ಯ ಸರಕಾರವನ್ನು, ಮುಖ್ಯ ಆಯುಕ್ತರನ್ನು ಒತ್ತಾಯ ಮಾಡಿದರು.

ವಾರ್ಡ್ʼಗಳ ವಿಭಜನೆಯಲ್ಲಿನ ನ್ಯೂನ್ಯತೆಗಳ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ಜಿಬಿಎ ಚುನಾವಣೆಗೆ ಜೆಡಿಎಸ್ ಪಕ್ಷದ ಆಕಾಂಕ್ಷಿಗಳ ಪಟ್ಟಿ ಸಿದ್ಧತೆ ಮಾಡುವ ವಿಚಾರವಾಗಿ ಶನಿವಾರ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರಕಾರವು ತನ್ನ ಮೂಗಿನ ನೇರಕ್ಕೆ, ಕಾಂಗ್ರೆಸ್‌ ಪಕ್ಷಕ್ಕೆ ರಾಜಕೀಯ ಲಾಭ ಆಗುವ ರೀತಿಯಲ್ಲಿ ವಾರ್ಡ್‌ ವಿಂಗಡಣೆ ಮಾಡಿದೆ. ಈ ವಿಂಗಡಣೆ ಸಾಕಷ್ಟು ನ್ಯೂನತೆಗಳಿಂದ ಕೂಡಿದ್ದು, ಬೆಂಗಳೂರು ಅಭಿವೃದ್ಧಿಗೆ ಮಾರಕವಾಗಿರುತ್ತದೆ. ಹೀಗಾಗಿ ಅದನ್ನು ಸರಿಪಡಿಸಬೇಕು ಎಂದು ಅವರು ಒತ್ತಾಯ ಮಾಡಿದರು.

ಅಲ್ಲದೆ, ಈಗಿನಿಂದಲೇ ಜಿಬಿಎ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನೀಡಿರುವ ಆದೆಶದಂತೆ ಪ್ರತಿಯೊಬ್ಬರೂ ಪಕ್ಷವನ್ನು ಸಂಘಟನೆ ಮಾಡಬೇಕು ಎಂದು ಮುಖಂಡರು, ಕಾರ್ಯಕರ್ತರಿಗೆ ನೀರ್ದೇಶನ ನೀಡಿದರು.

ಇದೇ ವೇಳೆ 50 ಜನ ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಿ ಆ ಪಟ್ಟಿಯನ್ನು ಪಕ್ಷದ ವರಿಷ್ಠರಿಗೆ ಸಲ್ಲಿಸಲಾಯಿತಲ್ಲದೆ, ಆಕಾಂಕ್ಷಿಗಳು ಹಗಲಿರುಳು ಪಕ್ಷ ಸಂಘಟನೆ ಮಾಡಿ ಉತ್ತಮ ಫಲಿತಾಂಶ ಸಾಧಿಸಬೇಕೆಂದು ರಮೇಶ್‌ ಗೌಡರು ಸೂಚಿಸಿದರು.

ಜೇಪಿ ಜಯಂತಿ ಆಚರಣೆ:
ಜನತಾ ಪರಿವಾರದ ಮೂಲ ಪುರುಷರಾದ ಲೋಕನಾಯಕ ಜಯಪ್ರಕಾಶ ನಾರಾಯಣ ಅವರ ಜನ್ಮ ಜಯಂತಿಯನ್ನು ಇದೇ ಆಚರಿಸಲಾಯಿತು. ಜೇಪಿ ಅವರ ಆಶಯದಂತೆ ಪಕ್ಷವನ್ನು ಕಟ್ಟುವ ಶಪಥವನ್ನು ಮುಖಂಡರು ಮಾಡಿದಲ್ಲದೆ, ಅವರಿಗೆ ಗೌರಪೂರ್ವಕವಾಗಿ ನಮನಗಳನ್ನು ಅರ್ಪಿಸಿದರು.

ಈ ಸಭೆಯಲ್ಲಿ ಶಾಸಕ ಟಿ. ಎನ್. ಜವರಾಯಿಗೌಡ, ಮಾಜಿ ಸಚಿವೆ ಲೀಲಾ ದೇವಿ ಆರ್. ಪ್ರಸಾದ್, ಮಾಜಿ ಶಾಸಕ ಕೆ.ಎ. ತಿಪ್ಪೇಸ್ವಾಮಿ, ಪಕ್ಷದ ಜಿಲ್ಲಾ ಚುನಾವಣಾಧಿಕಾರಿ ಶೈಲಾ ಸಂತೋಜಿ ರಾವ್, ಬಿಬಿಎಂಪಿಯ ಮಾಜಿ ಉಪ ಮಹಾಪೌರ ಬಿ.ಭದ್ರೇಗೌಡ, ವಿರೋಧ ಪಕ್ಷದ ಮಾಜಿ ಸದಸ್ಯ ಟಿ. ತಿಮ್ಮೇಗೌಡ ಸೇರಿದಂತೆ ಪಕ್ಷದ ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರು, ಮಹಿಳಾ ವಿಭಾಗದ ಪದಾಧಿಕಾರಿಗಳು ಹಾಗೂ ಇನ್ನಿತರ ವಿಭಾಗಗಳ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Tags: deve gowda's son rameshHM Ramesh Gowdajds ex mlc ramesh gowda press meetjds mlc ramesh gowdajds mlc ramesh gowda reacts manoharmanohar police casejds mlc ramesh gowdamlc ramesh gowdamlc ramesh gowda news kannadamlc ramesh gowda on hd kumaraswamy postermlc ramesh gowda speechramesh gowdaramesh gowda allegation on manoharramesh gowda latest speechramesh gowda newsramesh gowda slams manohar |ramesh gowda speechsiddaramaiah questions mlc ramesh gowda
Previous Post

DK Shivakumar: ಲಾಲ್ ಬಾಗ್ ಅಭಿವೃದ್ಧಿಗೆ ₹10 ಕೋಟಿ ರೂ.: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

Next Post

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada