ಭಾರತ ವನಿತೆಯರ ತಂಡದ ಸ್ಟಾರ್ ಆಲ್ ರೌಂಡರ್ ಜೂಲನ್ ಗೋಸ್ವಾಮಿ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದ ಬೆನ್ನಲ್ಲೇ ಜೂಲನ್ ಗೋಸ್ವಾಮಿ ವಿದಾಯ ಘೋಷಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಸೆಪ್ಟೆಂಬರ್ ೨೪ರಂದು ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್ ನಲ್ಲಿ ನಡೆಯಲಿರುವ ಪಂದ್ಯ ವೃತ್ತಿಜೀವನದ ಕೊನೆಯ ಪಂದ್ಯವಾಗಲಿದೆ ಎಂದು ಜೂಲನ್ ಗೋಸ್ವಾಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
