ಮಹಿಳಾ ಪೊಲೀಸ್ ಪೇದೆ ಜೊತೆ ಅಸಭ್ಯ ವರ್ತನೆ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿಗೆ ಅಸ್ಸಾಂನ ಬಾರ್ಪೇಟಾ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಅಪರೇಶ್ ಚಕ್ರಬರ್ತಿ, ಜಿಗ್ನೇಶ್ರನ್ನು ದೀರ್ಘಕಾಲ ಬಂಧನದಲ್ಲಿಡುವ ಸಲುವಾಗಿ ಸುಳ್ಳು ಮೊಕದ್ದಮೆಯನ್ನು ದಾಖಲಿಸಲಾಗಿದೆ. ಮಹಿಳಾ ಪೇದೆಯೊಬ್ಬರು ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡುವ ಮೂಲಕ ಅತಿರೇಕವನ್ನು ಪ್ರದರ್ಶಿಸಿದ್ದಾರೆ ಎಂದು ಹೇಳಿದ್ದಾರೆ.
ಮುಂದುವರೆದು, ಇಬ್ಬರು ಪುರುಷ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿ ಮಹಿಳಾ ಪೊಲೀಸ್ ಅಧಿಕಾರಿಯೊಂದಿಗೆ ಹೇಗೆ ಅಸಭ್ಯವಾಗಿ ವರ್ತಿಸಲು ಸಾಧ್ಯ ಅದಕ್ಕೆ ನೀವುಗಳು ಸರಿಯಾದ ದಾಖಲೆಗಳನ್ನು ಸಹ ಸಲ್ಲಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ.









