• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ಲಸಿಕೆಗಾಗಿ ಕರವೇ ಸಾವಿರಾರು ಪ್ರತಿಭಟನೆ ರಾಜ್ಯಾದ್ಯಂತ ಅಭೂತಪೂರ್ವ ಯಶಸ್ಸು

Any Mind by Any Mind
June 10, 2021
in ಅಭಿಮತ, ಕರ್ನಾಟಕ, ರಾಜಕೀಯ
0
ಲಸಿಕೆಗಾಗಿ ಕರವೇ ಸಾವಿರಾರು ಪ್ರತಿಭಟನೆ ರಾಜ್ಯಾದ್ಯಂತ ಅಭೂತಪೂರ್ವ ಯಶಸ್ಸು
Share on WhatsAppShare on FacebookShare on Telegram

ರಾಜ್ಯದ ಸಮಸ್ತ ಜನತೆಗೆ ಉಚಿತವಾಗಿ, ಕಾಲಮಿತಿಯೊಳಗೆ, ತಾರತಮ್ಯವಿಲ್ಲದೆ, ಸುಲಭವಾಗಿ ನಿಲುಕುವಂತೆ ಕೋವಿಡ್ ಲಸಿಕೆಗಳನ್ನು ನೀಡಬೇಕೆಂದು ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಏರ್ಪಡಿಸಿದ್ದ ಪ್ರತಿಭಟನೆಗಳು ಅಭೂತಪೂರ್ವ ಯಶಸ್ಸು ಕಂಡಿದ್ದು, ಸುಮಾರು ಎಂಟು ಸಾವಿರಕ್ಕೂ ಹೆಚ್ಚು ಪ್ರತಿಭಟನೆಗಳು ದಾಖಲಾಗಿವೆ.

ADVERTISEMENT

ಇಂದು ಬೆಳಿಗ್ಗೆ 9.10 ಗಂಟೆಯಿಂದ ಆರಂಭಗೊಂಡ ಆರಂಭಗೊಂಡ ಪ್ರತಿಭಟನೆಗಳು ಹೆಚ್ಚಿನ ಪ್ರಮಾಣ ಗ್ರಾಮೀಣ ಭಾಗದಲ್ಲಿ ನಡೆದಿರುವುದು ವಿಶೇಷವಾಗಿದ್ದು, ಮಕ್ಕಳು, ವೃದ್ಧರೂ ಸೇರಿದಂತೆ ಎಲ್ಲ ವಯೋಮಾನದ ಜನರೂ ಭಾಗವಹಿಸಿದ್ದರು‌.

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪ್ರತಿಭಟನೆಗಳು ನಡೆದಿದ್ದು, ಎಲ್ಲ ಭಾಗಗಳಲ್ಲೂ ಅತ್ಯುತ್ಸಾಹದ ಪ್ರತಿಕ್ರಿಯೆ ಕಂಡುಬಂದಿದೆ. ಹಲವಾರು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ, ತಾಲ್ಲೂಕುಗಳಲ್ಲಿ ತಹಸೀಲ್ದಾರ್ ಕಚೇರಿಗಳ ಮುಂದೆ ಪ್ರತಿಭಟನೆಗಳು‌ ನಡೆದಿವೆ. ಇದಲ್ಲದೆ ಕರವೇ ಕಾರ್ಯಕರ್ತರು ಜಿಲ್ಲಾ, ತಾಲ್ಲೂಕು, ಗ್ರಾಮಪಂಚಾಯ್ತಿ ಕಚೇರಿಗಳು, ನಾಡಕಚೇರಿಗಳು, ವಿವಿಧ ಸರ್ಕಾರಿ ಕಚೇರಿಗಳ ಮುಂದೆಯೂ ಪ್ರತಿಭಟಿಸಿದ್ದಾರೆ. ಸಾವಿರಾರು ಮಂದಿ ಮನೆಮನೆಗಳ ಮುಂದೆಯೂ ಪ್ರತಿಭಟನೆ ನಡೆಸಿದ್ದಾರೆ.

ಹಲವೆಡೆ ಪ್ರತಿಭಟನಾನಿರತ ಕರವೇ ಕಾರ್ಯಕರ್ತರಿಗೆ ಪೊಲೀಸರು ಅಡ್ಡಿಪಡಿಸಿದ ಘಟನೆಗಳೂ ಸಹ ನಡೆದಿವೆ. ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕು ಬಸವನಕೋಟೆ ಗ್ರಾಮದಲ್ಲಿ 60 ಪ್ರತಿಭಟನೆಗಳು ನಡೆದಿದ್ದು, ಇಡೀ ಹಳ್ಳಿಗೆ ಹಳ್ಳಿಯೇ ಲಸಿಕೆ ಚಳವಳಿಯಲ್ಲಿ ಪಾಲ್ಗೊಂಡಿದೆ. ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲ್ಲೂಕು ಒಂದರಲ್ಲೇ ಐನೂರಕ್ಕೂ ಹೆಚ್ಚು ಪ್ರತಿಭಟನೆಗಳು ನಡೆದಿರುವುದು ವಿಶೇಷವಾಗಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಹೋರಾಟಕ್ಕೆ ಎಲ್ಲ ಭಾಗಗಳಲ್ಲೂ ಸಾರ್ವಜನಿಕರು ಸ್ವಯಂಸ್ಫೂರ್ತಿಯಿಂದ ಬೆಂಬಲಿಸಿದ್ದು, ದಿನಗೂಲಿ‌ ನೌಕರರು, ರೈತರು, ಮಹಿಳೆಯರು, ವರ್ತಕರು ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದಾರೆ.

ಹಕ್ಕೊತ್ತಾಯಗಳು

1. ಉಚಿತ ಲಸಿಕೆ

ರಾಜ್ಯದ ಎಲ್ಲ ನಾಗರಿಕರಿಗೂ ಬಡವ-ಶ್ರೀಮಂತನೆಂಬ ಭೇದವಿಲ್ಲದೆ ಉಚಿತವಾಗಿಯೇ ಲಸಿಕೆ ಕೊಡಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣಕ್ಕೆ ಸಿಗುವ ಲಸಿಕೆಯಿಂದಾಗಿ ಅಸಮಾನತೆ ಸೃಷ್ಟಿಯಾಗುತ್ತದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲೂ ಉಚಿತವಾಗಿಯೇ ಲಸಿಕೆ ನೀಡಬೇಕು. ಹಲವಾರು ದೇಶಗಳಲ್ಲಿ ಯಾವ ರೀತಿ ಒಂದೇ ಒಂದು ಲಸಿಕೆಯನ್ನು ಮಾರಾಟಕ್ಕೆ ಇಟ್ಟಿಲ್ಲವೋ ಹಾಗೆಯೇ ಭಾರತದಲ್ಲೂ ಸಹ ಲಸಿಕೆ ಮಾರಾಟದ ವಿಷಯವಾಗಬಾರದು. ಖಾಸಗಿ ಆಸ್ಪತ್ರೆ, ಸಂಸ್ಥೆಗಳಿಗೆ ನೀಡಿರುವ ಶೇ 25 ರಷ್ಟು ವ್ಯಾಕ್ಸಿನ್ ಕೊಳ್ಳುವ ಅವಕಾಶವನ್ನು ರದ್ದುಗೊಳಿಸಿ, ನೂರಕ್ಕೆ ನೂರು ಲಸಿಕೆಗಳು ಉಚಿತವಾಗಿಯೇ, ಸರ್ಕಾರದಿಂದಲೇ ನೀಡಬೇಕು.

2. ಕಾಲಮಿತಿಯೊಳಗೆ ಲಸಿಕೆ

ಕೋವಿಡ್ ಮೂರನೇ ಅಲೆ ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಬಹುದು ಎಂದು ತಜ್ಞರು ಅಭಿಪ್ರಾಯಪಡುತ್ತಿರುವುದರಿಂದ ಸೆಪ್ಟೆಂಬರ್ ಅಂತ್ಯದೊಳಗೆ ಎರಡೂ ಡೋಸ್ ಲಸಿಕೆಗಳನ್ನು ಕರ್ನಾಟಕದ ಸಮಸ್ತ ಜನತೆಗೆ ನೀಡಬೇಕು. ಜೂನ್ ಅಂತ್ಯದೊಳಗೆ ಮೊದಲನೇ ಡೋಸ್ ನೀಡಬೇಕು. ಸೆಪ್ಟೆಂಬರ್ ಅಂತ್ಯದೊಳಗೆ ಎರಡನೇ ಡೋಸ್ ನೀಡಿ, ಲಸಿಕಾ ಅಭಿಯಾನವನ್ನು ಪೂರ್ಣಗೊಳಿಸಬೇಕು. ಲಸಿಕೆ ಇಲ್ಲದೆ ಜನರು ಸಾಯುವಂಥ ಸ್ಥಿತಿಯನ್ನು ನಿರ್ಮಾಣ ಮಾಡಬಾರದು.

3. ಮನೆಮನೆಗೆ ಲಸಿಕೆ

ಸರ್ಕಾರ ಕೂಡಲೇ ಚುನಾವಣೆ ಸಂದರ್ಭದ ಮತದಾನ ಬೂತ್ ಗಳ ಮಾದರಿಯಲ್ಲಿ ಕೋವಿಡ್ ಲಸಿಕೆ ಬೂತ್ ಸ್ಥಾಪಿಸಬೇಕು. ನೂಕುನುಗ್ಗಲು, ಜನದಟ್ಟಣೆ ಆಗದಂತೆ‌ ಎಲ್ಲ‌ ನಾಗರಿಕರು ಸುಲಭವಾಗಿ ವ್ಯಾಕ್ಸಿನ್ ಪಡೆಯುವಂಥ ಸ್ಥಿತಿ ನಿರ್ಮಾಣ ಮಾಡಬೇಕು.‌ ಸಾಧ್ಯವಾದರೆ ಮನೆಮನೆಗೂ ತೆರಳಿ ಲಸಿಕೆ‌ ನೀಡುವಂಥ ವ್ಯವಸ್ಥೆ ಜಾರಿಗೊಳಿಸಬೇಕು. ಲಸಿಕೆ ನೀಡಿಕೆಗೆ ಸರ್ಕಾರ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಬೇಕು.‌ ಸ್ಮಾರ್ಟ್ ಫೋನ್ ಇಲ್ಲದ,‌ ರಿಜಿಸ್ಟ್ರೇಷನ್ ಮಾಡಿಸಲು ಗೊತ್ತಾಗದ ಹಳ್ಳಿಗಾಡಿನ ಜನರ ಸಮಸ್ಯೆ ನೀಗಿಸಬೇಕು.

4. ತಾರತಮ್ಯವಿಲ್ಲದ ಲಸಿಕೆ

ಒಕ್ಕೂಟ ಸರ್ಕಾರ ಮೊದಲ ಹಂತದ ಲಸಿಕೆ ಹಂಚಿಕೆಗಳಲ್ಲಿ ಗುಜರಾತ್, ಉತ್ತರ ಪ್ರದೇಶ ರಾಜ್ಯಗಳಿಗೆ ಹೆಚ್ಚಿನ ಪ್ರಮಾಣದ ಲಸಿಕೆ ಹಂಚಿಕೆ‌ ಮಾಡಿ, ದಕ್ಷಿಣದ ರಾಜ್ಯಗಳಿಗೆ ಕಡಿಮೆ ಪ್ರಮಾಣದಲ್ಲಿ ಹಂಚಿಕೆ ಮಾಡಿರುವುದು ಅಂಕಿಅಂಶಗಳಲ್ಲಿ ಬಯಲಾಗಿದೆ. ಒಕ್ಕೂಟ ಸರ್ಕಾರ ಆಕ್ಸಿಜನ್, ವೆಂಟಿಲೇಟರ್, ರೆಮ್ಡಿಸಿವಿರ್, ಆಂಫೋಟೆರಿಸಿನ್ ಬಿ ಇತ್ಯಾದಿಗಳ ಹಂಚಿಕೆ ಸಂದರ್ಭದಲ್ಲೂ ಕರ್ನಾಟಕದ ಪಾಲನ್ನು ಕಡಿಮೆ ಮಾಡಿ, ಗುಜರಾತ್ ಮತ್ತು ಉತ್ತರದ ರಾಜ್ಯಗಳಿಗೆ ಹೆಚ್ಚು ನೀಡಿದೆ. ಈ ತಾರತಮ್ಯವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಜೂನ್ 21 ರಿಂದ ಒಕ್ಕೂಟ ಸರ್ಕಾರ ನೀಡುವ ಲಸಿಕೆಗಳು ವೈಜ್ಞಾನಿಕವಾಗಿ, ಜನಸಂಖ್ಯೆ ಆಧರಿಸಿ ಹಂಚಿಕೆಯಾಗಬೇಕು.

ಇಂದು ಕರ್ನಾಟಕ ರಕ್ಷಣಾ ವೇದಿಕೆ‌ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ಜನ್ಮದಿನವಾಗಿದ್ದು, ಎಲ್ಲೆಡೆ ಲಕ್ಷಾಂತರ ಕಾರ್ಯಕರ್ತರು, ಜನಸಾಮಾನ್ಯರಿಗೆ ಕಾಲಮಿತಿಯೊಳಗೆ ಲಸಿಕೆ ಸಿಗಬೇಕು ಎಂಬ ಹೋರಾಟದೊಂದಿಗೆ ‘ಪ್ರತಿಭಟನಾ ದಿನ’ವನ್ನಾಗಿ ಆಚರಿಸಿದರು.

ಚಳವಳಿ ಯಶಸ್ವಿಯಾಗಿ ನಡೆಸಿದ ಎಲ್ಲ ಕರವೇ ಕಾರ್ಯಕರ್ತರಿಗೆ, ಬೆಂಬಲಿಸಿದ ಸಾರ್ವಜನಿಕರಿಗೆ ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

(ಬಿ.ಸಣ್ಣೀರಪ್ಪ)
ರಾಜ್ಯ ಪ್ರಧಾನ ಕಾರ್ಯದರ್ಶಿ‌

ರಾಜ್ಯಾದ್ಯಂತ ಸಹಸ್ರಾರು ಪ್ರತಿಭಟನೆಗಳು ನಡೆದಿರುವ ಹಿನ್ನೆಲೆಯಲ್ಲಿ, ಅವುಗಳ ಪೈಕಿ ಆಯ್ದ ಫೊಟೋ ವಿಡಿಯೋಗಳನ್ನು ಕೆಳಗಿನ ಗೂಗಲ್ ಡ್ರೈವ್ ಲಿಂಕ್ ಇರುತ್ತದೆ.

https://drive.google.com/drive/u/0/folders/164Ru16twwTIbG07dpCfh91HecoHDJIYt

Tags: ಉಚಿತ ಲಸಿಕೆಕರವೇಕರ್ನಾಟಕ
Previous Post

ನಾನು ನಿಜವಾದ ಕಾಂಗ್ರೆಸಿಗ, ಪಕ್ಷಾಂತರ ಮಾಡಿ ಬಿಜೆಪಿ ಸೇರುವುದಿಲ್ಲ: ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್

Next Post

ವರ್ಗಾವಣೆಗೆ ಮುನ್ನಾ ದಿನವೇ ಅಕ್ರಮ ಭೂ ಪರಿವರ್ತನೆ, ಆರ್‌ಟಿಸಿ ರದ್ದು ಪಡಿಸಿ ಭೂ ಮಾಫಿಯಾಗೆ ಕೊಡಲಿ ಪೆಟ್ಟು ನೀಡಿದ ರೋಹಿಣಿ ಸಿಂಧೂರಿ

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
ವರ್ಗಾವಣೆಗೆ ಮುನ್ನಾ ದಿನವೇ ಅಕ್ರಮ ಭೂ ಪರಿವರ್ತನೆ, ಆರ್‌ಟಿಸಿ ರದ್ದು ಪಡಿಸಿ ಭೂ ಮಾಫಿಯಾಗೆ ಕೊಡಲಿ ಪೆಟ್ಟು ನೀಡಿದ ರೋಹಿಣಿ ಸಿಂಧೂರಿ

ವರ್ಗಾವಣೆಗೆ ಮುನ್ನಾ ದಿನವೇ ಅಕ್ರಮ ಭೂ ಪರಿವರ್ತನೆ, ಆರ್‌ಟಿಸಿ ರದ್ದು ಪಡಿಸಿ ಭೂ ಮಾಫಿಯಾಗೆ ಕೊಡಲಿ ಪೆಟ್ಟು ನೀಡಿದ ರೋಹಿಣಿ ಸಿಂಧೂರಿ

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada