![](https://pratidhvani.com/wp-content/uploads/2024/07/kabini-dam-860x484-1.jpg)
ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಕಬಿನಿ ಜಲಾಶಯ ಇದೀಗ ಭರ್ತಿಯತ್ತ ಸಾಗಿದ್ದು ಕಬಿನಿ ಅಚ್ಚುಕಟ್ಟು ಭಾಗದ ರೈತರಲ್ಲಿ ಸಂತಸ ಮನೆ ಮಾಡಿದೆ. ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಬಳಿಯಿರುವ ಕಬಿನಿ ಜಲಾಶಯ ಇದೀಗ ತುಂಬಿ ತುಳುಕಾಡುತ್ತಿದೆ. ಕಬಿನಿ ಜಲಾನಯನ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ. ಪರಿಣಾಮ ಸಮುದ್ರ ಮಟ್ಟದಿಂದ 2284 ಅಡಿ ಗರಿಷ್ಠ ಸಾಮರ್ಥ್ಯದ ಕಬಿನಿ ಜಲಾಶಯದ ಒಳ ಹರಿವಿನ ಪ್ರಮಾಣ ಕೂಡ ಹೆಚ್ಚಳವಾಗಿದೆ. ಕಬಿನಿ ಜಲಾಶಯಕ್ಕೆ ಇಂದು 6874 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದ ಇಂದಿನ ನೀರಿನ ಮಟ್ಟ 2280.35 ಅಡಿಗಳಿಗೆ ಏರಿಕೆಯಾಗಿದೆ. ಜಲಾಶಯದಿಂದ 1333 ಕ್ಯೂಸೆಕ್ ನೀರನ್ನು ಕಪಿಲ ನದಿಗೆ ಹರಿಯ ಬಿಡಲಾಗುತ್ತಿದೆ.
ಒಟ್ಟು 19.52 ಟಿಎಂಸಿ ಸಂಗ್ರಹ ಸಾಮರ್ಥ್ಯದ ಕಬಿನಿ ಜಲಾಶಯದಲ್ಲಿ ಸದ್ಯಕ್ಕೆ 17.25 ಟಿಎಂಸಿ ನೀರು ಸಂಗ್ರಹವಾಗಿದೆ.