ಹುಬ್ಬಳ್ಳಿ: ನಗರದಲ್ಲಿ ನಡೆದಿದ್ದ ವಿದ್ಯಾರ್ಥಿನಿ ನೇಹಾ ಕೊಲೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣದ ಆರೋಪಿಗೆ ನ್ಯಾಯಾಂಗ ಬಂಧನ ಮುಗಿದಿದ್ದು, ಮತ್ತೆ ಪೊಲೀಸರು ಜೈಲಿಗೆ ಅಟ್ಟಿದ್ದಾರೆ.
ನಗರದ ಕೆಎಎಲ್ಇ ವಿವಿ ಆವರಣದಲ್ಲಿ ನಡೆದಿದ್ದ ನೇಹಾ ಕೊಲೆ ಪ್ರಕರಣಕ್ಕೆ (Neha Hiremath murder case) ಸಂಬಂಧಿಸಿದಂತೆ ಆರೋಪಿ ಫಯಾಜ್ ಸಿಐಡಿ ಕಸ್ಟಡಿ ಅಂತ್ಯವಾಗಿದೆ. 6 ದಿನಗಳ ಕಾಲ ಆರೋಪಿಯ ವಿಚಾರಣೆ ನಡೆಸಿದ ಸಿಐಡಿ ಅಧಿಕಾರಿಗಳು ಮತ್ತೆ ಇಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಜೈಲಿಗೆ ಕಳುಹಿಸಿದ್ದಾರೆ.
ಏ.18 ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಆವರಣದಲ್ಲಿ ನೇಹಾ ಎಂಬ ವಿಧ್ಯಾರ್ಥಿಯನ್ನು ಫಯಾಜ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ. ನಂತರ ಒಂದೇ ಗಂಟೆಯಲ್ಲಿ ಆತನನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಹುಬ್ಬಳ್ಳಿಯ ಒಂದನೇ JMFC ಕೋರ್ಟ್, ಫಯಾಜ್ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿತ್ತು. ಆದರೆ, ಸಿಐಡಿಗೆ ವರ್ಗಾವಣೆಯಾದ ಹಿನ್ನಲೆ ಫಯಾಜ್ನನ್ನ ಆರು ದಿನಗಳ ಕಾಲ ಸಿಐಡಿ ಅಧಿಕಾರಿಗಳು ಕಸ್ಟಡಿಗೆ ಪಡೆದಿದ್ದು, ವಿವಿಧ ಆಯಾಮಗಳಲ್ಲಿ ಫಯಾಜ್ ನ ವಿಚಾರಣೆ ನಡೆಸಿದ್ದಾರೆ.
ಆರೋಪಿ ಫಯಾಜ್ ಕೊಲೆ ಮಾಡುವ ಕೆಲವು ದಿನಗಳಕ್ಕೂ ಮೊದಲು ನೇಹಾ ಹಿರೇಮಠ ಮನೆ ಹತ್ತಿರವೇ ಓಡಾಡಿದ್ದಾನೆ. ಆ ಮೂಲಕ ಆತ ನೇಹಾ ಚಲನವಲನ ಗಮಿಸಿದ್ದ ಎನ್ನಲಾಗಿದೆ.