ಮೈಸೂರು : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿಗಿಂತಲೂ ಹೆಚ್ಚಿನ ಸ್ಥಾನ ಜೆಡಿಎಸ್ ಗೆಲ್ಲುತ್ತದೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಅಮಿತ್ ಶಾ, ಪ್ರಿಯಾಂಕ ಆಟ ರಾಜ್ಯದಲ್ಲಿ ನಡೆಯುವುದಿಲ್ಲ.ಕನ್ನಡ ನಾಡಿಗೆ ಅವರ ಕೊಡುಗೆ ಏನು ಇಲ್ಲ.ಅಮಿತ್ ಶಾ ಗೆ ರಾಜ್ಯದಲ್ಲಿ ಜನಬೆಂಬಲ ವ್ಯಕ್ತವಾಗುತ್ತಿಲ್ಲ.ಅವರ ರ್ಯಾಲಿಗೆ ಹೆಚ್ಚಿನ ಜನರು ಬರುತ್ತಿಲ್ಲ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಜನಬೆಂಬಲ ಕಳೆದುಕೊಂಡಿದ್ಧಾರೆ.ಜೆಡಿಎಸ್ ಯಾರೊಂದಿಗೂ ಒಳಒಪ್ಪಂದ ಮಾಡಿಕೊಂಡಿಲ್ಲ.ಜೆಡಿಎಸ್ ನ ಸ್ವತಂತ್ರ ಸರ್ಕಾರ ಬರುವುದು ನಿಶ್ಚಿತ.ಹೊಸದಾಗಿ ಪಕ್ಷಕ್ಕೆ ಬಂದಿರುವವರ ಪೈಕಿಯೇ 20 ಮಂದಿ ಗೆಲ್ಲಲಿದ್ದಾರೆ ಎಂದು ಹೇಳಿದ್ರು.
ವರುಣ ಕ್ಷೇತ್ರದಲ್ಲಿ ಜೆಡಿಎಸ್ ಬಿಜೆಪಿ ಒಳ ಒಪ್ಪಂದ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು ,ಯಾವುದೇ ಕಾರಣಕ್ಕೂ ಆ ರೀತಿಯ ತೀರ್ಮಾನ ತೆಗೆದುಕೊಂಡಿಲ್ಲ.ನಮಗೆ ಇನ್ನೊಬ್ಬ ಅಭ್ಯರ್ಥಿಯನ್ನು ಸೋಲಿಸುವುದು ಮುಖ್ಯವಲ್ಲ.ನಮಗೆ ನಮ್ಮ ಅಭ್ಯರ್ಥಿಯ ಗೆಲುವೇ ಮುಖ್ಯ. ಭಾರತಿ ಶಂಕರ್ ಒಳ್ಳೆಯ ಅಭ್ಯರ್ಥಿ.ಈ ಹಿಂದೆ ಶಾಸಕರಾಗಿದ್ದಾಗ ಆ ಕ್ಷೇತ್ರದ 3 ಹೋಬಳಿಗಳನ್ನು ಪ್ರತಿನಿಧಿಸಿದ್ದಾರೆ.ನಮ್ಮ ಪಕ್ಷದ ಅಭ್ಯರ್ಥಿ ಸಮರ್ಥರಾಗಿದ್ದಾರೆ ಎಂದು ಹೇಳಿದರು.
ಲಿಂಗಾಯತ ಸಮುದಾಯದ ಸಿಎಂ ಗಳು ಭ್ರಷ್ಟರು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರು ಒಬ್ಬ ಅನುಭವಿ ರಾಜಕಾರಣಿ.ಅಂತಹವರ ಬಾಯಲ್ಲಿ ಆ ಮಾತು ಯಾಕೆ ಬಂತು ಅಂತ ಗೊತ್ತಿಲ್ಲ.ಯಾವ ಅರ್ಥದಲ್ಲಿ ಆ ಮಾತು ಹೇಳಿದ್ದಾರೋ ಗೊತ್ತಿಲ್ಲ.ಭ್ರಷ್ಟಾಚಾರ ಎಂಬುದು ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ.ಸಿದ್ದರಾಮಯ್ಯ ಹೇಳಿಕೆ ಚುನಾವಣೆ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದನ್ನು ಕಾಯ್ದು ನೋಡಬೇಕಿದೆ ಎಂದು ಹೇಳಿದರು.
ಕುಮಾರಸ್ವಾಮಿ ನನ್ನನ್ನು ಬೆಂಬಲಿಸಿದ್ದಾರೆ ಎಂಬ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ಧೇಗೌಡ ಹೇಳಿಕೆಗೆ ಹೆಚ್ಡಿಕೆ ತಿರುಗೇಟು ನೀಡಿದ ಹೆಚ್ಡಿಕೆ, ನನ್ನ ಹೆಸರು ದುರ್ಬಳಕೆ ಮಾಡಿಕೊಳ್ಳುವುದನ್ನು ಅವರು ನಿಲ್ಲಿಸಬೇಕು.
ಕಾಂಗ್ರೆಸ್ ಅಭ್ಯರ್ಥಿ ಸಿದ್ದೇಗೌಡಗೆ ನಾನ್ಯಾಕೆ ಬೆಂಬಲ ನೀಡಲಿ ?ಒಕ್ಕಲಿಗರು ಸಿದ್ದೇಗೌಡ ಮಾತಿಗೆ ಕಿವಿಗೊಡಬೇಡಿ.ಸುಳ್ಳು ಹೇಳಿಕೊಂಡು ಓಡಾಡುತ್ತಿರುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ.
ಜಿ ಟಿ ದೇವೇಗೌಡರು ಈ ಬಾರಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಹೇಳಿದರು.