ತಪ್ಪೊಪ್ಪಿಕೊಂಡು ಕನ್ನಡಿಗರ ಕ್ಷಮೆಯಾಚಿಸಿದ ಗೂಗಲ್‌

ಗೂಗಲ್‌ನಲ್ಲಿ ಕನ್ನಡ ಭಾಷೆಗೆ ಅವಹೇಳನ ಮಾಡಿರುವುದಕ್ಕೆ ನಿನ್ನೆ ಕನ್ನಡಿಗರು ಆಕ್ರೋಶಗೊಂಡು ಸಾಮಾಜಿಕ ಜಾಲತಾಣದಲ್ಲಿ ಸಿಡಿದ್ದೆದ್ದ ಬೆನ್ನೆಲೆ ಗೂಗಲ್‌ ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದೆ.

ಭಾರತದ ಕೆಟ್ಟ ಭಾಷೆ ಯಾವುದು ಎಂದು ನೆಟ್ಟಿಗರು ಗೂಗಲ್ ನಲ್ಲಿ ಸರ್ಜ್ ಮಾಡಿದರೆ ಕನ್ನಡ ಎಂಬ ಉತ್ತರ ಬರುತಿತ್ತು. ಇದು ಕನ್ನಡಿಗರ ಸ್ವಾಭಿಮಾನ ಮತ್ತು ಆತ್ಮಗೌರವವನ್ನು ಕೆದಕಿತ್ತು. ರಾಜಕೀಯ ನಾಯಕರು, ಪತ್ರಕರ್ತರು, ಸಾಹಿತಿಗಳು ಸೇರಿದಂತೆ ಕನ್ನಡಿಗರು ಒಕ್ಕೊರಳಿನಿಂದ ಗೂಗಲ್‌ ವಿರುದ್ಧ ತಿರುಗಿ ಬಿದ್ದಿದ್ದರು.  ಕನ್ನಡ ಭಾಷೆ ಬಗ್ಗೆ ಗೌರವಿಲ್ಲದೆ ವರ್ತಿಸಿದರೆ ಅಥವಾ ಕನ್ನಡಕ್ಕೆ ಅಪಮಾನ ಎಸಗಿದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ ಬೆನ್ನೆಲೆ ಗೂಗಲ್‌ ಕ್ಷಮೆಯಾಚಿಸಿದೆ.

debtconsolidationsquad.com ಎಂಬ ಜಾಲತಾಣದಲ್ಲಿ ಇದು ಮೊದಲು ಕಂಡುಬಂದಿದ್ದು, ಕನ್ನಡಿಗರು ವೆಬ್‌ಸೈಟ್‌ ವಿರುದ್ಧ ರಿಪೋರ್ಟ್‌ ಮಾಡಲು ಆರಂಭಿಸಿದ್ದರು. ಎಚ್ಚೆತ್ತ ಗೂಗಲ್‌ ಈ ಪುಟವನ್ನು ತೆಗೆದು ಹಾಕಿದೆ.

ತಪ್ಪೊಪ್ಪಿಕೊಂಡು ಕನ್ನಡಿಗರ  ಕ್ಷಮೆಯಾಚಿಸಿದ ಗೂಗಲ್

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...