ಮಹಾರಾಷ್ಟ್ರ-ಬೇಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಮೇಲೆ ದಾಳಿ ಖಂಡಿಸಿ ಸಕ್ಕರೆ ನಾಡು ಮಂಡ್ಯದಲ್ಲಿ ಪ್ರತಿಭಟನೆಯ ಕಿಚ್ಚು ಜೋರಾಗಿದೆ.
ಮಂಡ್ಯದಲ್ಲಿ ಮರಾಠ ಪುಂಡರ ದಾಳಿ ಖಂಡಿಸಿ ಸಿಲ್ವರ್ ಜ್ಯುಬಿಲಿ ಪಾರ್ಕ್‌ನಲ್ಲಿ ಕರವೇ( ನಾರಾಯಣ ಗೌಡ ಬಣದ) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು ಮತ್ತು ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿದ್ದರು.

ಪ್ರತಿಭಟನೆಯ ವೇಳೆ ಮಹಾರಾಷ್ಟ್ರ ಸರ್ಕಾರದ ಸಚಿವರು, ಶಿವಸೇನೆಯ ಹಾಗೂ MES ಮುಖಂಡರ ಭೂತದಹನ ಮಾಡಿ ತಮ್ಮ ಆಕ್ರೋಶವನ್ನ ಹೊರಹಾಕಿದ್ದರು.
ಗಡಿ ವಿಚಾರವಾಗಿ ನಿರಂತರವಾಗಿ ಕನ್ನಡಿಗರ ಮೇಲೆ ದಾಳಿಯಾಗುತ್ತಿದೆ ಆದ್ದರಿಂದ ಮರಾಠ ಪುಂಡರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಂಘಟನೆಯ ಸದಸ್ಯರು ಆಗ್ರಹಿಸಿದ್ದರು.