• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಜಾಮೀನು ಸಿಕ್ಕಿದ್ದರೂ ಇನ್ನೂ ಜೈಲಲ್ಲಿರುವ ಸಿದ್ದೀಕ್ ಕಪ್ಪನ್ ಶೀಘ್ರದಲ್ಲೇ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
January 30, 2023
in ದೇಶ
0
ಜಾಮೀನು ಸಿಕ್ಕಿದ್ದರೂ ಇನ್ನೂ ಜೈಲಲ್ಲಿರುವ ಸಿದ್ದೀಕ್ ಕಪ್ಪನ್ ಶೀಘ್ರದಲ್ಲೇ ಬಿಡುಗಡೆ
Share on WhatsAppShare on FacebookShare on Telegram

ಹತ್ರಾಸ್‌ ಪ್ರಕರಣದ ವರದಿಗಾರಿಕೆಗೆ ತೆರಳಿದ್ದ ವೇಳೆ ಯುಪಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಸಿದ್ದೀಕ್‌ ಕಪ್ಪನ್‌ ಈ ವಾರ ಜೈಲಿನಿಂದ ಬಿಡುಗಡೆ ಹೊಂದುವ ನಿರೀಕ್ಷೆಯಲ್ಲಿದ್ದಾರೆ. ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ದಾಖಲಿಸಿರುವ ಪ್ರಕರಣದಲ್ಲಿ ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರಿಗೆ ಅಲಹಾಬಾದ್ ಹೈಕೋರ್ಟ್ ಲಕ್ನೋ ಪೀಠವು ಜಾಮೀನು ಮಂಜೂರು ಮಾಡಿದೆಯಾದರೂ ಅವರಿನ್ನೂ ಜೈಲಿನಲ್ಲಿಯೇ ಕೊಳೆಯುತ್ತಿದ್ದಾರೆ.

ADVERTISEMENT

2022,ಡಿ.23ರಂದೇ ಜಾಮೀನು ಆದೇಶ ಹೊರಬಿದ್ದಿದ್ದರೂ, ಅವರ ಜಾಮೀನು ಭದ್ರತೆಯನ್ನು ಈವರೆಗೆ ಪರಿಶೀಲಿಸಲಾಗಿಲ್ಲ. ಕಪ್ಪನ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ ದಾಖಲಾಗಿರುವ ಇನ್ನೊಂದು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ 2022ರ ಸೆಪ್ಟಂಬರ್ ನಲ್ಲಿ ಜಾಮೀನು ಮಂಜೂರು ಮಾಡಿತ್ತು.

‘ಪಿಎಂಎಲ್ಎ ಪ್ರಕರಣದಲ್ಲಿ ಜಾಮೀನು ಭದ್ರತೆಗಳನ್ನು ನಾವೀಗಾಗಲೇ ನ್ಯಾಯಾಲಯದ ಮುಂದೆ ಸಲ್ಲಿಸಿದ್ದೇವೆ, ಪರಿಶೀಲನೆಗಾಗಿ ಕಾಯುತ್ತಿದ್ದೇವೆ. ಸ್ಥಳೀಯ ಅಧಿಕಾರಿಗಳು ಅದನ್ನು ಪರಿಶೀಲಿಸಬೇಕಿದೆ. ಅದಕ್ಕೆ ಸಾಮಾನ್ಯವಾಗಿ ಕೆಲವು ಸಮಯ ಹಿಡಿಯುತ್ತದೆʼ ಎಂದು ಸಿದ್ದೀಕ್‌ ಪರ ವಕೀಲರೊಬ್ಬರು ಹೇಳಿದ್ದಾರೆ.

ಇನ್ನೊಂದು ಪ್ರಕರಣದಲ್ಲಿಯ ವಿಳಂಬವನ್ನು ಗಮನಕ್ಕೆ ತೆಗೆದುಕೊಂಡಿದ್ದ ನ್ಯಾಯಾಲಯವು ಶೀಘ್ರವೇ ಪರಿಶೀಲನೆಯನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿತ್ತು. ಆದರೆ ಪ್ರಕ್ರಿಯೆಯಲ್ಲಿ ಹಲವಾರು ಅಧಿಕಾರಿಗಳ ಪಾತ್ರವಿರುವುದರಿಂದ ಮತ್ತು ಅದರ ಮೇಲೆ ನ್ಯಾಯಾಲಯದ ನಿಯಂತ್ರಣವಿಲ್ಲದ್ದರಿಂದ ಭದ್ರತೆಯ ಪರಿಶೀಲನೆಯನ್ನು ಪೂರ್ಣಗೊಳಿಸಲು ಯಾವುದೇ ದಿನಾಂಕವನ್ನು ನಿಗದಿಪಡಿಸಿಲ್ಲ. ಒಂದೆರಡು ದಿನಗಳಲ್ಲಿ ಅದು ಪೂರ್ಣಗೊಳ್ಳುವ ನಿರೀಕ್ಷೆಯಿದೆ,ಬಳಿಕ ಜಾಮೀನು ಬಾಂಡ್ ಮತ್ತು ಬಿಡುಗಡೆ ಆದೇಶವನ್ನು ಹೊರಡಿಸಲಾಗುತ್ತದೆ. ಈ ವಾರದಲ್ಲಿ ಕಪ್ಪನ್ ಜೈಲಿನಿಂದ ಹೊರಬರುತ್ತಾರೆ ಎಂದು ಆಶಿಸಿದ್ದೇವೆ ’ ಎಂದು ಕಪ್ಪನ್ ಪರ ವಕೀಲ ಮುಹಮ್ಮದ್ ದಾನಿಷ್ ಅವರು ತಿಳಿಸಿದರು.

ಯುಎಪಿಎ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಾಗ ತಲಾ ಒಂದು ಲಕ್ಷ ರೂಗಳ ಭದ್ರತೆಗಳನ್ನು ಮತ್ತು ಅಷ್ಟೇ ಮೊತ್ತದ ಪರ್ಸನಲ್ ಬಾಂಡ್‌ ಅನ್ನು ಒದಗಿಸುವಂತೆ ಕಪ್ಪನ್‌ ಗೆ ಸೂಚಿಸಲಾಗಿತ್ತು. ಪ್ರಸ್ತುತ ಪ್ರಕರಣದಲ್ಲಿಯೂ ಇವೇ ಷರತ್ತುಗಳನ್ನು ವಿಧಿಸಲಾಗಿದೆ .

Previous Post

ಪಾಕಿಸ್ತಾನ: ಮಸೀದಿಯಲ್ಲಿ ಉಗ್ರರ ಅಟ್ಟಹಾಸ; 46 ಮಂದಿ ಮೃತ್ಯು, 147 ಮಂದಿಗೆ ಗಾಯ

Next Post

ಗಾಂಧಿ ಏಕೆ ಇಂದಿಗೂ ಪ್ರಸ್ತುತವಾಗುತ್ತಾರೆ ? ವರ್ತಮಾನದ ಭಾರತಕ್ಕೆ ಗಾಂಧಿ ಪ್ರಸ್ತುತ ಎನಿಸಲು ಇರುವ ಹತ್ತು ಮುಖ್ಯ ಕಾರಣಗಳು

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಗಾಂಧಿ ಏಕೆ ಇಂದಿಗೂ ಪ್ರಸ್ತುತವಾಗುತ್ತಾರೆ ? ವರ್ತಮಾನದ ಭಾರತಕ್ಕೆ ಗಾಂಧಿ ಪ್ರಸ್ತುತ ಎನಿಸಲು ಇರುವ ಹತ್ತು ಮುಖ್ಯ ಕಾರಣಗಳು

ಗಾಂಧಿ ಏಕೆ ಇಂದಿಗೂ ಪ್ರಸ್ತುತವಾಗುತ್ತಾರೆ ? ವರ್ತಮಾನದ ಭಾರತಕ್ಕೆ ಗಾಂಧಿ ಪ್ರಸ್ತುತ ಎನಿಸಲು ಇರುವ ಹತ್ತು ಮುಖ್ಯ ಕಾರಣಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!