ದಾವಣಗೆರೆ : ರಾಜ್ಯದಲ್ಲಿ ಚುನಾವಣೆಯ ದಿನ ಸಮೀಪಿಸುತ್ತಿರುವ ಬೆನ್ನಲ್ಲೇ ಲಿಂಗಾಯತ ಸಿಎಂ ಚರ್ಚೆ ಕೂಡ ಜೋರಾಗಿದೆ. ಲಿಂಗಾಯತ ಸಿಎಂ ವಿಚಾರದಲ್ಲಿ ಬಿಜೆಪಿ ಕಾಂಗ್ರೆಸ್ ಮೇಲೆ ಸವಾಲೆಸೆದರೆ ಕಾಂಗ್ರೆಸ್ ಇನ್ನೊಂದು ರೀತಿಯಲ್ಲಿಯೇ ಕೌಂಟರ್ ಕೊಡ್ತಿದೆ, ಈ ಎಲ್ಲದರ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ಜಗದೀಶ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಹೊಸ ಬಾಂಬ್ ಸಿಡಿಸಿದ್ದಾರೆ.

ದಾವಣಗೆರೆಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಲಕ್ಷ್ಮಣ ಸವದಿ ಹಾಗೂ ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ನಮಗೆ ಪ್ಲಸ್ ಪಾಯಿಂಟ್ ಆಗಿದೆ ಎಂದಿದ್ದಾರೆ, ಅಲ್ಲದೇ ಲಿಂಗಾಯತರು ಭ್ರಷ್ಟರು ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆಯೂ ಮಾತನಾಡಿದ ಅವರು, ಸಿದ್ದರಾಮಯ್ಯ ಸುಮ್ಮನೇ ತಮ್ಮ ಹೇಳಿಕೆ ತಿರುಚಲಾಗಿದೆ ಎಂದು ಹೇಳಿಕೊಂಡು ಬರ್ತಿದ್ದಾರೆ, ಅವರು ಮಾತನಾಡಿರುವ ವಿಡಿಯೋ ಇದೆ ಎಂದಿದ್ದಾರೆ .
ಈ ಬಾರಿಯೂ ರಾಜ್ಯದಲ್ಲಿ ಬಿಜೆಪಿ ಅಲೆ ಇದೆ. ಹೀಗಾಗಿ ಈ ಬಾರಿ ಖಂಡಿತವಾಗಿಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ರು.