• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿಯ ಪಥ, ಅಭಿವೃದ್ಧಿಯ ರಥ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
June 14, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

“ಕಾಂಗ್ರೆಸ್ ಸರ್ಕಾರದ ಸಚಿವರು, ಶಾಸಕರು ಹಾಗೂ ಸಂಸದರು ಸೇರಿ ಎಲ್ಲಾ ರಂಗದಲ್ಲಿಯೂ ಕಲ್ಯಾಣ ಕರ್ನಾಟಕವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿದ್ದಾರೆ, ಅಭಿವೃದ್ಧಿಯ ರಥ ಎಳೆಯುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ADVERTISEMENT

ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಆರೋಗ್ಯ ಆವಿಷ್ಕಾರ ಯೋಜನೆಯಡಿ ಆರೋಗ್ಯ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು.

“ಅಧಿಕಾರ ನಶ್ವರ, ಸಾಧನೆಗಳು ಅಜರಾಮರ, ಆದರೆ ಮತದಾರರೇ ಈಶ್ವರ. ಹೀಗಾಗಿ ನಿಮಗೆ ಅಭಿನಂದನೆ ಹೇಳಲು ನಾವು ಇಲ್ಲಿಗೆ ಬಂದಿದ್ದೇವೆ. ಕಲ್ಯಾಣ ಕರ್ನಾಟಕದ ಜನರು ಕಾಂಗ್ರೆಸ್ ಪಕ್ಷಕ್ಕೆ, ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವಕ್ಕೆ, ಸಿದ್ದರಾಮಯ್ಯ ಅವರ ಆಡಳಿತಕ್ಕೆ ಮೆಚ್ಚಿ ಈ ಭಾಗದಲ್ಲಿ ಆರು ಸಂಸದರನ್ನು ಆಯ್ಕೆ ಮಾಡಿ ದೇಶಕ್ಕೆ ದೊಡ್ಡ ಸಂದೇಶ ರವಾನಿಸಿದ್ದೀರಿ.

ದೇವರು ನಮಗೆ ಎರಡು ಆಯ್ಕೆ ಕೊಟ್ಟಿದ್ದಾನೆ. ಒಂದು ಕೊಟ್ಟು ಹೋಗುವುದು, ಮತ್ತೊಂದು ಬಿಟ್ಟು ಹೋಗುವುದು. ನಿಮ್ಮ ಬೆಂಬಲದಿಂದ 140 ಶಾಸಕರ ಸಂಖ್ಯಾಬಲದಲ್ಲಿ ನಮ್ಮ ಸರ್ಕಾರ ರಚನೆಯಾಗಿದೆ. ನಾವು ಅಧಿಕಾರಕ್ಕೆ ಬಂದ ಮೊದಲ ದಿನ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಅನುಮೋದನೆ ನೀಡಿದ್ದೆವು. ನಿಮ್ಮ ಈ ಭಾಗದ ಸಚಿವರಾದ ಪ್ರಿಯಾಂಕ್ ಖರ್ಗೆ, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಜಿಲ್ಲಾ ಉಸ್ತುವಾರಿ ಸಚಿವರಾದ ದರ್ಶನಾಪುರ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸಂಸದರಾದ ರಾಧಕೃಷ್ಣ, ಬಿ.ವಿ.ನಾಯಕ್ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಸೇರಿ ಕಲ್ಯಾಣ ಪಥವನ್ನು ಅಭಿವೃದ್ಧಿಯ ಪಥವನ್ನಾಗಿ ಮಾಡಿದ್ದಾರೆ. ಇಲ್ಲಿ ಸೇರಿರುವ ಜನಸಮೂಹವೇ ಇದಕ್ಕೆ ಸಾಕ್ಷಿ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಮೂಲಕ ಹೊಸ ಸಂದೇಶ ರವಾನಿಸಲಾಗಿದೆ. ಶಿಕ್ಷಣ, ಆರೋಗ್ಯ, ರಸ್ತೆ, ಗ್ರಾಮೀಣಾಭಿವೃದ್ಧಿ, ಉದ್ಯೋಗ ಸೇರಿ ಎಲ್ಲಾ ರಂಗದಲ್ಲೂ ಅಭಿವೃದ್ಧಿ ಮಾಡಲಾಗುತ್ತಿದೆ. ಇಂದು ಆರೋಗ್ಯ ಕ್ಷೇತ್ರದಲ್ಲಿ ರೂ.416 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಬೆಂಗಳೂರು ನಂತರ ಹೈದರಾಬಾದ್ ಕರ್ನಾಟಕ ಎರಡನೇ ಸ್ಥಾನವನ್ನು ಅಲಂಕರಿಸುವಂತೆ ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರದ ಕಾರ್ಮಿಕ ಸಚಿವರಾಗಿದ್ದಾಗ ಈ ಭಾಗದ ಜನರ ಆರೋಗ್ಯ ಸುಧಾರಣೆಗೆ ಅತಿ ದೊಡ್ಡ ಇಎಸ್ ಐ ಆಸ್ಪತ್ರೆ ನಿರ್ಮಿಸಿ ಹೊಸ ಇತಿಹಾಸ ಬರೆದಿದ್ದಾರೆ.

ನಮ್ಮ ಜಿಲ್ಲೆಗಳಿಗಿಂತ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಹೆಚ್ಚು ಪ್ರಗತಿ ಸಾಧಿಸುತ್ತಿವೆ. ಯುಪಿಎ ಸರ್ಕಾರದಲ್ಲಿ ಮಲ್ಲಿಕಾರ್ಜುನ ಖರ್ಗೆ, ಮನಮೋಹನ್ ಸಿಂಗ್, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಂದಾಗಿ ಈ ಭಾಗಕ್ಕೆ 371ಜೆ ಮೂಲಕ ವಿಶೇಷ ಸ್ಥಾನಮಾನ ನೀಡಲಾಗಿದೆ. ಇದನ್ನು ಪಡೆದ ನೀವೆ ಪುಣ್ಯವಂತರು. ಕಾಂಗ್ರೆಸ್ ಪಕ್ಷದ ಈ ಕೊಡುಗೆಯನ್ನು ನೀವು ನಿಮ್ಮ ಮುಂದಿನ ಪೀಳಿಗೆಗಳು ಸ್ಮರಿಸಬೇಕು.

ನಾವು ಕೇವಲ ಗ್ಯಾರಂಟಿ ಬಗ್ಗೆ ಮಾತನಾಡುವುದಿಲ್ಲ. ಎಲ್ಲಾ ರಂಗಗಳಲ್ಲಿ ಸಾಧಿಸಿರುವ ಪ್ರಗತಿ ಬಗ್ಗೆ ಮಾತನಾಡುತ್ತೇವೆ. ವಿರೋಧ ಪಕ್ಷಗಳು ಏನೇ ಟೀಕೆ ಮಾಡಲಿ. ನಾವು ಭಾವನೆಗಿಂತ ಜನರ ಬದುಕು ಸುಧಾರಿಸಲು ರಾಜಕಾರಣ ಮಾಡುತ್ತೇವೆ. ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದ ಜನರನ್ನು ರಕ್ಷಿಸಲು ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ, ಯುವನಿಧಿ ಯೋಜನೆಗಳನ್ನು ನೀಡಿದ್ದೇವೆ.

ಯುಪಿಎ ಸರ್ಕಾರದ ಅವಧಿಯಲ್ಲಿ ಉದ್ಯೋಗ ಖಾತರಿ, ಶೈಕ್ಷಣಿಕ ಹಕ್ಕು, ಅರಣ್ಯ ಭೂಮಿ ಹಕ್ಕು ಕಾಯ್ದೆ, ಆಹಾರ ಭದ್ರತೆ ಸೇರಿದಂತೆ ಅನೇಕ ಕ್ರಾಂತಿಕಾರಕ ಕಾನೂನು ತಂದಿದ್ದಾರೆ. ಇಂದಿರಾ ಗಾಂಧಿ ಅವರು 50 ವರ್ಷಗಳ ಹಿಂದೆ ಅಂಗನವಾಡಿಗಳನ್ನು ಆರಂಭಿಸಿ ಮಕ್ಕಳಿಗೆ ಆರೋಗ್ಯ ಹಾಗೂ ಶಿಕ್ಷಣ ನೀಡಲು ಮುಂದಾದರು. ಅವರ ಈ ಕೆಲಸವನ್ನು ಇಡೀ ವಿಶ್ವ ಶ್ಲಾಘಿಸಿತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ಸರ್ವರಿಗೂ ಸಮಬಾಳು, ಸಮಪಾಲು ತತ್ವದ ಮೇಲೆ ಕಾರ್ಯಕ್ರಮ ರೂಪಿಸಿಕೊಂಡು ಬಂದಿದೆ.

ಈ ಭಾಗದ ಶಾಸಕರು, ಮಂತ್ರಿಗಳು ಒಟ್ಟಾಗಿ ಕಲ್ಯಾಣ ರಥವನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಅವರಿಗೆ ನಾನು ಶುಭಕೋರುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅವರು ಶೋಷಿತ ವರ್ಗಗಳಿಗೆ, ಸಾಮಾಜಿಕವಾಗಿ ಹಿಂದುಳಿದವರಿಗೆ ಸಾಮಾಜಿಕ ನ್ಯಾಯ ನೀಡಲು ಮುಂದಾಗಿದ್ದಾರೆ. ವಿರೋಧ ಪಕ್ಷಗಳು ಏನೇ ಟೀಕೆ ಮಾಡಿದರೂ ಎಲ್ಲರಿಗೂ ಸಾಮಾಜಿಕ ನ್ಯಾಯ ನೀಡಲು ನಾವು ಬದ್ಧವಾಗಿದ್ದೇವೆ. ರಾಹುಲ್ ಗಾಂಧಿಯವರ ಚಿಂತನೆ, ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ನಾವು ಜಾತಿಗಣತಿ ಮರುಸಮೀಕ್ಷೆ ಮಾಡಲು ಮುಂದಾಗಿದ್ದೇವೆ. ಎಲ್ಲಾ ವರ್ಗ, ಸಮುದಾಯ, ಜಾತಿ, ಧರ್ಮದವರು ಈ ಅವಕಾಶವನ್ನು ಬಳಸಿಕೊಂಡು ತಮ್ಮ ಮಾಹಿತಿಯನ್ನು ಸರಿಯಾಗಿ ಒದಗಿಸಬೇಕು.

ಸಚಿವರಾದ ದಿನೇಶ್ ಗುಂಡೂರಾವ್, ಶರಣಪ್ರಕಾಶ್ ಪಾಟೀಲ್ ಅವರು ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಸಾಧನೆ ಮಾಡುತ್ತಿದ್ದಾರೆ. ನಿಮ್ಮೆಲ್ಲ ಆಶೀರ್ವಾದ, ಬೆಂಬಲ ಸದಾ ನಮ್ಮ ಮೇಲೆ ಇರಬೇಕು

Tags: Ajay SinghAnnabhagyaB V NayakDarshanapurDinesh GunduraoDK ShivakumarGruhajyotiGruhalakshmiIndira GandhiMallikarjun KhargePriyanka KhargeRadhakrishnaRahul GandhiSharanaprakash patilYadagiriYuvanidhi
Previous Post

ಮೂರು ವರ್ಷದಲ್ಲಿ 13000 ಕೋಟಿ KKRDB ಗೆ ನಮ್ಮ ಸರ್ಕಾರ ನೀಡಿ ದಾಖಲೆ ನಿರ್ಮಿಸಿದೆ: ಸಿಎಂ

Next Post

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಸಚಿವ ಕೆ.ಜೆ.ಜಾರ್ಜ್ ಸೂಚನೆ

Related Posts

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
0

ಅಂದರ್-ಬಾಹರ್ ನಲ್ಲಿ ತೊಡಗಿದ್ದವರನ್ನ ಬೇಟೆಯಾಡಿದ ಖಾಕಿ ಗದಗ ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ ಗದಗ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪೊಲೀಸರ ದಾಳಿ ಗದಗ ಎಸ್ಪಿ ರೋಹನ್ ಜಗದೀಶ್...

Read moreDetails
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
Next Post

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಸಚಿವ ಕೆ.ಜೆ.ಜಾರ್ಜ್ ಸೂಚನೆ

Recent News

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!