• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಶ್ರಮ – ರಾಧಾಕೃಷ್ಣ ದೊಡ್ಡಮನಿ.

ಪ್ರತಿಧ್ವನಿ by ಪ್ರತಿಧ್ವನಿ
April 16, 2024
in Top Story, ದೇಶ
0
ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಶ್ರಮ – ರಾಧಾಕೃಷ್ಣ ದೊಡ್ಡಮನಿ.
Share on WhatsAppShare on FacebookShare on Telegram
ADVERTISEMENT

ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ‌ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಯಾಗಲಿದ್ದು ತಮಗೆ ಮತ ಹಾಕುವಂತೆ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮನವಿ ಮಾಡಿದರು.

ಕಲಬುರಗಿ ನಗರದ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಏರ್ಪಡಿಸಲಾಗಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಮತಯಾಚಿಸಿ ಅವರು ಮಾತನಾಡುತ್ತಿದ್ದರು.ದಕ್ಷಿಣ ಕ್ಷೇತ್ರದ ಮತದಾರರು ಅಲ್ಲಮಪ್ರಭು ಪಾಟೀಲ ಅವರಿಗೆ ಬೆಂಬಲ ನೀಡಿದಂತೆ ತಮಗೂ ಆಶೀರ್ವಾದ ನೀಡಬೇಕು. ನಾನು ಗೆದ್ದರೆ ಕ್ಷೇತ್ರದ ಅಭಿವೃದ್ದಿ ಮಾಡುತ್ತೇನೆ ಎಂದರು.

ಗ್ರಾಮೀಣಾಭಿವೃದ್ಧಿ ಹಾಗೂ ಒಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳನ್ನು ನಿಮ್ಮ ಮನೆಗೆ ತಲುಪಿಸಿದ್ದೇವೆ. ಕೆಲಸ ಮಾಡಿದ್ದೇವೆ ಅದಕ್ಕೆ ಕೂಲಿ ಕೊಡಿ ಎಂದು ವಿನಂತಿಸುತ್ತಿದ್ದೇವೆ ಎಂದರು.

ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳ ಲಾಭ ಫಲಾನುಭವಿಗಳಿಗೆ ತಲುಪುತ್ತಿದೆ. ಅನ್ನ ಭಾಗ್ಯ ಯೋಜನೆ 21 ಲಕ್ಷ ಫಲಾನುಭವಿಗಳಿಗೆ ತಲುಪಿದ್ದರೆ, ಶಕ್ತಿ ಯೋಜನೆಯಡಿಯಲ್ಲಿ ಪ್ರತಿನಿತ್ಯ ಸುಮಾರು 65 ಲಕ್ಷ ಮಹಿಳೆಯರು ಲಾಭ ಪಡೆಯುತ್ತಿದ್ದಾರೆ. ಯುವನಿಧಿ ಯೋಜನೆಯಡಿಯಲ್ಲಿ ಯುವಕರಿಗೆ ಪ್ರತಿ ತಿಂಗಳು ರೂ 1500- ರೂ 3000 ವರೆಗೆ ಆರ್ಥಿಕ ಸಹಾಯ ನೀಡಲಾಗುತ್ತಿದೆ. ಆರ್ಥಿಕ ಸಮಾನತೆ ಹಾಗೂ ಸ್ವಾಭಿಮಾನದ ಜೀವನ ನಡೆಸಲು ಈ ಯೋಜನೆಗಳು ಸಹಕಾರಿಯಾಗಿವೆ. ಯಾವುದೇ ಜಾತಿ ಧರ್ಮಕ್ಕೆ ಸೀಮಿತಗೊಳಿಸದೆ ಎಲ್ಲರಿಗೂ ಸೌಲಭ್ಯ ನೀಡಲಾಗುತ್ತಿದೆ. ಈ ಯೋಜನೆಗಳನ್ನು ಬಿಜೆಪಿಯವರು ಬಿಟ್ಟಿ ಭಾಗ್ಯ ಎನ್ನುತ್ತಿದ್ದಾರೆ. ಅವರಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು.

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ‘ಮಹಿಳೆಯರು ದಾರಿ ತಪ್ಪುತ್ತಿದ್ದಾರೆ’ ಎನ್ನುವ ಹೇಳಿಕೆಯನ್ನು ಪ್ರಸ್ತಾಪಿಸಿದ ಪ್ರಿಯಾಂಕ್ ಖರ್ಗೆ, ಮಕ್ಕಳಿಗೆ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ಕೊಡುವುದು, ಸಾಲ ತೀರಿಸುವುದನ್ನು ದಾರಿ ತಪ್ಪುವುದು ಎನ್ನಬೇಕಾ? ಈ ಸಲ ನೀವೆಲ್ಲ ಸೇರಿ ಬಿಜೆಪಿಯನ್ನು ದಾರಿ ತಪ್ಪಿಸಿ ಎಂದು ಸಭೆಯಲ್ಲಿದ್ದ ಮಹಿಳೆಯರಿಗೆ ಹೇಳಿದರು.ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಿದ ಪ್ರಿಯಾಂಕ್ ಖರ್ಗೆ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರಿಗೆ ಮತ ನೀಡಿ ಎಂದು ಮನವಿ ಮಾಡಿದರು.ಶಾಸಕರಾದ ಅಲ್ಲಮಪ್ರಭು ಪಾಟೀಲ್ ಮಾತನಾಡಿ ಬಿಜೆಪಿ ಭಾವನಾತ್ಮಕವಾಗಿ ಚುನಾವಣೆಗಳನ್ನು ಎದುರಿಸಿದೆ ಹೊರತು ಅಭಿವೃದ್ದಿ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಿಲ್ಲ. ಜಿಲ್ಲೆಯಲ್ಲಿ ತೀವ್ರ ಬರಗಾಲವಿದೆ. ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಈ ಬಗ್ಗೆ ಸಂಸದ ಉಮೇಶ ಜಾಧವ ಬಾಯಿ ಬಿಟ್ಟಿಲ್ಲ ಎಂದು ಟೀಕಿಸಿದರು.ಮುಖಂಡ ನೀಲಕಂಠರಾವ ಮೂಲಗೆ ಮಾತನಾಡಿ ಐದು ವರ್ಷದಲ್ಲಿ ಒಂದು ರೈಲು ಬಿಟ್ಟಿದ್ದೇ ಸಂಸದ ಉಮೇಶ ಜಾಧವ ಸಾಧನೆ. ಉಳಿದಂತೆ ಬರೀ ರೀಲೆ ಬಿಟ್ಟಿದ್ದಾರೆ ಎಂದರು.ವೇದಿಕೆಯ ಮೇಲೆ ಡಿಸಿಸಿ ಅಧ್ಯಕ್ಷರಾದ ಜಗದೇವ ಗುತ್ತೇದಾರ, ರಾಜಗೋಪಾಲರೆಡ್ಡಿ, ಪವನ ವಳಕೇರಿ, ಚಂದ್ರಲಾಪರಮೇಶ್ವರಿ, ಮಜರ್ ಖಾನ್, ಪ್ರವೀಣ್ ಹರವಾಳ, ಫಾರೂಕ್‌ಸೇಟ್ ಸೇರಿದಂತೆ ಹಲವರಿದ್ದರು.

DK Suresh: ಡಿ.ಕೆ.ಸುರೇಶ್​ ಬೃಹತ್​ ರ್ಯಾಲಿ ಮೂಲಕ ಭರ್ಜರಿ ಮತಯಾಚನೆ #pratidhvani
Tags: 2024electioncongressgovernmentcurrentnewselectionnewsmallikarjunkhargepoliticalnewspriyankakhargeRadhakrishnadoddamani
Previous Post

ಕಿಚ್ಚ ಸುದೀಪ್ ಜೊತೆ ದೊಡ್ಮನೆ ಕುಡಿ.. ಯುವ ಸಿನಿಮಾ ನೋಡಿ ಅಭಿನಯ ಚಕ್ರವರ್ತಿ ಖುಷ್..

Next Post

T20 ಕ್ರಿಕೆಟ್ ನಲ್ಲಿ SRH ವಲ್ಡ್ ರೆಕಾರ್ಡ್..! RCB ಬೌಲರ್ಸ್ ಬೆಂಡೆತ್ತಿದ ಹೈದ್ರಾಬಾದ್ ಟೀಮ್

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post
T20 ಕ್ರಿಕೆಟ್ ನಲ್ಲಿ SRH ವಲ್ಡ್ ರೆಕಾರ್ಡ್..! RCB ಬೌಲರ್ಸ್ ಬೆಂಡೆತ್ತಿದ ಹೈದ್ರಾಬಾದ್ ಟೀಮ್

T20 ಕ್ರಿಕೆಟ್ ನಲ್ಲಿ SRH ವಲ್ಡ್ ರೆಕಾರ್ಡ್..! RCB ಬೌಲರ್ಸ್ ಬೆಂಡೆತ್ತಿದ ಹೈದ್ರಾಬಾದ್ ಟೀಮ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada