ಮೈಸೂರಿನ (Mysuru) ಜಯಪುರ ಹೋಬಳಿಯ ಕೆ.ಸಾಲುಂಡಿ (K Salundi) ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 35ಕ್ಕೂ ಹೆಚ್ಚು ಮಂದಿಗೆ ವಾಂತಿ-ಬೇಧಿ ಶುರುವಾಗಿದ್ದು ಅಸ್ವಸ್ಥರಾಗಿದ್ದಾರೆ. ಕಲುಷಿತ ನೀರು ಸೇವಿಸಿದ್ದ 23 ವರ್ಷದ ಕನಕರಾಜು (Kanaka raju) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಲಾಗ್ತಿದ್ದು, ನಾಲ್ವರಿಗೆ ಐಸಿಯುನಲ್ಲಿ (ICU) ಚಿಕಿತ್ಸೆ ಮುಂದುವರೆದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸಾಲುಂಡಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ (Dr.K.V.Rajendra) ಹಾಗೂ ಡಿಎಚ್ಓ (DHO) ಕುಮಾರಸ್ವಾಮಿ ಭೇಟಿ ಕೊಟ್ಟು ಕಲುಷಿತ ನೀರು ಪೂರೈಕೆ ಬಗ್ಗೆ ಪರಿಶೀಲನೆ ನಡೆಸಿದ್ರು.
ಅಲ್ಲದೇ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಜನರ ಆರೋಗ್ಯ ವಿಚಾರಿಸಿದ್ದಾರೆ. ಗ್ರಾಮದಲ್ಲಿರೋ ಸರ್ಕಾರಿ ಶಾಲೆಯಲ್ಲೇ ತಾತ್ಕಾಲಿಕ ಆಸ್ಪತ್ರೆ ತೆರೆದು ಜನರಿಗೆ ಚಿಕಿತ್ಸೆ ನೀಡಲಾಗ್ತಿದೆ.