ಸ್ಯಾಂಡಲ್ವುಡ್ ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ʻಕಾಂತಾರʼ ಸಿನಿಮಾ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿ ಭರ್ಜರಿ ಪ್ರದರ್ಶನ ಕಂಡಿತ್ತು. ಅಲ್ಲದೇ ಒಟಿಟಿಯಲ್ಲೂ ಬಿಡುಗಡೆಯಾಗಿ ದಾಖಲೆ ಬರೆದಿತ್ತು. ವಿಶ್ವದಾದ್ಯಂತ ಸಿನಿಪ್ರೇಕ್ಷಕರು ಕಾಂತಾರ ಸಿನಿಮಾವನ್ನ ಮೆಚ್ಚಿಕೊಂಡಿದ್ರು. ಐದು ಭಾಷೆಗಳಲ್ಲಿ ಬಿಡುಗಡೆಯಾಗಿ ಭಾರತೀಯ ಚಿತ್ರರಂಗದಲ್ಲಿ ʻಕಾಂತಾರʼ ಸಿನಿಮಾ ಮೆಚ್ಚುಗೆ ಗಳಿಸಿತ್ತು.

ಇದೀಗ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿರುವ ʻಕಾಂತಾರʼ ಚಿತ್ರದ ನಿರ್ಮಾಪಕರು ಈ ಸಿನಿಮಾವನ್ನ ಇಟಾಲಿಯನ್ ಹಾಗೂ ಸ್ಪ್ಯಾನಿಶ್ ಭಾಷೆಗಳಲ್ಲಿ ಬಿಡುಗಡೆ ಮಾಡಲು ರೆಡಿಯಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಹೊಂಬಾಳೆ ಫಿಲ್ಮ್ಸ್, `ಭಾರತೀಯರೂ ಸೇರಿದಂತೆ ಜಗತ್ತಿನ ಸಿನಿಪ್ರಿಯರ ಮನಗೆದ್ದಿರುವ ನಮ್ಮ ಕಾಣಿಕೆ ಕಾಂತಾರವನ್ನು ಶೀಘ್ರದಲ್ಲೇ ಇಟಾಲಿಯನ್ ಹಾಗೂ ಸ್ಪ್ಯಾನಿಶ್ ಭಾಷೆಯಲ್ಲಿ ಅಲ್ಲಿನ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ’ ಎಂದು ತಿಳಿಸಿದ್ದಾರೆ