ತೆಲಂಗಾಣ ಹೈಕೋರ್ಟ್ ನ್ಯಾಯಮೂರ್ತಿ ಸಿ ಸುಮಲತಾ ಅವರನ್ನು ಕರ್ನಾಟಕ ಹೈಕೋರ್ಟ್ಗೆ ವರ್ಗಾವಣೆ ಮಾಡಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಆದೇಶಿಸಿದೆ.
ನ್ಯಾಯಮೂರ್ತಿ ಸುಮಲತಾ ಅವರನ್ನು ಈ ಹಿಂದೆ ಗುಜರಾತ್ ಹೈಕೋರ್ಟ್ಗೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಅವರು ಸುಪ್ರೀಂಕೋರ್ಟ್ ಕೊಲಿಜಿಯಂಗೆ ಮನವಿ ಮಾಡಿ ತೆಲಂಗಾಣಕ್ಕೆ ನೆರೆ ರಾಜ್ಯಗಳಾಗಿರುವ ಆಂಧ್ರ ಪ್ರದೇಶ ಅಥವಾ ಕರ್ನಾಟಕಕ್ಕೆ ವರ್ಗಾವಣೆ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಇದನ್ನು ಪುರಸ್ಕರಿಸಿದ್ದ ಕೊಲಿಜಿಯಂ ಕರ್ನಾಟಕ ಹೈಕೋರ್ಟ್ಗೆ ವರ್ಗಾವಣೆ ಮಾಡುವುದಕ್ಕೆ ಶಿಫಾರಸ್ಸು ಮಾಡಿತ್ತು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ವರ್ಗಾವಣೆ ಮಾಡಿರುವುದಾಗಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಂದ್ರ ಕಶ್ಯಪ್ ಅವರು ತಿಳಿಸಿದ್ದಾರೆ.