• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬಿಜೆಪಿಯವರ ಬೆದರಿಕೆಗೆ ಕನ್ನಡಿಗರು ಹೆದರುವುದಿಲ್ಲ: ಡಿ.ಕೆ. ಶಿವಕುಮಾರ್ ತಿರುಗೇಟು

ಪ್ರತಿಧ್ವನಿ by ಪ್ರತಿಧ್ವನಿ
May 8, 2023
in ರಾಜಕೀಯ
0
ಬಿಜೆಪಿಯವರ ಬೆದರಿಕೆಗೆ ಕನ್ನಡಿಗರು ಹೆದರುವುದಿಲ್ಲ: ಡಿ.ಕೆ. ಶಿವಕುಮಾರ್ ತಿರುಗೇಟು
Share on WhatsAppShare on FacebookShare on Telegram

ಬೆಂಗಳೂರು:‘ಬಿಜೆಪಿಗೆ ಮತ ಹಾಕದಿದ್ದರೆ ರಾಜ್ಯಕ್ಕೆ ಕೇಂದ್ರದ ಯೋಜನೆ ನೀಡುವುದಿಲ್ಲ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆಗಳಾಗುತ್ತವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಜನರಿಗೆ ಬೆದರಿಕೆ ಹಾಕಿದ್ದಾರೆ. ಇಂತಹ ಬೆದರಿಕೆಗಳಿಗೆ ಕನ್ನಡಿಗರು ಹೆದರುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ADVERTISEMENT

‘ಬಿಜೆಪಿಯವರು ರಾಜ್ಯದ ಜನರಿಗೆ ಬೆದರಿಕೆ ಹಾಕಿ ಮತ ಪಡೆಯಲು ಮುಂದಾಗಿದ್ದಾರೆ. ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ. ಈ ದೇಶ ಒಕ್ಕೂಟ ವ್ಯವಸ್ಥೆಯಿಂದ ರೂಪುಗೊಂಡಿದೆ. ಕೇಂದ್ರ ಸರ್ಕಾರದ ಆದಾಯದಲ್ಲಿ ಶೇ.41ರಷ್ಟು ಕರ್ನಾಟಕ ರಾಜ್ಯದಿಂದ ಹೋಗುತ್ತಿದೆ. ಇದರಲ್ಲಿ ನಮಗೆ ಮರಳಿ ಬರುತ್ತಿರುವುದು ಬಿಡಿಗಾಸಿನಷ್ಟು ಮಾತ್ರ. ನಡ್ಡಾ ಅವರ ಬೆದರಿಕೆಗೆ ನಾವು ಕನ್ನಡಿಗರು ಹೆದರುವುದಿಲ್ಲ. ಯಾವುದ್ಯಾವುದಕ್ಕೋ ನಾವು ಹೆದರಲಿಲ್ಲ, ಇನ್ನು ಇದಕ್ಕೆ ಹೆದರುತ್ತೇವಾ? ಇನ್ನು ಗೃಹಮಂತ್ರಿಗಳು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಗಲಭೆಗಳಾಗುತ್ತವೆ ಎಂದು ಬೆದರಿಕೆ ಹಾಕಿದ್ದರು. ಈ ರೀತಿ ರಾಜ್ಯದ ಜನರನ್ನು ಹೆದರಿಸುತ್ತಿದ್ದಾರೆ.

ಇದು ಕರ್ನಾಟಕದ ಸ್ವಾಭಿಮಾನದ ಚುನಾವಣೆ. ಮೇಕೆದಾಟು ಪಾದಯಾತ್ರೆ ಸಮಯದಲ್ಲಿ ಬಿಜೆಪಿ ಸರ್ಕಾರ ಈ ಯೋಜನೆಗೆ 1 ಸಾವಿರ ಕೋಟಿ ಅನುದಾನ ಘೋಷಣೆ ಮಾಡಿದರು. ಈ ಡಬಲ್ ಇಂಜಿನ್ ಸರ್ಕಾರ ಇದ್ದಾಗ ನಡ್ಡಾ ಅವರು ಶಿಫಾರಸ್ಸು ಮಾಡಿ ಎಲ್ಲಾ ಇಲಾಖೆ ಅನುಮತಿ ಕೊಡಿಸಿ ಕೆಲಸ ಆರಂಭಿಸಲು ಅವರಿಂದ ಸಾಧ್ಯವಾಗಲಿಲ್ಲ. ಈ ಯೋಜನೆಯಲ್ಲಿ ಆಣೆಕಟ್ಟು ನಿರ್ಮಾಣದ ಕಾಮಗಾರಿಗೆ ಬೇಕಾದ ಭೂಮಿ ವಶಕ್ಕೆ ಪಡೆಯಲು ಸರ್ಕಾರ ಯಾಕೆ ಮುಂದಾಗಲಿಲ್ಲ? ಮಹದಾಯಿ ವಿಚಾರವಾಗಿ ಪ್ರಹ್ಲಾದ್ ಜೋಷಿ ಅವರು ಸಂಭ್ರಮಾಚರಣೆ ಮಾಡಿದರಲ್ಲಾ ಇನ್ನು ಯಾಕೆ ಕೆಲಸ ಆರಂಭಿಸಿಲ್ಲ? ಇವರು ಕೇವಲ ಈ ರೀತಿ ಸುಳ್ಳು ಹಾಗೂ ಬೆದರಿಕೆ ಒಡ್ಡುತ್ತಿದ್ದಾರೆ.

ಕರ್ನಾಟಕವೇ ಕೇಂದ್ರಕ್ಕೆ ಆದಾಯ ನೀಡಿ ಸಹಾಯ ಮಾಡುತ್ತಿದೆ. ಇಲ್ಲಿರುವ ವಿದ್ಯಾವಂತರು, ಪ್ರಜ್ಞಾವಂತರು ದೇಶಕ್ಕೆ ಆದಾಯ ನೀಡುತ್ತಿದ್ದಾರೆ. ವಿಶ್ವವೇ ಕರ್ನಾಟಕ ಹಾಗೂ ಬೆಂಗಳೂರು ಮೂಲಕ ಇಡೀ ದೇಶವವನ್ನು ನೋಡುತ್ತಿದೆ ಎಂದು ವಾಜಪೇಯಿ ಅವರೇ ಹೇಳಿದ್ದಾರೆ. ಇದು ಈ ರಾಜ್ಯದ ಶಕ್ತಿ.’

ಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು ಕೊನೆ ದಿನವಾಗಿದ್ದು, ಪಕ್ಷದ ಅಧ್ಯಕ್ಷರಾಗಿ ನಿಮ್ಮ ಆತ್ಮವಿಶ್ವಾಸ ಹೇಗಿದೆ ಎಂದು ಕೇಳಿದ ಪ್ರಶ್ನೆಗೆ, ‘ನಾನು ಕೊನೆ ದಿನ ನನ್ನ ಕ್ಷೇತ್ರ ಕನಕಪುರದಲ್ಲಿ ಮತ ಕೇಳಲು ಹೋಗುತ್ತಿದ್ದೇನೆ. ನಾಮಪತ್ರ ಸಲ್ಲಿಸುವಾಗ ಅಲ್ಲಿನ ಜನರಿಗೆ ಕೈಮುಗಿದು ಬಂದಿದ್ದೆ. ಈಗ ಮತ್ತೆ ಹೋಗುತ್ತಿದ್ದೇನೆ. ಅಲ್ಲಿ ನಮ್ಮ ಸರ್ಕಾರ ಮುಂದಿನ ದಿನಗಳಲ್ಲಿ ಏನು ಮಾಡಲಿದೆ, ಹೇಗೆ ದಕ್ಷ ಆಡಳಿತ ನೀಡುತ್ತೇವೆ. ಮಹಿಳೆಯರಿಗಾಗಿ ಪ್ರತಿ ತಾಲೂಕಿನಲ್ಲಿ ಹೆರಿಗೆ ಆಸ್ಪತ್ರೆ ಸ್ಥಾಪಿಸಿ ಉಚಿತ ಹೆರಿಗೆ ಮಾಡುವ ವ್ಯವಸ್ಥೆ ನೀಡುತ್ತೇವೆ. ಎಲ್ಲಾ ಸಮಾಜವನ್ನು ಸಮಾನವಾಗಿ ನೋಡಿ, ಶಾಂತಿಯ ತೋಟ ನೀರ್ಮಾಣ ಮಾಡುತ್ತೇವೆ. ಪಂಚಾಯ್ತಿ ಮಟ್ಟದಲ್ಲಿ ಉತ್ತಮ ಶಿಕ್ಷಣ ಸಿಗುವಂತೆ ಮಾಡುತ್ತೇವೆ. 2ನೇ ಹಂತಗಳ ನಗರಗಳಲ್ಲಿ ಉದ್ಯೋಗ ಸೃಷ್ಟಿಸಸಲು ನಮ್ಮದೇ ಆದ ಯೋಜನೆಗಳಿವೆ’ ಎಂದರು.

ನಿಮ್ಮ ಗುರಿ 113 ಮುಟ್ಟುತ್ತದೆಯೇ ಎಂದು ಕೇಳಿದಾಗ, ‘113 ನಿಮ್ಮ ಲೆಕ್ಕ. ನಮ್ಮ ಗುರಿ 141. 13ರಂದು ನೋಡಿ, 15ರಂದು ನಾವು ಸರ್ಕಾರ ರಚನೆ ಮಾಡುತ್ತೇವೆ. ಮೋದಲ ಸಂಪುಟದಲ್ಲೇ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ’ ಎಂದು ತಿಳಿಸಿದರು.

ಈ ಗ್ಯಾರಂಟಿ ಯೋಜನೆ ಜಾರಿ ಮಾಡುವ ಸಚಿವ ಸಂಪುಟ ಯಾರ ನೇತೃತ್ವದ್ದಾಗಿರುತ್ತದೆ ಎಂದು ಕೇಳಿದಾಗ, ‘ಮೇ 15ರಂದು ಮಲ್ಲಿಕಾರ್ಜುನ ಖರ್ಗೆ ಅವರು ಘೋಷಣೆ ಮಾಡಲಿದ್ದಾರೆ’ ಎಂದು ತಿಳಿಸಿದರು.

ಪಕ್ಷದ ಜಾಹೀರಾತಿನ ವಿಚಾರವಾಗಿ ಚುನಾವಣಾ ಆಯೋಗದ ನೋಟೀಸ್ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಈ ವಿಚಾರವಾಗಿ 24 ತಾಸಿನಲ್ಲಿ ಉತ್ತರ ನೀಡುವಂತೆ ಚುನಾವಣಾ ಆಯೋಗ ನೋಟೀಸ್ ನೀಡಿದ್ದು, ನಾವು ಉತ್ತರ ನೀಡಿದ್ದೇವೆ. ಈ ವಿಚಾರವಾಗಿ ಆಧಆರ ಏನು ಎಂದು ಕಳಿದ್ದು, ಅವರ ರೇಟ್ ಪಟ್ಟಿಯಲ್ಲಿ ಮುಖ್ಯಮಂತ್ರಿ ಹುದ್ದೆ ಹಾಗೂ ಮಂತ್ರಿಗಿರಿ ಹುದ್ದೆಯ ರೇಟ್ ಅನ್ನು ಯತ್ನಾಳ್ ಅವರು ಹೇಳಿದ್ದಾರೆ. ಉಳಿದಂತೆ ಮಾಧ್ಯಮ ವರದಿಗಳು, ಬಿಜೆಪಿ ನಾಯಕರಾದ ವಿಶ್ವನಾಥ್, ಗೂಳಿಹಟ್ಟಿ ಶೇಖರ್ ಅವರ ಹೇಳಿಕೆಗಳೇ ಸಾಕ್ಷಿ. ನೀವು ಕೊಟ್ಟಿರುವ ಸಾಕ್ಷಿ ಆಧಾರದ ಮೇಲೆ ನಾವು ಜಾಹೀರಾತು ನೀಡಿದ್ದೇವೆ. ಆಯೋಗದ ನೋಟೀಸ್ ಗೆ ಉತ್ತರ ನೀಡಿದ್ದೇವೆ. ಅಮಿತ್ ಶಾ ಅವರು ಗಲಭೆ ನಡೆಯಲಿದೆ ಎಂಬ ಬೆದರಿಕೆಗೆ ನೋಟೀಸ್ ನೀಡುವುದಿಲ್ಲವೇ? ನಿಮ್ಮಿಂದ ಸಿಯಾಗಿ ಅಧಿಕಾರ ಮಾಡಲಾಗದೇ, ಪಾಪ ಪ್ರಧಾನಿಗಳನ್ನು ಬೀದಿ ಬೀದಿ ತಿರುಗಿಸುತ್ತಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.

Tags: BJPDK ShivakumarKannadigasPM Modi Road Showಕನ್ನಡಿಗರುಕಾಂಗ್ರೆಸ್​ಡಿ.ಕೆ ಶಿವಕುಮಾರ್​ಪ್ರಧಾನಿ ಮೋದಿ ರೋಡ್ ಶೋಬಿಜೆಪಿ
Previous Post

ಮುಸ್ಲಿಮರ ಮೀಸಲಾತಿ ಹೆಚ್ಚಿಸುತ್ತೇನೆ ಎನ್ನುವ ಸಿದ್ದರಾಮಯ್ಯ ಯಾರ ಮೀಸಲಾತಿ ಕಡಿತಗೊಳಿಸುತ್ತಾರೆಂದು ಸ್ಪಷ್ಟಪಡಿಸಲಿ : ಅಮಿತ್​ ಶಾ

Next Post

ಕಾಂಗ್ರೆಸ್​ನ ಗ್ಯಾರಂಟಿ ಕಾರ್ಡ್​ ಅನುಷ್ಠಾನಕ್ಕೆ ಬರೋದು ಅಸಾಧ್ಯ : ಸಂಸದೆ ಸುಮಲತಾ

Related Posts

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ
ರಾಜಕೀಯ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

by ಪ್ರತಿಧ್ವನಿ
May 25, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿ ಬುಲಾವ್ ಬಂದಿರುವ ವಿಚಾರಕ್ಕೆ ಇದೀಗ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ದೆಹಲಿಗೆ ಬರಲು...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
ಕಾಂಗ್ರೆಸ್​ನ ಗ್ಯಾರಂಟಿ ಕಾರ್ಡ್​  ಅನುಷ್ಠಾನಕ್ಕೆ ಬರೋದು ಅಸಾಧ್ಯ : ಸಂಸದೆ ಸುಮಲತಾ

ಕಾಂಗ್ರೆಸ್​ನ ಗ್ಯಾರಂಟಿ ಕಾರ್ಡ್​ ಅನುಷ್ಠಾನಕ್ಕೆ ಬರೋದು ಅಸಾಧ್ಯ : ಸಂಸದೆ ಸುಮಲತಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada