ಸಂಸದ ಸ್ಥಾನದಿಂದ ತಮ್ಮನ್ನು ಅನರ್ಹಗೊಳಿಸಿದ ಆದೇಶಕ್ಕೆ ತಡೆ ಕೋರಿ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಸೋಮವಾರ (ಸೆಪ್ಟೆಂಬರ್ 11) ವಜಾಗೊಳಿಸಿದೆ.
ಪ್ರಜ್ವಲ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರು ತೀರ್ಪನ್ನು ಕಾಯ್ದಿರಿಸಿದ್ದರು. ಸೋಮವಾರ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರು, ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದಾರೆ.
ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವವರೆಗೆ ಅನರ್ಹತೆ ಆದೇಶಕ್ಕೆ ತಡೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಚುನಾವಣಾ ಅಕ್ರಮದ ಆಧಾರದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಸೆಪ್ಟೆಂಬರ್ 1 ರಂದು ಹೈಕೋರ್ಟ್ ತೀರ್ಪು ನೀಡಿತ್ತು.