ರಾಜ್ಯದಲ್ಲಿ ಮಿತಿಮೀರಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ.
ಈ ಕುರಿತು ಸುದ್ದಿಘೋಷ್ಠಿಯಲ್ಲಿ ಮಾತನಾಡಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಎಂಇಎಸ್ ಸಂಘಟನೆಯು ಕನ್ನಡಿಗರು ಮತ್ತು ಮರಾಠಿ ಭಾಷಿಗರ ನಡುವೆ ಉದ್ದೇಶಪೂರ್ವಕವಾಗಿ ಗಲಭೆಯನ್ನು ಸೃಷ್ಟಿಸಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕದಡಲು ಪ್ರಯತ್ನಿಸುತ್ತಿದೆ. ಡಿಸೆಂಬರ್ 31ರಂದು ಬೆಳ್ಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಮಾಡಲಾಗುವುದು ಎಂದು ಸುದ್ದಿಘೋಷ್ಠಿಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಎಂಇಎಸ್ಅನ್ನು ನಿಷೇಧಿಸುವಂತೆ ಸರ್ಕಾರಕ್ಕೆ ಡಿಸೆಂಬರ್ 29ರ ವರೆಗೂ ಸರ್ಕಾರಕ್ಕೆ ಗಡುವು ನೀಡಲಾಗುವುದು. ಒಂದು ವೇಳೆ ನಾವು ಕೊಟ್ಟಿರುವ ಗಡುವಿನಲ್ಲಿ ಸರ್ಕಾರ ವಿಫಲವಾದರೆ ರಾಜ್ಯದ್ಯಂತ ಬಂದ್ ಆಚರಣೆ ಮಾಡಲಾಗುವುದು. ಇದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ ಎಲ್ಲರೂ ಈ ಬಂದ್ಗೆ ಬೆಂಬಲ ನೀಡುವ ಮೂಲಕ ಬಂದ್ಅನ್ನು ಯಶಸ್ವಿಗೊಳಿಸಬೇಕು ಎಂದು ನಾಗರಾಜ್ ಮನವಿ ಮಾಡಿದ್ದಾರೆ.
ಬಂದ್ಗೆ ಎಲ್ಲಾ ಕನ್ನಡಪರ ಸಂಘಟನೆಗಳು ಬೆಂಬಲವನ್ನ ವ್ಯಕ್ತಪಡಿಸಿವೆ ಎಂದು ಸುದ್ದಿಘೋಷ್ಠಿಯಲ್ಲಿ ಹೇಳಿದ್ದಾರೆ. ಆದರೆ, ಬಂದ್ಗೆ ನಮ್ಮ ಬೆಂಬಲ ಇಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣ್ಗೌಡ ಹೇಳಿದ್ದಾರೆ.
ಈಗಷ್ಟೇ ಜನ ಕೋವಿಡ್ 19ನಿಂದ ಚೇತರಿಸಿಕೊಳ್ಳುತ್ತಿದ್ದಾರೆ ಬಂದ್ ಮಾಡುವುದರಿಂದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ. ನಾವು ವಿಭಿನ್ನ ರೀತಿಯಲ್ಲಿ ಎಂಇಎಸ್ ವಿರುದ್ದ್ ಪ್ರತಿಭಟಿಸುತ್ತೇವೆ ಎಂದು ನಾರಾಯಣಗೌಡ ತಿಳಿಸಿದ್ದಾರೆ.