ಕಲಬುರಗಿ ಜಿಲ್ಲೆಯಲ್ಲಿ ವಾಂತಿ, ಭೇದಿ ಪ್ರಕರಣಗಳು ಹೆಚ್ಚಾಗುತ್ತಿದ್ದು ಜನರ ಆತಂಕವನ್ನು ಹೆಚ್ಚಿಸಿದೆ.
ಕಳೆದ ವಾರ ಕಲಬುರಗಿ ಜಿಲ್ಲೆಯ ಹಲವು ಗ್ರಾಮದಲ್ಲಿ ವಾಂತಿ, ಭೇದಿ ಪ್ರಕರಣಗಳು ವರದಿಯಾಗಿದ್ದವು. ಇದೀಗ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೆಂಚನಪಳ್ಳಿ ಗ್ರಾಮದಲ್ಲಿ ವಾಂತಿ ಭೇದಿ ಉಲ್ಭಣವಾಗಿದ್ದು, ಕಲುಷಿತ ನೀರು ಕುಡಿದು 15 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ.
ಪೆಂಚನಪಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ವಾಂತಿ ಭೇದಿ ಪ್ರಕರಣಗಳು ಹೆಚ್ಚಾಗಿವೆ. ಅಸ್ವಸ್ಥರನ್ನು, ಚಿಂಚೋಳಿ ಸರ್ಕಾರಿ ಆಸ್ಪತ್ರೆ, ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಗ್ರಾಮಸ್ಥರಿಗೆ ವಾಂತಿ ಭೇದಿ ಹೆಚ್ಚಾಗಲು ಅಶುದ್ಧ ನೀರೆ ಕಾರಣವಾಗಿದೆ. ಶುದ್ದ ಕುಡಿಯುವ ನೀರು ಪೂರೈಕೆ ಮಾಡದ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮಕ್ಕೆ ನೀರು ಪೂರೈಕೆ ಮಾಡುವ ವ್ಯವಸ್ಥೆ ಹಾಳಾಗಿ ಹೋಗಿದೆ. ಕೂಡಲೇ ಶುದ್ದ ಕುಡಿಯುವ ನೀರು ಪೂರೈಕೆ ಮಾಡಬೇಕು ಅಂತ ಆಗ್ರಹಿಸಿದ್ದಾರೆ.