ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಪತ್ರಕರ್ತ ಸಿದ್ಧಿಕಿ ಕಪ್ಪಾನ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.
ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂಬಂಧ 2020ರಲ್ಲಿ ಬಂಧನಕ್ಕೊಳಗಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದಿಕಿ ಕಪ್ಪಾನ್ ಅವರಿಗೆ ಜಾಮೀನು ನೀಡಲು ಕೆಳ ನ್ಯಾಯಾಲಯಗಳು ತಿರಸ್ಕರಿಸಿದ್ದವು.
ಸಿದ್ದಿಕಿ ಅವರನ್ನು ವಿವಿಧ ಪ್ರಕರಣಗಳಲ್ಲಿ ಬಂಧಿಸಲಾಗಿತ್ತು. ಆದರೆ ನಂತರ ದೇಶದ್ರೋಹಿ, ಉಗ್ರರ ನಿಗ್ರಹ ಕಾಯ್ದೆ (ಯುಎಪಿಎ) ಸೇರಿದಂತೆ ಪ್ರಬಲ ಸೆಕ್ಷನ್ ಅಡಿ ಕೇಸು ದಾಖಲಿಸಿ ಜಾಮೀನು ದೊರೆಯದಂತೆ ಮಾಡಲಾಗಿತ್ತು.