ಜಿಂದಾಲ್ ಕಂಪೆನಿಗೆ ಭೂಮಿ ಮಾರಾಟ: ಮುಖ್ಯಮಂತ್ರಿ, ಮಂತ್ರಿ ಮಂಡಳಿಗೆ ಲೀಗಲ್ ನೋಟೀಸ್!

ವಿಜಯನಗರ ಜಿಲ್ಲೆಯಲ್ಲಿ ಜಿಂದಾಲ್ ಕಂಪನಿಗೆ ಸುಮಾರು 3667 ಎಕರೆ ಜಮೀನು ಪರಭಾರೆ ಮಾಡಿರುವ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಮಂತ್ರಿ ಮಂಡಳಿಗೆ ಲೀಗಲ್ ನೊಟೀಸ್ ಜಾರಿ ಮಾಡಲಾಗಿದೆ. ಬೆಂಗಳೂರು ಮೂಲದ ಕೆ ಪೌಲ್‌ ಅರುಣಗಿರಿ ತಮ್ಮ ವಕೀಲ ಎಸ್ ದೊರೆ ರಾಜು ಮೂಲಕ ಲೀಗಲ್ ನೋಟಿಸ್ ಕಳಿಸಿದ್ದಾರೆ.


2008 ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ದೊರೆರಾಜು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು ಕೂಡಾ ಹೂಡಿದ್ದರು.

ಜಿಂದಾಲ್ ಸಂಸ್ಥೆಗೆ ಸರ್ಕಾರಿ ಭೂಮಿ ನೀಡುವುದರಿಂದ ಪರಿಸರಕ್ಕೆ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಲಿದೆ. ಅತ್ಯಂತ ಹೆಚ್ಚು ಖನಿಜಾಂಶವುಳ್ಳ ಜಾಗದಲ್ಲಿ ಪ್ರತಿ ಎಕರೆಗೆ ಕೇವಲ ರೂ. 1,22,195 ನಿಗದಿಪಡಿಸಿದ್ದು, ಸರ್ಕಾರಕ್ಕೆ ದೊಡ್ಡ ನಷ್ಟವಾಗಿದೆ. ಆದ್ದರಿಂದ ಎಪ್ರಿಲ್ 27 ರ ತನ್ನ ನಿರ್ಧಾರವನ್ನು ಸರ್ಕಾರ ಹಿಂಪಡೆಯಬೇಕು ಎಂದು ಅರ್ಜಿದಾರ ನೋಟಿಸ್‌ನಲ್ಲಿ ಹೇಳಿದ್ದಾರೆ.

ಸರ್ಕಾರಿ ಜಮೀನನ್ನು ಖಾಸಗಿ ಸಂಸ್ಥೆಗೆ ನೀಡುವ ವಿಚಾರ ಸಂಬಂಧ ಸುದೀರ್ಘ ಚರ್ಚೆ ನಡೆಸದೆ ತರಾತುರಿಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡು, ಭೂಮಿ ಹಸ್ತಾಂತರಿಸಿರುವುದು ಕಾನೂನು ಬಾಹಿರವಾಗಿದೆ. ಅಲ್ಲದೆ, ಜಿಂದಾಲ್ ಸಂಸ್ಥೆ ಕಾನೂನುಬಾಹಿರ ಚಟುವಟಿಕೆ ನಡೆಸಿದೆ ಎಂದು ಲೋಕಾಯುಕ್ತ ನೀಡಿರುವ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ, ಜಿಂದಾಲ್ ಸಂಸ್ಥೆ ಈ ಹಿಂದೆ ಸೌತ್ ವೆಸ್ಟ್ ಕಂಪನಿ ಮೂಲಕ ನಡೆಸಿದ ಗಣಿಗಾರಿಕೆಯಿಂದ ರಾಜ್ಯ ಸರ್ಕಾರಕ್ಕೆ ರೂ.1078 ಕೋಟಿ ರೂಪಾಯಿ ನಷ್ಟವಾಗಿರುವ ಬಗ್ಗೆ ಲೋಕಾಯುುಕ್ತ ವರದಿ ನೀಡಿದೆ. ಈ ಸಂಬಂಧ ಹೈಕೋರ್ಟ್, ಸುಪ್ರೀಂಕೋರ್ಟ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಕೇಸ್​ಗಳು ವಿಚಾರಣೆ ಹಂತದಲ್ಲಿವೆ ಎಂದು ತಿಳಿಸಿದೆ.

ಜಮೀನು ಮಂಜೂರಾತಿ ಕುರಿತು ಪಕ್ಷದೊಳಗೆ ಅಸಮಾಧಾನವಿದ್ದು, ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲಡ್, ಕೆ ಪೂರ್ಣಿಮಾ ಹಾಗೂ ಉದಯ್ ಗರುಡಾಚಾರ್ ಮೊದಲಾದವರು ಈ ಕ್ರಮದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಈ ಹಿಂದೆ ಕೇಂದ್ರ ನಾಯಕತ್ವಕ್ಕೆ ಪತ್ರ ಬರೆದಿದ್ದರು.

ಸರ್ಕಾರದ ಮುಖ್ಯ ಸಚೇತಕ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಕೂಡಾ ಭೂಮಿ ಮಂಜೂರಾತಿ ವಿರುದ್ಧ ಕೇಂದ್ರ ನಾಯಕತ್ವಕ್ಕೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿರುವ ಅವರು, ಈ ಹಿಂದೆ ನಾವು ವಿರೋಧಿಸಿದ್ದ ವಿಷಯದ ಬಗ್ಗೆ ನಮ್ಮ ನಿಲುವು ಹೇಗೆ ಬದಲಾಯಿತು ಎಂಬುದು ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

ಪಕ್ಷದ ವೇದಿಕೆಯಲ್ಲಿ ಅಥವಾ ಶಾಸಕಾಂಗದಲ್ಲಿ ಇದನ್ನು ಯಾರೂ ಬಗೆಹರಿಸಿಲ್ಲ. ಈ ಭೂಮಿಯನ್ನು ಮಾರಾಟ ಮಾಡಬಾರದೆಂಬ ಪಕ್ಷದ ಮೂಲ ಅಭಿಪ್ರಾಯದೊಂದಿಗೆ ನಾನು ನಿಲ್ಲುತ್ತೇನೆ. ಪಕ್ಷ ಹೇಗೆ ತನ್ನ ನಿಲುವಿನಿಂದ ಬದಲಾಯಿತು ಎಂದು ಗೊತ್ತಿಲ್ಲ. 4000 ಕೋಟಿ ರೂ ಮೌಲ್ಯದ ಜಮೀನು ಕೇವಲ 44 ಕೋಟಿ ರೂ ಗೆ ಮಾರಾಟವಾಗಿರುವುದರ ಕುರಿತು ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

Inputs: TNIE

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...