• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, November 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕನ್ನಡಿಗರ ಉದ್ಯೋಗದ ಹಕ್ಕಿಗಾಗಿ ನವೆಂಬರ್ 1ರಿಂದ ಕರವೇ ಅಭಿಯಾನ

Shivakumar by Shivakumar
October 29, 2026
in Top Story, ಕರ್ನಾಟಕ
0
KaRaVe to launch campaign for Kannadigas' right to employment starting November 1st
Share on WhatsAppShare on FacebookShare on Telegram

ಬೆಂಗಳೂರು : ಕರ್ನಾಟಕದಲ್ಲಿಯೇ (Karnataka) ಕಾರ್ಯನಿರ್ವಹಿಸುತ್ತಿರುವ ಐಟಿ-ಬಿಟಿ ಕಂಪೆನಿಗಳಲ್ಲಿ ಕನ್ನಡಿಗರಿಗೆ (Kannadigas) ಸಮರ್ಪಕ ಉದ್ಯೋಗಾವಕಾಶಗಳು ದೊರೆಯುತ್ತಿಲ್ಲ. ಕನ್ನಡಿಗ ಐಟಿ ಉದ್ಯೋಗಿಗಳು ತಮ್ಮ ಉದ್ಯೋಗದ ಸಂಕಷ್ಟ, ನೇಮಕಾತಿಯಲ್ಲಿನ ತಾರತಮ್ಯ ಹಾಗೂ ಸ್ಥಳೀಯ ಅಭ್ಯರ್ಥಿಗಳಿಗೆ ಆಗುತ್ತಿರುವ ಅನ್ಯಾಯದ ಕುರಿತು ಬಹಿರಂಗವಾಗಿ ಅಳಲು ತೋಡಿಕೊಳ್ಳುತ್ತಿದ್ದಾರೆ. ಇಂಥ ಸಂದರ್ಭವನ್ನು ನಾವು ನಿರೀಕ್ಷಿಸಿದ್ದೆವು. ಅನಿಯಂತ್ರಿತ ವಲಸೆಯ ಪರಿಣಾಮವಾಗಿ ಕನ್ನಡಿಗರೇ ಈಗ ಅತಂತ್ರರಾಗುವ ಸನ್ನಿವೇಶ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕನ್ನಡಿಗರ ಉದ್ಯೋಗದ ಹಕ್ಕುಗಳ ರಕ್ಷಣೆಗಾಗಿ ಕರ್ನಾಟಕ ರಕ್ಷಣಾ (Karave) ವೇದಿಕೆ ಬೃಹತ್‌ ಅಭಿಯಾನವನ್ನು ಹಮ್ಮಿಕೊಳ್ಳುತ್ತಿದೆ.

ADVERTISEMENT

ನವೆಂಬರ್ 1ರ ಕನ್ನಡ ರಾಜ್ಯೋತ್ಸವದ ದಿನದಿಂದ ಒಂದು ತಿಂಗಳ ಕಾಲ ರಾಜ್ಯದ ಐಟಿ-ಬಿಟಿ ಕಂಪೆನಿಗಳಿಗೆ ಭೇಟಿ ನೀಡಿ, ಕನ್ನಡಿಗರ ಉದ್ಯೋಗಾವಕಾಶಗಳ ಕುರಿತು ಮಾಹಿತಿ ಸಂಗ್ರಹಿಸುವ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ನ್ಯಾಯಯುತ ಅವಕಾಶ ಖಾತರಿಪಡಿಸುವಂತೆ ಆಗ್ರಹಿಸುವ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳುತ್ತಿದ್ದೇವೆ.

ಈ ಅಭಿಯಾನಕ್ಕಾಗಿ ಕರವೇಯ ಹಲವಾರು ತಂಡಗಳನ್ನು ರಚಿಸಲಾಗುವುದು. ಪ್ರತಿ ತಂಡದಲ್ಲಿ ಹತ್ತು ಮಂದಿ ಕರವೇ ಮುಖಂಡರು ಮತ್ತು ಕಾರ್ಯಕರ್ತರು ಇರಲಿದ್ದಾರೆ. ಈ ತಂಡಗಳು ಐಟಿ-ಬಿಟಿ ಕಂಪೆನಿಗಳ ಮುಖ್ಯಸ್ಥರು, ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಜವಾಬ್ದಾರಿಯುತ ವ್ಯಕ್ತಿಗಳನ್ನು ಭೇಟಿ ಮಾಡಿ, ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವ ಸಂಬಂಧ ತಮ್ಮ ಆಗ್ರಹ ಪತ್ರವನ್ನು ಸಲ್ಲಿಸಲಿವೆ.

ಅಭಿಯಾನದ ಪ್ರಮುಖ ಉದ್ದೇಶಗಳು

ಈ ಅಭಿಯಾನದ ಮೂಲಕ ಐಟಿ-ಬಿಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗ ದೊರೆಯುವ ವಿಚಾರದಲ್ಲಿ ಕೇಳಿಬರುತ್ತಿರುವ ದೂರುಗಳ ಕುರಿತು ಸಮಗ್ರ ಪರಿಶೀಲನೆ, ಮಾಹಿತಿ ಸಂಗ್ರಹ ಮಾಡುವುದು ನಮ್ಮ ಪ್ರಮುಖ ಉದ್ದೇಶ.

ಕಂಪೆನಿಗಳಲ್ಲಿ ಕನ್ನಡಿಗರ ನೇಮಕಾತಿಯ ಸ್ಥಿತಿ ಏನು? ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗ ನೀಡುವಾಗ ಯಾವ ಮಾನದಂಡಗಳನ್ನು ಅನುಸರಿಸಲಾಗುತ್ತಿದೆ? ಅರ್ಹತೆ ಇದ್ದರೂ ಕನ್ನಡಿಗರಿಗೆ ಅವಕಾಶಗಳು ನಿರಾಕರಿಸಲ್ಪಡುತ್ತಿರುವುದು ಯಾಕೆ? ನೇಮಕಾತಿ ಪ್ರಕ್ರಿಯೆಯಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ತಾರತಮ್ಯವಾಗುತ್ತಿರುವುದಕ್ಕೆ ಕಾರಣಗಳೇನು? ಇಂತಹ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಕರವೇ ಪ್ರಯತ್ನಿಸಲಿದೆ.

ಕಂಪೆನಿಗಳಿಂದ ಲಭ್ಯವಾಗುವ ಮಾಹಿತಿಯನ್ನು ಪರಿಶೀಲಿಸುವುದರ ಜೊತೆಗೆ, ಕನ್ನಡಿಗ ಉದ್ಯೋಗಿಗಳು ಮತ್ತು ಉದ್ಯೋಗಾಕಾಂಕ್ಷಿಗಳ ಅಹವಾಲುಗಳನ್ನೂ ಸಂಗ್ರಹಿಸಲಾಗುವುದು. ಈ ಮೂಲಕ ಸಮಸ್ಯೆಯ ಸ್ವರೂಪ, ವ್ಯಾಪ್ತಿ ಹಾಗೂ ಪರಿಹಾರದ ಅಗತ್ಯವನ್ನು ವಾಸ್ತವಾಂಶಗಳ ಆಧಾರದ ಮೇಲೆ ಗುರುತಿಸಲು ಕ್ರಮ ಕೈಗೊಳ್ಳಲಾಗುವುದು.

ಕನ್ನಡಿಗರಿಗೆ ಉದ್ಯೋಗದಲ್ಲಿ ನ್ಯಾಯಯುತ ಅವಕಾಶ ಸಿಗಲೇಬೇಕು

ಕರ್ನಾಟಕದ ನೆಲ, ನೀರು, ವಿದ್ಯುತ್‌, ರಸ್ತೆ, ಇಲ್ಲಿನ ಮೂಲಸೌಕರ್ಯ, ಸಾರ್ವಜನಿಕ ಸಂಪನ್ಮೂಲಗಳು ಮತ್ತು ಸರ್ಕಾರದ ಉದಾರ ನೀತಿಗಳ ಪ್ರಯೋಜನ ಪಡೆದು ಕಾರ್ಯನಿರ್ವಹಿಸುವ ಕಂಪೆನಿಗಳು ಈ ನಾಡಿನ ಜನರ ಉದ್ಯೋಗದ ಆಶೋತ್ತರಗಳಿಗೂ ಸ್ಪಂದಿಸಬೇಕು. ಕನ್ನಡಿಗರಿಗೆ ಉದ್ಯೋಗ ನೀಡುವ ವಿಚಾರದಲ್ಲಿ ಯಾವುದೇ ಅನ್ಯಾಯವನ್ನೂ ನಾವು ಸಹಿಸುವುದಿಲ್ಲ.

ಕನ್ನಡಿಗ ಉದ್ಯೋಗಾಕಾಂಕ್ಷಿಗಳು ಪ್ರತಿಭಾವಂತ ವೃತ್ತಿಪರರು ಮತ್ತು ಐಟಿ-ಬಿಟಿ ಕ್ಷೇತ್ರದಲ್ಲಿ ದುಡಿಯುವ ಸಾಮರ್ಥ್ಯ ಹೊಂದಿರುವವರು. ಅವರ ಪ್ರತಿಭೆಗೆ ತಕ್ಕ ಉದ್ಯೋಗಾವಕಾಶ ದೊರೆಯಬೇಕು. ನೇಮಕಾತಿಯಲ್ಲಿ ಪಾರದರ್ಶಕತೆ ಇರಬೇಕು. ಸ್ಥಳೀಯ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು.

ಅಭಿಯಾನದ ಸಂದರ್ಭದಲ್ಲಿ ಕಂಪೆನಿಗಳಲ್ಲಿ ಕನ್ನಡಿಗರ ನೇಮಕಾತಿ ಪ್ರಮಾಣ, ಸ್ಥಳೀಯ ಅಭ್ಯರ್ಥಿಗಳಿಗೆ ಲಭ್ಯವಿರುವ ಅವಕಾಶಗಳು, ನೇಮಕಾತಿಯ ಮಾನದಂಡಗಳು ಹಾಗೂ ಕನ್ನಡಿಗ ಉದ್ಯೋಗಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲು ಕರವೇ ಪ್ರಯತ್ನಿಸಲಿದೆ.

ಕಂಪೆನಿಗಳ ಆಡಳಿತ ಮಂಡಳಿಗಳು ಮತ್ತು ಮಾನವ ಸಂಪನ್ಮೂಲ ಅಧಿಕಾರಿಗಳು ಈ ಅಭಿಯಾನಕ್ಕೆ ಸಹಕರಿಸಬೇಕು. ಕನ್ನಡಿಗರ ಉದ್ಯೋಗದ ಕುರಿತ ಪ್ರಶ್ನೆಗಳಿಗೆ ಪಾರದರ್ಶಕವಾಗಿ ಸ್ಪಂದಿಸಬೇಕು. ಉದ್ಯೋಗಾವಕಾಶಗಳ ಬಗ್ಗೆ ಸ್ಪಷ್ಟತೆ ಮೂಡಿಸಬೇಕು. ಕನ್ನಡಿಗರಿಗೆ ಅನ್ಯಾಯವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.

ಸಂಗ್ರಹಿಸಿದ ಮಾಹಿತಿ ಮತ್ತು ಅಹವಾಲುಗಳ ಆಧಾರದ ಮೇಲೆ ಸಮಸ್ಯೆಗಳನ್ನು ಗುರುತಿಸಿ, ಅವುಗಳಿಗೆ ಪರಿಹಾರ ಕಂಡುಕೊಳ್ಳಲು ಸಂಬಂಧಪಟ್ಟ ಕಂಪೆನಿಗಳು ಹಾಗೂ ಸರ್ಕಾರದ ಗಮನ ಸೆಳೆಯಲಾಗುವುದು.

ಕನ್ನಡಿಗರ ಉದ್ಯೋಗದ ಹಕ್ಕಿನ ರಕ್ಷಣೆಗೆ ಕರವೇ ಬದ್ಧ

ಕನ್ನಡಿಗರ ಭಾಷೆ, ನೆಲ, ಜಲ ಮತ್ತು ಉದ್ಯೋಗದ ಹಕ್ಕುಗಳ ರಕ್ಷಣೆ ಕರ್ನಾಟಕ ರಕ್ಷಣಾ ವೇದಿಕೆಯ ಮೂಲಭೂತ ಬದ್ಧತೆಯಾಗಿದೆ. ರಾಜ್ಯದ ಐಟಿ-ಬಿಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳು ದೊರೆಯಲೇಬೇಕು. ಯಾವುದೇ ರೀತಿಯ ಸಬೂಬುಗಳನ್ನು ನಾವು ಒಪ್ಪುವುದಿಲ್ಲ. ಕನ್ನಡಿಗರಿಗೆ ಆಗುತ್ತಿರುವ ಎಲ್ಲ ಬಗೆಯ ಅನ್ಯಾಯಗಳ ವಿರುದ್ಧ ನಾವು ಹೋರಾಟ ರೂಪಿಸುತ್ತೇವೆ.

ಕನ್ನಡಿಗರ ಉದ್ಯೋಗದ ಹಕ್ಕಿನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಕನ್ನಡಿಗರಿಗೆ ಉದ್ಯೋಗಾವಕಾಶ ದೊರೆಯುವವರೆಗೆ, ಉದ್ಯೋಗದಲ್ಲಿ ತಾರತಮ್ಯವಾಗುತ್ತಿದೆ ಎಂಬ ದೂರುಗಳು ನಿಲ್ಲುವವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡ ತಿಳಿಸಿದ್ದಾರೆ.

BREAKING : ರಾಜ್ಯದ ಜನತೆಗೆ ಬಿಗ್ ಶಾಕ್, ನಂದಿನಿ ಹಾಲಿನ ದರ ಲೀ.ಗೆ ₹8 ಹೆಚ್ಚಳ: ನವೆಂಬರ್ 1ರಿಂದ ನೂತನ ದರ ಜಾರಿ

Tags: KannadigasKaraveKarnataka
Previous Post

BREAKING : ರಾಜ್ಯದ ಜನತೆಗೆ ಬಿಗ್ ಶಾಕ್, ನಂದಿನಿ ಹಾಲಿನ ದರ ಲೀ.ಗೆ ₹8 ಹೆಚ್ಚಳ: ನವೆಂಬರ್ 1ರಿಂದ ನೂತನ ದರ ಜಾರಿ

Next Post

ರಾಜ್ಯ ಸಚಿವ ಸಂಪುಟ ಸಭೆ: 12 ಮಹತ್ವದ ಯೋಜನೆಗಳಿಗೆ ಅನುಮೋದನೆ

Related Posts

ಬೆಂಗಳೂರಿನಲ್ಲಿ ನಾಲ್ಕು ದಿನ ವಿದ್ಯುತ್ ವ್ಯತ್ಯಯ; ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!
ಕರ್ನಾಟಕ

ಬೆಂಗಳೂರಿನಲ್ಲಿ ನಾಲ್ಕು ದಿನ ವಿದ್ಯುತ್ ವ್ಯತ್ಯಯ; ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

by Shivakumar
November 6, 2026
0

ಬೆಂಗಳೂರಿನಲ್ಲಿ ಒಂದು ದಿನ ವಿದ್ಯುತ್ ವ್ಯತ್ಯಯವಾದರೂ ಜನರು ಪರದಾಡುವ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಸತತ ನಾಲ್ಕು ದಿನಗಳ ಕಾಲ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ...

Read moreDetails
Awareness for Eco-friendly Diwali Celebrations in State Schools and Colleges: Education Department Order

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಜಾಗೃತಿ : ಶಿಕ್ಷಣ ಇಲಾಖೆ ಆದೇಶ

November 6, 2026
Scouts and Guides Foundation Day: Flag sticker released by Higher Education Minister Basavaraj Rayareddy

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನ: ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರಿಂದ ಧ್ವಜ ಚೀಟಿ ಬಿಡುಗಡೆ

November 6, 2026
Recruitment for Kalyana Karnataka to be conducted via KEA instead of KPSC: Minister Priyank Kharge issues firm directive

ಕೆಪಿಎಸ್‌ಸಿ ಬದಲು ಕೆಇಎ ಮೂಲಕ ಕಲ್ಯಾಣ ಕರ್ನಾಟಕದ ನೇಮಕಾತಿ : ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ

November 6, 2026
Blending of up to 31.2% ethanol in petrol: Karnataka government seeks clarification from the Centre

ಪೆಟ್ರೋಲ್‌ನಲ್ಲಿ ಶೇ. 31.2 ರವರೆಗೆ ಎಥೆನಾಲ್ ಮಿಶ್ರಣ : ಕೇಂದ್ರದಿಂದ ವಿವರಣೆ ಕೇಳಿದ ಕರ್ನಾಟಕ ಸರ್ಕಾರ

November 6, 2026
Next Post
State Cabinet Meeting: Approval for 12 Major Projects

ರಾಜ್ಯ ಸಚಿವ ಸಂಪುಟ ಸಭೆ: 12 ಮಹತ್ವದ ಯೋಜನೆಗಳಿಗೆ ಅನುಮೋದನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada