ಹಿರಿಯ ಕಾಂಗ್ರೆಸ್ ನಾಯಕ ಮಾಜಿ ಕೇಂದ್ರ ಸಚಿವ, ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಅಜಾದ್ ಕಾಂಗ್ರೆಸ್ ಪಕ್ಷದ ಎಲ್ಲಾ ಹುದ್ದೆಗಳಿಗೂ ಶುಕ್ರವಾರ ರಾಜೀನಾಮೆ ನೀಡುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿ ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದರು.
ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್ ಆಂತರಿಕ ವಿಚಾರ ಹೇಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ ಗುಲಾಂ ನಬಿರವರು ಕೊನೆಗೂ ಆಜಾದಿ ಪಡೆದಿದ್ದಾರೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಾವು ದೇಶವನ್ನ ಕಟ್ಟುವ ಕೆಲಸ ಮಾಡುತ್ತಿದ್ದು ನಮ್ಮಲ್ಲಿ ಯಾವುದೇ ಭಿನ್ನಾಬಿಪ್ರಾಯಗಳಿಲ್ಲ ಎಂದಿದ್ದಾರೆ.