ಇಂದು ಬೆಳ್ಳಂಬೆಳಗ್ಗೆ ಚಿತ್ರದುರ್ಗ (Chitradurga) ಶಾಸಕ ಕೆ.ಸಿ ವೀರೇಂದ್ರ ಪಪ್ಪಿ (KC Veerendra pappi) ಮನೆ ಮೇಲೆ ಇ.ಡಿ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವಿರುದ್ಧ ಅಕ್ರಮ ಆಸ್ತಿ, ತೆರಿಗೆ ವಂಚನೆ ಅರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಇ.ಡಿ ಅಧಿಕಾರಿಗಳು ಚಳ್ಳಕೆರೆ ನಗರದಲ್ಲಿನ ಹಳೇ ಟೌನ್ ವೀರಭದ್ರ ಸ್ವಾಮಿ ದೇವಸ್ಥಾನ ಬಳಿ ಇರುವ ವೀರೇಂದ್ರ ಪಪ್ಪಿ ನಿವಾಸ ಮೇಲೆ ಹಾಗೂ ಅವರ ಅಣ್ಣ ಕೆಸಿ ನಾಗರಾಜ್, ಕೆಸಿ ಸ್ವಾಮಿ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸ್ತಿದ್ದಾರೆ.

ಈ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಹನುಮಂತರಾಯಪ್ಪ ಹಾಗೂ ಪುತ್ರಿ ಕುಸುಮಾ ಹನುಮಂತ ರಾಯಪ್ಪಗೆ ಇಡಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಇಂದು ಬೆಳಗ್ಗಿನ ಜಾವ 4.30ರ ಸುಮಾರಿಗೆ ಹನುಮಂತ ರಾಯಪ್ಪ ಅವರ ಅನ್ನಪೂರ್ಣೇಶ್ವರಿ ನಗರದ ಕೆಂಗುಂಟೆ ಸರ್ಕಲ್ ಬಳಿ ಇರುವ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.

ಬೆಂಗಳೂರಿನ ಮುದ್ದಿನ ಪಾಳ್ಯದಲ್ಲಿರೋ ಆರ್‌ಆರ್ ನಗರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಕುಸುಮಾ ಅವರ ಮನೆ ಮೇಲೂ ದಾಳಿ ನಡೆಸಲಾಗಿದೆ. ಸದ್ಯ ಫ್ಲಾಟ್ ನಲ್ಲಿ ಪರಿಶೀಲನೆ ನಡೆಸುವ ವೇಳೆ ವ್ಯವಹಾರದ ಕೆಲ ದಾಖಲೆಗಳು ಪತ್ತೆಯಾಗಿದ್ದು ತನಿಖೆ ನಡೆಸ್ತಿದ್ದಾರೆ ಎನ್ನಲಾಗಿದೆ.











