• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೋರ್ಡಿನ ಅರ್ಧ ಭಾಗ ಕಡ್ಡಾಯ ಕನ್ನಡ ಇರಬೇಕು : ಸಿಎಂ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ

Any Mind by Any Mind
December 28, 2023
in ಕರ್ನಾಟಕ
0
ಬೋರ್ಡಿನ ಅರ್ಧ ಭಾಗ ಕಡ್ಡಾಯ ಕನ್ನಡ ಇರಬೇಕು : ಸಿಎಂ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ
Share on WhatsAppShare on FacebookShare on Telegram

ADVERTISEMENT

ಕನ್ನಡ ನಾಮಫಲ ಅಳವಡಿಕೆಗೆ ಒತ್ತಾಯಿಸಿ ನಿನ್ನೆ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಹಲವು ಶಾಪಿಂಗ್ ಸೆಂಟರ್ ಗಳ ಬೋರ್ಡ್ ಕಿತ್ತು ಹಾಕಿದ್ದರು. ಈ ಕುರಿತು ಸಿದ್ದರಾಮಯ್ಯ ಗಂಭೀರ ಪರಿಗಣಿಸಿ ಬೆಂಗಳೂರಿನಲ್ಲಿರುವ ಅಂಗಡಿಗಳಲ್ಲಿ ಶೇ 60ರಷ್ಟು ಕನ್ನಡ ಇರಬೇಕು ಎಂದು ಹೇಳಿದ್ದರು. ಈಗ ಉನ್ನತ ಮಟ್ಟದ ಸಭೆ ನಡೆಸಿ ಒಂದಷ್ಟು ನಿಯಮಗಳನ್ನು ಜಾರಿಗೆ ತರಲು ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿರುವ ಅಂಗಡಿಗಳಲ್ಲಿ ಶೇ 60ರಷ್ಟು ಕನ್ನಡ ಇರಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಫೆಬ್ರವರಿ 28ರ ಒಳಗೆ ಎಲ್ಲಾ ಅಂಗಡಿ ಮಳಿಗೆಗಳಲ್ಲಿಯೂ ಇದು ಕಡ್ಡಾಯವಾಗಿ ಜಾರಿಗೆ ಬರಬೇಕು. ಇದನ್ನು ಪಾಲಿಸದೆ ಇದ್ದರೆ ವ್ಯಾಪಾರ ಪರವಾನಗಿಯನ್ನು ರದ್ದುಗೊಳಿಸಬಹುದು ಅಥವಾ ವಹಿವಾಟಿಗೆ ಕಾನೂನಾತ್ಮಕ ಪರಿಣಾಮಗಳನ್ನು ಎದುರಿಸಬೇಕಾಗಬಹುದು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದರು.

ಉನ್ನತ ಮಟ್ಟದ ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಅದರ ಮುಖ್ಯಾಂಶಗಳನ್ನು ತಿಳಿಸಿದ್ದಾರೆ:-

• ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6) ರ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ನ್ಯಾಸಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ.

• ಇದಕ್ಕೂ ಮೊದಲು 2018 ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರುವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು.

• ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿರತಕ್ಕದ್ದು. ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರತಕ್ಕದ್ದು ಎಂದು ತಿಳಿಸಲಾಗಿದೆ.

• ಈ ಕಾಯ್ದೆ ಇಡೀ ರಾಜ್ಯಕ್ಕೆ ಅನ್ವಯಿಸುತ್ತದೆ.

• ಇದನ್ನು ಸಹ ಅನುಷ್ಠಾನಗೊಳಿಸಲಾಗುವುದು. ಈ ಕಾಯ್ದೆಯ ಅಧಿಸೂಚನೆ ಹೊರಡಿಸಲು ಹಾಗೂ ನಿಯಮಗಳನ್ನು ರೂಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು.

• ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ. ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳ ಬಯಸುತ್ತೇನೆ.

• 3-3-2022ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯವು ಪ್ರತಿಭಟನೆಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತ್ರ ನಡೆಸಬೇಕು. ರಾಜ್ಯ ಸರ್ಕಾರವು ಇದನ್ನು ಖಾತರಿಪಡಿಸಬೇಕು ಎಂದು ಸ್ಪಷ್ಟವಾದ ಆದೇಶ ಹೊರಡಿಸಿದೆ.

• ರಾಜ್ಯದ ಹಿತದೃಷ್ಟಿಯಿಂದ ಶಾಂತಿಯುತ ಪ್ರತಿಭಟನೆ ಮಾಡಿದರೆ ನಾವು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆಗಳಿರಲಿ ಯಾರಾದರೂ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡುತ್ತೇನೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ. ಎಲ್ಲ ಸಂಘಟನೆಗಳು, ಹೋರಾಟಗಾರರಲ್ಲಿ ಕಾಯ್ದೆ ಜಾರಿ ಮಾಡುತ್ತೇವೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ನ್ನು ಜಾರಿಗೊಳಿಸಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು. ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆ, ಆಡಳಿತ ಭಾಷೆ. ಇದರಲ್ಲಿ ಯಾವುದೇ ರಾಜಿ ಇಲ್ಲ.

• ಎಲ್ಲ ಖಾಸಗಿ ಸಂಸ್ಥೆಯವರು ತಮ್ಮ ನಾಮಫಲಕವನ್ನು ಶೇ. 60:40ರ ಅನುಪಾತದಲ್ಲಿ ನಿಗದಿತ ಗಡುವಿನೊಳಗೇ ಅಳವಡಿಸಬೇಕು. ಸಾರ್ವಜನಿಕರು ಆತಂಕ ಪಡಬೇಕಾಗಿಲ್ಲ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು : ಸಿಎಂ ಸಿದ್ದರಾಮಯ್ಯ

Next Post

ದೇಶಕ್ಕೆ ಎದುರಾಗಿರುವ ಸಂಕಷ್ಟ ಎದುರಿಸಿ ಸಂವಿಧಾನವನ್ನು ಉಳಿಸಬೇಕಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ದೇಶಕ್ಕೆ ಎದುರಾಗಿರುವ ಸಂಕಷ್ಟ ಎದುರಿಸಿ ಸಂವಿಧಾನವನ್ನು ಉಳಿಸಬೇಕಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇಶಕ್ಕೆ ಎದುರಾಗಿರುವ ಸಂಕಷ್ಟ ಎದುರಿಸಿ ಸಂವಿಧಾನವನ್ನು ಉಳಿಸಬೇಕಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada