ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಭಾರತ್ ಜೋಡೋ ಪಾದಯಾತ್ರೆ ಮಹಾರಾಷ್ಟ್ರ ಮುಗಿಸಿ ಮಧ್ಯಪ್ರಧೇಶ ಪ್ರವೇಶಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಿದೆ.
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ಆಪ್ತ MPCC ಮಾಧ್ಯಮ ಘಟಕದ ಉಪಾಧ್ಯಕ್ಷ ನರೇಂದ್ರ ಸಲೂಜಾ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಸೇರ್ಪಡೆ ನಂತರ ಮಾತನಾಡಿರುವ ಸಲೂಜಾ 1984ರಲ್ಲಿ ನಡೆದ ಸಿಖ್ ದಂಗೆಯಲ್ಲಿ ಕಮಲನಾಥ್ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿರುವ ಕಾರಣ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
