• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ವಿರೋಧಿಸಿ ನಾಳೆ ಕರವೇ ಸಂಘಟನೆಯಿಂದ ಟ್ವೀಟರ್ ಅಭಿಯಾನ

ಪ್ರತಿಧ್ವನಿ by ಪ್ರತಿಧ್ವನಿ
January 15, 2022
in ಕರ್ನಾಟಕ
0
ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ವಿರೋಧಿಸಿ ನಾಳೆ ಕರವೇ ಸಂಘಟನೆಯಿಂದ ಟ್ವೀಟರ್ ಅಭಿಯಾನ
Share on WhatsAppShare on FacebookShare on Telegram

ರಾಜ್ಯದಲ್ಲಿ ಕನ್ನಡಿಗರ ತೆರಿಗೆ ಹಣದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ಅಗತ್ಯವಿರಲಿಲ್ಲ. ಕನ್ನಡಿಗರ ಮೇಲೆ ಪರನುಡಿಯನ್ನು ಹೇರುವ ಇಂಥ ಯತ್ನವನ್ನು ಕರ್ನಾಟಕ ರಕ್ಷಣಾ ವೇದಿಕೆ ಸಹಿಸುವುದಿಲ್ಲ. ಸರ್ಕಾರ ಏನೇ ಬಲಪ್ರಯೋಗ ಮಾಡಿದರೂ ವಿಶ್ವವಿದ್ಯಾಲಯ ಆರಂಭಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.

ADVERTISEMENT

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಯ ಮೂಲಕ ಕನ್ನಡ ನುಡಿಯನ್ನು ಹಿಂದಕ್ಕೆ ತಳ್ಳುತ್ತಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ನಾಳೆ ಕರ್ನಾಟಕ ರಕ್ಷಣಾ ವೇದಿಕೆಯು ಬೆಳಗ್ಗೆ 11 ಗಂಟೆಯಿಂದ ಇಡೀ ದಿನ ಟ್ವಿಟರ್ ಅಭಿಯಾನ ನಡೆಸುವ ಮೂಲಕ ಬಹುದೊಡ್ಡ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಸಂಸ್ಕೃತ ವಿವಿ ಸ್ಥಾಪನೆ ಹಿನ್ನೆಲೆಯ ಹುನ್ನಾರಗಳನ್ನು ಬಯಲಿಗೆಳೆದು ಜನಜಾಗೃತಿ ನಡೆಸಲಾಗುವುದು. ಮುಂದೆ ಹಂತಹಂತವಾಗಿ ಇಡೀ ರಾಜ್ಯದ ಎಲ್ಲೆಡೆ ಬೀದಿಹೋರಾಟಗಳನ್ನು ಸಂಘಟಿಸಲಾಗುವುದು. ಸರ್ಕಾರ ಸಂಸ್ಕೃತ ವಿವಿ ರದ್ದುಗೊಳಿಸದಿದ್ದರೆ ಅನಿವಾರ್ಯವಾಗಿ ತೀವ್ರ ಸ್ವರೂಪದ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಮಾಗಡಿ ಸಮೀಪ ನೂರು ಎಕರೆ ಜಾಗವನ್ನು ಸಂಸ್ಕೃತ ವಿವಿಗಾಗಿ ನೀಡಲಾಗಿದೆ. 359 ಕೋಟಿ ರುಪಾಯಿಗಳನ್ನು ಈಗಾಗಲೇ ನೀಡಲಾಗಿದೆ. ಇನ್ನೂ ಸಾವಿರಾರು ಕೋಟಿ ರುಪಾಯಿ ನಮ್ಮ ಹಣವನ್ನು ಕೊಡುವ ಸಾಧ್ಯತೆ ಇದೆ. ಸರ್ಕಾರ ಈ ಎಲ್ಲ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಹಂಪಿಯಲ್ಲಿನ ಕನ್ನಡ ವಿವಿಯ ಸಿಬ್ಬಂದಿಗೆ ಹಣಕೊಡಲೂ ಸಹ ಇದೇ ಸರ್ಕಾರ ಹಣವಿಲ್ಲವೆಂಬ ಸಬೂಬು ನೀಡುತ್ತಿತ್ತು. ಕರ್ನಾಟಕ ರಕ್ಷಣಾ ವೇದಿಕೆ ಅಭಿಯಾನ, ಹೋರಾಟ ನಡೆಸಿ ಅನುದಾನ ಕೊಡಿಸಬೇಕಾಯಿತು. ಕನ್ನಡ ವಿವಿಗೆ ಇಲ್ಲದ ಹಣ ಸಂಸ್ಕೃತ ವಿವಿಗೆ ಎಲ್ಲಿಂದ ಬಂತು? ಸರ್ಕಾರ ಇದಕ್ಕೆ ಉತ್ತರ ನೀಡಬೇಕು. ಸಂಸ್ಕೃತ ಅಧ್ಯಾಪಕರು, ಸಂಸ್ಕೃತಕ್ಕೆ ಸಂಬಂಧಪಟ್ಟ ಸಂಸ್ಥೆಗಳು ನ್ಯಾಯಲಯಕ್ಕೆ ಹೋಗಿ ಪದವಿ ಹಂತದಲ್ಲಿ ಕನ್ನಡ ಕಲಿಕೆಗೆ ಅಡ್ಡಿಯಾಗಿವೆ. ಇವರೆಲ್ಲ ಯಾರು, ಈ ಸಂಚುಕೂಟದ ಹುನ್ನಾರಗಳೇನು, ಇವರ ಹಿಂದೆ ಯಾರಿದ್ದಾರೆ ಎಂಬುದು ನಮಗೆ ಸ್ಪಷ್ಟವಾಗಿ ತಿಳಿದಿದೆ ಎಂದಿದ್ದಾರೆ.

ಕನ್ನಡದ ಶತ್ರುಗಳೆಲ್ಲ ನಮ್ಮ ಶತ್ರುಗಳು. ಕನ್ನಡವನ್ನು ಕತ್ತುಹಿಸುಕುವ ಯಾವುದೇ ಶಕ್ತಿಗಳನ್ನು ನಾವು ಸಹಿಸುವುದಿಲ್ಲ. ಇಂಥವರಿಗೆ ಕಳೆದ ಇಪ್ಪತ್ತಮೂರು ವರ್ಷಗಳಲ್ಲಿ ಹಲವು ರೀತಿಯಲ್ಲಿ ಪಾಠ ಕಲಿಸಿದ್ದೇವೆ. ಕನ್ನಡ ನಾಡಿನಲ್ಲಿದ್ದುಕೊಂಡು ಕನ್ನಡಕ್ಕೆ ದ್ರೋಹ ಎಸಗುವವರು ಮೈಮೇಲೆ ಪ್ರಜ್ಞೆ ಇಟ್ಟುಕೊಂಡಿರಲಿ. ನಾಳೆ ನಡೆಯುವ ಟ್ವಿಟರ್ ಅಭಿಯಾನದಲ್ಲಿ ಎಲ್ಲ ಕನ್ನಡದ ಮನಸುಗಳೂ ಪಾಲ್ಗೊಳ್ಳಬೇಕೆಂದು ವಿನಂತಿಸುತ್ತೇನೆ. ಇದು ದೊಡ್ಡ ಚಳವಳಿಯ ಸಣ್ಣ ಆರಂಭವಷ್ಟೆ. ನಾವು ಸಾಗಬೇಕಾದ ಹಾದಿ ದೂರವಿದೆ. ಕನ್ನಡದ ಜನತೆ ಸಂಸ್ಕೃತಪ್ರಿಯರ ಹುನ್ನಾರಗಳನ್ನು ಅರಿತು ಹೋರಾಡಲೇಬೇಕಾದ ಅನಿವಾರ್ಯತೆ ಈಗ ಉಂಟಾಗಿದೆ ಎಂದು ವಿವರಿಸಿದ್ದಾರೆ.

Tags: ನ್ಯಾಯಾಲಯಸಂಸ್ಕೃತ
Previous Post

ಕೋವಿಡ್‌ ಮೂರನೇ ಅಲೆಯ ಲಕ್ಷಣಗಳ ಬಗ್ಗೆ ಮಾಹಿತಿ ನೀಡಿದ ಡಾ.ರಾಜು

Next Post

ಬಹುಸಂಖ್ಯಾತರು ದ್ವೇಷವನ್ನು ನಿಲ್ಲಿಸದೇ ಹೋದರೆ ಅದು ನಮ್ಮ ಕನಸಿನ ಭಾರತವನ್ನು ನಾಶಪಡಿಸಬಲ್ಲುದು

Related Posts

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
0

ಅಂಕಗಳೊಂದಿಗೆ ಕೌಶಲವಿದ್ದರೆ ಉದ್ಯೋಗಾವಕಾಶ ಬೆಂಗಳೂರು, ಜೂನ್‌ 20: ಯಾವುದೇ ಕೆಲಸದಲ್ಲಿ ಕೌಶಲ್ಯವಿಲ್ಲದಿದ್ದರೆ ಪ್ರಯೋಜನಕ್ಕೆ ಬರುವುದಿಲ್ಲ. ಕಟ್ಟಡ ಕಾರ್ಮಿಕರಿಂದ ಹಿಡಿದು ಎಂಜಿನಿಯರಿಂಗ್‌ ವರೆಗೆ ಎಲ್ಲರಿಗೂ ಕೌಶಲ್ಯ ಅಗತ್ಯ ಎಂದು...

Read moreDetails
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
Next Post
ಬಹುಸಂಖ್ಯಾತರು ದ್ವೇಷವನ್ನು ನಿಲ್ಲಿಸದೇ ಹೋದರೆ ಅದು ನಮ್ಮ ಕನಸಿನ ಭಾರತವನ್ನು ನಾಶಪಡಿಸಬಲ್ಲುದು

ಬಹುಸಂಖ್ಯಾತರು ದ್ವೇಷವನ್ನು ನಿಲ್ಲಿಸದೇ ಹೋದರೆ ಅದು ನಮ್ಮ ಕನಸಿನ ಭಾರತವನ್ನು ನಾಶಪಡಿಸಬಲ್ಲುದು

Please login to join discussion

Recent News

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 20, 2025
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!