ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆ ದೇಶಾದ್ಯಂತ ಕುತೂಹಲ ಮೂಡಿಸಿದ್ದು, ಚುನಾವಣಾ ಕಣ ರಂಗೇರಿದೆ. ಇನ್ನೇನು ಮೊದಲ ಹಂತದ ಮತದಾನಕ್ಕೆ ಕೇವಲ ಒಂದೇ ಒಂದು ದಿನ ಬಾಕಿ ಇರುವಾಗಲೇ ಜೆಡಿಯು ನಾಯಕನ ಮನೆಯಲ್ಲಿ ದುರಂತ ನಡೆದು ಹೋಗಿದೆ.

ನಿನ್ನೆ ತಡರಾತ್ರಿ ಜೆಡಿಯು ನಾಯಕ ನಿರಂಜನ್ ಕುಶ್ವಾಹ ಅವರ ಅಣ್ಣ ಸೇರಿದಂತೆ ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆಯಾಗಿದ್ದಾರೆ. ನಿರಂಜನ್ ಅವರ ಅಣ್ಣ ನವೀನ್ ಕುಶ್ವಾಹ, ಅವರ ಪತ್ನಿ ಕಾಂಚನ್ ಮಾಲಾ ಸಿಂಗ್ ಮತ್ತು ಅವರ ಮಗಳು ತನು ಪ್ರಿಯಾ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಮೂವರ ಶವ ಪತ್ತೆ ವಿಚಾರ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕಾಗಮಿಸಿದ ಕೆಹಾತ್ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಜಕೀಯ ಮುಖಂಡನ ಕುಟುಂಬದ ಮೂವರ ಸಾವಿಗೆ ನಿಖರವಾದ ಕಾರಣ ಈವರೆಗೂ ಪತ್ತೆಯಾಗಿಲ್ಲ. ಕೆಹಾತ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತನಿಖೆ ಮುಂದುವರಿದಿದೆ.











