ಜಮ್ಮು ಕಾಶ್ಮೀರ್ ಕಾರಾಗೃಹ ಇಲಾಖೆಯ ಪೊಲೀಸ್ ಮಹಾನಿರ್ದೇಶಕ ಹೇಮಂತ್ ಲೋಹಿಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಯಾಸೀರ್ ಅಹ್ಮದ್ ಕೊಲೆ ಮಾಡಿರುವ ಆರೋಪಿ ಎಂದು ತಿಳಿದು ಬಂದಿದೆ. ಆರೋಪಿ ಲೋಹಿಯಾ ಮನೆಯಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ.
ಸದ್ಯ ಆರೋಪಿಯ ವಿಚಾರಣೆ ನಡೆಯುತ್ತಿದ್ದು ಹತ್ಯೆಗೆ ನಿಖರ ಕಾರಣ ತಿಳಿಸಿಲ್ಲ ಎಂದು ಹೇಳಲಾಗಿದೆ. ಕಳೆದ ಕೆಲವು ದಿನಗಳಿಂದ ಯಾಸೀರ್ ಖಿನ್ನತಯಿಂದ ಬಳಲುತ್ತಿದ್ದ ಎಂದು ಹೇಳಲಾಗುತ್ತಿದೆ ಅದೇ ಕತ್ತು ಸೀಳಿ ಕೊಲೆ ಮಾಡಲು ಪ್ರಮುಖ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಅಧಿಕಾರಿಯನ್ನು ಹತ್ಯೆ ಮಾಡಿದ ನಂತರ ಆರೋಪಿಯು ಪೆಟ್ರೋಲ್ ಸುರಿದು ಶವವನ್ನು ಸುಡಲು ಯತ್ನಿಸಿರುವುದಾಗಿ ಪೊಲೀಸರ ಬಳಿ ಒಪ್ಪಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಸೋಮವಾರ ತಡರಾತ್ರಿ ಯಾಸೀರ್ ಲೋಹಿಯಾರವರ ಕತ್ತು ಸೀಳಿ ಕೊಲೆ ಮಾಡಿ ತಲೆಮಾರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಲು ಪೊಲೀಸರು ವಿಶೇಷ ತಂಡವನ್ನ ರಚಿಸಿದ್ದರು.






