• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕನ್ನಡಪರ ಹೋರಾಟಗಾರು ಕಾನೂನು ಕೈಗೆತ್ತಿಕೊಂಡು ಆಸ್ತಿಪಾಸ್ತಿ ಹಾನಿ ಮಾಡೋದು ಸಹಿಸಲ್ಲ: ಡಿಸಿಎಂ ಡಿ.ಕೆ.ಶಿ

Any Mind by Any Mind
December 28, 2023
in ಕರ್ನಾಟಕ
0
ಕಾಂಗ್ರೆಸ್‌ 141 ಕ್ಷೇತ್ರಗಳಲ್ಲಿ ಗೆಲ್ಲುವುದು ಖಚಿತ: ಡಿಕೆಶಿ
Share on WhatsAppShare on FacebookShare on Telegram

ADVERTISEMENT

“ನಾವೆಲ್ಲರೂ ಕನ್ನಡ ಉಳಿಸಬೇಕು. ಕನ್ನಡಪರ ಹೋರಾಟಗಾರರ ಮೇಲೆ ನಮಗೆ ಗೌರವವಿದೆ. ಹಾಗಂತ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ. ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಸದಾಶಿವನಗರ ನಿವಾಸ ಹಾಗೂ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, “ಕನ್ನಡ ಉಳಿಸಿ, ಬೆಳೆಸುವ ಹೋರಾಟಕ್ಕೆ ನಮ್ಮ ಅಭ್ಯಂತರವಿಲ್ಲ. ಹೋರಾಟದ ಹೆಸರಿನಲ್ಲಿ ಆಸ್ತಿಪಾಸ್ತಿ ಹಾನಿ ಮಾಡುವುದನ್ನು ನಾವು ಒಪ್ಪುವುದಿಲ್ಲ, ಸಹಿಸುವುದೂ ಇಲ್ಲ. ಇದರಿಂದ ಕರ್ನಾಟಕದ ಗೌರವ, ಘನತೆಗೆ ಧಕ್ಕೆಯಾಗುತ್ತದೆ. ಕಾನೂನು ಪಾಲನೆ ಎಲ್ಲರ ಕರ್ತವ್ಯ. ನೀವು ಹೋರಾಟ ಮಾಡುವುದಾದರೆ ಮಾಡಿ, 60% ನಾಮಫಲಕ ಹಾಕಬೇಕು ಎನ್ನುವುದನ್ನು ಕೇಳಲು ಒಂದು ಇತಿಮಿತಿ ಇದೆ.

ಈ ಹಿಂದೆ ಯಾರೋ ಒಬ್ಬರು ದೂರು ನೀಡಿದರು ಎಂದು ನಾರಾಯಣಗೌಡರ ಮೇಲೆ ಕೇಸ್ ದಾಖಲಾದಾಗ, ಅವರ ವಿರುದ್ಧ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಪೊಲೀಸ್ ಅಧಿಕಾರಿಗಳ ಜತೆ ನಾನೇ ಮಾತನಾಡಿದ್ದೆ. ಕನ್ನಡ ಕಡ್ಡಾಯ ಮಾಡಲು ನೋಟೀಸ್ ನೀಡೋಣ. ಆದರೆ ಕಾನೂನು ಕೈಗೆತ್ತಿಕೊಳ್ಳಬಾರದು. ನಾರಾಯಣಗೌಡರಿಗೆ ಈ ಮಾತನ್ನು ಇವತ್ತೂ ಹೇಳುತ್ತೇನೆ, ಮುಂದೆಯೂ ಹೇಳುತ್ತೇನೆ.

ಪ್ರತಿಭಟನೆ ಮಾಡಲಿ, ಧಿಕ್ಕಾರ ಕೂಗಲಿ. ನಾವು ತಪ್ಪು ಮಾಡಿದರೆ ನಮ್ಮ ಮನೆ ಮುಂದೆಯೂ ಬಂದು ಪ್ರತಿಭಟನೆ ಮಾಡಲಿ. ನಾವೂ ಕನ್ನಡಿಗರೇ. ಕನ್ನಡದ ಬಗ್ಗೆ ನಮಗೂ ಬದ್ಧತೆ ಇದೆ. ಸಚಿವ ಸಂಪುಟದಲ್ಲಿ ನಿಮ್ಮ ಟಿಪ್ಪಣಿಗಳೇನೆ ಇದ್ದರೂ ಕನ್ನಡದಲ್ಲೇ ಇರಬೇಕು ಎಂದು ಮುಖ್ಯಮಂತ್ರಿಗಳು ಸಚಿವರುಗಳಿಗೆ ಸ್ಪಷ್ಟವಾಗಿ ಹೇಳಿದ್ದಾರೆ. ಕನ್ನಡ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ.”

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪಾಠ ಕಲಿಸುತ್ತೇವೆ ಎಂಬ ನಾರಾಯಣಗೌಡರ ಎಚ್ಚರಿಕೆ ವಿಚಾರವಾಗಿ ಕೇಳಿದಾಗ, “ನಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಕನ್ನಡಪರ ಹೋರಾಟಗಾರರ ಸಹಕಾರ ಇಲ್ಲ ಎಂದು ನಾನು ಹೇಳುವುದಿಲ್ಲ. ಹಾಗೆಂದು ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರು ಏನು ಬೇಕಾದರೂ ಮಾಡಲಿ. ಅವರು ತಪ್ಪು ಮಾಡಿದ್ದಾರೆ. ಕಾನೂನು ಕೈಗೆತ್ತಿಕೊಳ್ಳಲು ನಾವು ಬಿಡುವುದಿಲ್ಲ. ಅನೇಕರು ಇಲ್ಲಿ ಬಂದು ಬಂಡವಾಳ ಹೂಡಿಕೆ ಮಾಡಿದ್ದಾರೆ. ಹೊರಗಡೆಯಿಂದ ಬಂದವರು ಇಲ್ಲಿ ಬದುಕುತ್ತಿದ್ದಾರೆ. ಅವರಿಗೆ ಕನ್ನಡ ಬಳಕೆ ಬಗ್ಗೆ ಹೇಳೋಣ. ಹಾಗೆಂದು ಅವರನ್ನು ಬೆದರಿಸಲು ಅವಕಾಶವಿಲ್ಲ” ಎಂದು ತಿಳಿಸಿದರು.

ಅನೇಕರು ಕನ್ನಡ ನಾಮಫಲಕ ಹಾಕದಿರುವ ಬಗ್ಗೆ ಕೇಳಿದಾಗ, “ಯಾರೆಲ್ಲಾ ಕನ್ನಡ ನಾಮಫಲಕ ಹಾಕಿಲ್ಲ ಅವರಿಗೆ ನಾವು ನೊಟೀಸ್ ಜಾರಿ ಮಾಡುತ್ತೇವೆ” ಎಂದು ತಿಳಿಸಿದರು.

ಕೋವಿಡ್ ಸಮಯದಲ್ಲಿ ಬಿಜೆಪಿ ಸರ್ಕಾರ ಅಕ್ರಮ ಮಾಡಿತ್ತು ಎಂಬ ಯತ್ನಾಳ್ ಅವರ ಹೇಳಿಕೆ ವಿಚಾರವಾಗಿ ಕೇಳಿದಾಗ, “ಇಲ್ಲಿ ಆ ವಿಚಾರ ಮಾತನಾಡುವುದು ಬೇಡ. ನಾವು ಅದೇ ವಿಚಾರವಾಗಿ ಜನರ ಗಮನ ಸೆಳೆದಿದ್ದೆವು. ಈಗ ಅವರು ಸೆಳೆಯುತ್ತಿದ್ದಾರೆ. ಬಹಳ ಸಂತೋಷ. ಮುಂದೆ ಅದರ ಬಗ್ಗೆ ಚರ್ಚೆ ಮಾಡೋಣ.” ಎಂದರು.

ಅನೇಕ ಅಂಗಡಿ ಮುಂಗಟ್ಟುಗಳು ಮುಚ್ಚಿರುವ ವಿಚಾರವಾಗಿ ಕೇಳಿದಾಗ, “ಎಲ್ಲಾ ವ್ಯಾಪಾರಿಗಳು ಸರ್ಕಾರದ ಆದೇಶ ಪಾಲನೆ ಮಾಡಬೇಕು. ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಕಡ್ಡಾಯವಾಗಿ ಬಳಸಬೇಕು. ಸರ್ಕಾರ ನಿಮ್ಮ ಹಾಗೂ ನಿಮ್ಮ ಹಿತಾಸಕ್ತಿ ಕಾಯಲು ಬದ್ಧವಾಗಿದೆ” ಎಂದು ಹೇಳಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಷ್ಟ್ರೀಯ ಹೆದ್ದಾರಿ ಘೋಷಣೆ ಆದಾಗ ಪ್ರತಾಪ್ ಸಿಂಹ ಸಂಸದನೇ ಆಗಿರ್ಲಿಲ್ಲ, ಸುಮ್ಮನೆ ಬುರುಡೆ ಬಿಡ್ತಾನೆ: ಸಚಿವ ಡಾ ಹೆಚ್ ಸಿ ಮಹದೇವಪ್ಪ

Next Post

ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು : ಸಿಎಂ ಸಿದ್ದರಾಮಯ್ಯ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು : ಸಿಎಂ ಸಿದ್ದರಾಮಯ್ಯ

ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು : ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada