• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕನ್ನಡಕ್ಕಾಗಿ ಉಗ್ರರೂಪ ತಾಳಿದ ಕರವೇ.. ಬೆಂಗಳೂರಿನಲ್ಲಿ ಭಾರೀ ಹೈಡ್ರಾಮಾ..

Any Mind by Any Mind
December 27, 2023
in ಕರ್ನಾಟಕ
0
ಕನ್ನಡಕ್ಕಾಗಿ ಉಗ್ರರೂಪ ತಾಳಿದ ಕರವೇ.. ಬೆಂಗಳೂರಿನಲ್ಲಿ ಭಾರೀ ಹೈಡ್ರಾಮಾ..
Share on WhatsAppShare on FacebookShare on Telegram

ADVERTISEMENT

ಕನ್ನಡ ಬೋರ್ಡ್ ಹಾಕದ ಕಾರಣಕ್ಕೆ ಕರವೇ ಕಾರ್ಯಕರ್ತರು ಬೀದಿಗಿಳಿದು ಹೋರಾಟ ಮಾಡಿದ್ದಾರೆ. ಏರ್ಪೋರ್ಟ್ ರಸ್ತೆಯ ಟೋಲ್ ಬಳಿ ಬೃಹತ್ ಬ್ಯಾನರ್ ಹರಿದು ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಸಾದಹಳ್ಳಿ ಗೇಟ್ ಬಳಿ ಇರೋ ಟೋಲ್ ಬಳಿ ಇಂಗ್ಲಿಷ್ ಭಾಷೆಯ ಪ್ಲೆಕ್ಸ್‌ಗಳನ್ನ ಹರಿದು ಹಾಕಿದ್ದಾರೆ. ಈ ವೇಳೆ ಪೊಲೀಸರು ಹಾಗು ಕಾರ್ಯಕರ್ತ ನಡುವೆ ವಾಗ್ವಾದ ನಡೆದಿದೆ. ಕರವೇ ಕಾರ್ಯಕರ್ತರ ವರ್ತನೆ ಪೊಲೀಸರ ನಿಯಂತ್ರಣಕ್ಕೆ ಸಿಗದೆ ಕೆಲಕಾಲ ಪೊಲೀಸರು ಪರದಾಡುವಂತಾಗಿದೆ. ಏಕಾಏಕಿ ಸಾವಿರಾರು ಕಾರ್ಯಕರ್ತರ ಜಮಾವಣೆ ಆಗಿದ್ದು, ಕರವೇ ಕಾರ್ಯಕರ್ತರು ಮಾಲ್ ಆಫ್ ಏಷ್ಯಾಗೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದ್ದಾರೆ.

ಮಾಲ್ ಆಫ್ ಏಷ್ಯಾಗೆ ಪೊಲೀಸರ ಬಿಗಿ ಬಂದೊಬಸ್ತ್ ಮಾಡಿದ್ದು, ಕೊಡಿಗೇಹಳ್ಳಿ ಬಳಿಯ ಮಾಲ್ ಸುತ್ತಲೂ ಹದ್ದಿನ ಕಣ್ಣಿಟ್ಟಿದ್ದಾರೆ. ಭದ್ರತೆಗಾಗ ಕೆಎಸ್‌ಆರ್‌ಪಿ ಸೇರಿದಂತೆ 120 ಜನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಕರವೇಯಿಂದ ಕನ್ನಡ ಭಾಷೆಯ ನಾಮಫಲಕ ಅಳವಡಿಕೆ ಮಾಡುವಂತೆ ಪ್ರತಿಭಟನೆ ಮಾಡಿದ್ದಾರೆ. ಮಾಲ್ ಆಫ್ ಏಷ್ಯಾಗೆ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆಯಿದ್ದು ಫಿನಿಕ್ಸ್ ಮಾಲ್ ಆಫ್ ಏಷ್ಯಾ ಮಾಲ್ ಸಂಪೂರ್ಣ ಕ್ಲೋಸ್ ಮಾಡಲಾಗಿದೆ. ಮಾಲ್ ಒಳಗೆ ಇಂದು ಸಾರ್ವಜನಿಕರ ಪ್ರವೇಶ ನಿಷೇಧ ಮಾಡಲಾಗಿದೆ. ಮಾಲ್ ಒಳಗೆ ಪ್ರವೇಶ ಪಡೆಯುವ ಗೇಟ್‌ಗಳನ್ನ ಸಂಪೂರ್ಣವಾಗಿ ಬಂದ್ ಮಾಡಿಸಿದೆ ಆಡಳಿತ ಮಂಡಳಿ.

ಟೋಲ್ ಬಳಿ‌ ಬ್ಯಾನರ್ ಹರಿದಿರುವ ಕರವೇ ಕಾರ್ಯಕರ್ತರು. ಇಂಗ್ಲಿಷ್‌ನಲ್ಲಿ ಹಾಕಿರುವ ನಾಮಫಲಕಗಳಿಗೆ ಕಲ್ಲು ಹೊಡೆದಿದ್ದಾರೆ. ಇಂಗ್ಲೀಷ್ ನಾಮ ಫಲಕ ದ್ವಂಸ ಮಾಡಿದ್ದಾರೆ. ಸಾದಹಳ್ಳಿಯ ಬ್ಲೂಮ್ ಹೋಟೆಲ್ ಬಳಿಯೂ ಇಂಗ್ಲಿಷ್ ನಾಮಫಲಕ ದ್ವಂಸ ಮಾಡಿ, ಲೈಟಿಂಗ್ ಬೋರ್ಡ್ ಹೊಡೆದು ಹಾಕಿದ್ದಾರೆ. ಬೆಂಗಳೂರಿನಿಂದ ಕೆಂಪೇಗೌಡ ಏರ್ಪೋಟ್‌ಗೆ ತೆರಳುವ ರಾಷ್ಟ್ರೀಯ ಹೆದ್ದಾರಿ ಸಾದಹಳ್ಳಿ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಪ್ರಯಾಣಿಕರ ಪರದಾಡುವಂತಾಗಿದೆ.

ಮಾಲ್ ಆಪ್ ಏಷ್ಯಾ ಬಳಿ ಕರವೇ ಕಾರ್ಯಕರ್ತರು ಆಗಮಿಸಿದ್ದಾರೆ. ಪೊಲೀಸರನ್ನ ಕಂಡು ನೂರು ಮೀಟರ್ ದೂರದಲ್ಲೇ ವಾಹನ ನಿಲ್ಲಿಸಿದ್ದು, ಕಾಲ್ನಡಿಗೆಯಲ್ಲಿ ಮಾಲ್ ಬಳಿಗೆ ಹೋಗಲು ಯತ್ನಿಸಿದ್ದಾರೆ. ಈ ವೇಳೆ ತಡೆಯಲು ಬಂದ ಪೊಲೀಸರ ಜೊತೆಗೆ ವಾಗ್ವಾದ ಮಾಡಿದ್ದು, ಮುಂದೆ ನಾವು ಹೋಗೇ ಹೋಗ್ತೀವಿ ಎಂದು ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಮುಂದೆ ಹೋಗಿ,ನನ್ನ ಅರೆಸ್ಟ್ ಮಾಡಿ ಎಂದು ನಾರಾಯಣ ಗೌಡ ಕೋಪತಾಪ ಪ್ರದರ್ಶನ ಮಾಡಿದ್ದಾರೆ. ಮಾಲ್ ಬಳಿಯಿಂದ ವಾಪಸ್ ಹೋಗುವಂತೆ ಪೊಲೀಸರು ಆಗ್ರಹ ಮಾಡಿದ್ದು, ಹತೋಟಿಗೆ ಬಾರದಿದ್ದಾಗ ನಾರಾಯಣ ಗೌಡ ಸೇರಿದಂತೆ ಎಲ್ಲರನ್ನು ವಶಕ್ಕೆ ಪಡೆಯಲಾಗಿದೆ. ಮಾಲ್ ಬಳಿ ಟಿಟಿ ವಾಹನದಲ್ಲಿ ಕರವೇ ಮಹಿಳಾ ಕಾರ್ಯಕರ್ತರು ಆಗಮಿಸಿದ್ದು, ಟಿಟಿ ವಾಹನ ವಾಪಸ್ ತೆಗೆದುಕೊಂಡು ಹೋಗುವಂತೆ ಪೊಲೀಸರು ಸೂಚನೆ ಕೊಟ್ಟಿದ್ದಾರೆ. ಪೊಲೀಸರ ಸೂಚನೆಗೆ ಬಗ್ಗದೆ ಪೊಲೀಸರ ಜೊತೆಗೆ ಮಹಿಳಾ ಕಾರ್ಯಕರ್ತರು ವಾಗ್ವಾದ ಮಾಡಿದ್ದಾರೆ. ಬಸ್‌ ಚಕ್ರದ ಗಾಳಿ ಬಿಟ್ಟಿದ್ದಾರೆ ಕಾರ್ಯಕರ್ತರು.

ನಾರಾಯಣ ಗೌಡರನ್ನು ವಶಕ್ಕೆ ಪಡೆದು ಕರೆದೊಯ್ಯುವಾಗ ನಾರಾಯಣಗೌಡರು ಇದ್ದ ಬಸ್ ತಡೆದ ಕರವೇ ಕಾರ್ಯಕರ್ತರು, ಪೊಲೀಸರ ಲಾಠಿ ಕಸಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್‌ಗೆ ಅಡ್ಡವಾಗಿ ರಸ್ತೆಯಲ್ಲಿ ಮಲಗಿದ ಕಾರ್ಯಕರ್ತರು, ಕಲ್ಲು ತೂರಾಟ ನಡೆಸಿದ್ದಾರೆ. ನಾರಾಯಣಗೌಡರನ್ನ ಬಸ್‌ನಲ್ಲಿ ಕರೆದೊಯ್ಯುವ ವೇಳೆ ಪೊಲೀಸ್ರು ಹರಸಾಹಸ ಮಾಡುವಂತಾಗಿದೆ. ಕನ್ನಡ ಬೋರ್ಡ್ ಹಾಕದಿದ್ದರೆ ವ್ಯಾಪಾರ ವ್ಯವಹಾರ ಮಾಡಲು ಬಿಡುವುದಿಲ್ಲ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎನ್ನುವುದು ಕರವೇ ಕಾರ್ಯಕರ್ತರ ನಿಲುವು.

Tags: BangloreBJPCongress PartyKannadaKaraveKarnataka rakshana vedikenarayana gowdaprotestಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಜನವರಿ 14 ರಿಂದ ಮಣಿಪುರದಿಂದ ಮುಂಬೈಗೆ ‘ಭಾರತ್​ ನ್ಯಾಯ ಯಾತ್ರೆ’: ಕಾಂಗ್ರೆಸ್​ ಘೋಷಣೆ

Next Post

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೈಯಿಂದ ಮೂಡಿಬಂದ ಅಯೋಧ್ಯೆಯ ರಾಮಲಲ್ಲಾ ಮೂರ್ತಿ!

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೈಯಿಂದ ಮೂಡಿಬಂದ ಅಯೋಧ್ಯೆಯ ರಾಮಲಲ್ಲಾ ಮೂರ್ತಿ!

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೈಯಿಂದ ಮೂಡಿಬಂದ ಅಯೋಧ್ಯೆಯ ರಾಮಲಲ್ಲಾ ಮೂರ್ತಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada