ದೇಶದಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಒಂದು ವರ್ಷದ ಬಳಿಕ ಕರ್ನಾಟಕ ಮೊದಲ ಡೋಸ್ ಲಸಿಕೆ ನೀಡುವಿಕೆಯಲ್ಲಿ ಶೇ.100ರಷ್ಟು ಗುರಿ ಸಾಧಿಸಿದೆ. ಭಾನುವಾರ ಸಂಜೆ ವೇಳೆಗೆ ರಾಜ್ಯದಲ್ಲಿ ಒಟ್ಟು 4,89,29,819 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ಭಾನುವಾರ ರಾಜ್ಯದಲ್ಲಿ ಒಟ್ಟು 76,147 ಜನರಿಗೆ ಮಧ್ಯಾಹ್ನ 3ಘಂಟೆ ವರೆಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ. ನಮಗೆ ಈ ನಿಖರವಾದ ಗುರಿ ಸಾಧಿಸಲು ಒಂದು ವರ್ಷ ಏಳು ದಿನಗಳು ಬೇಕಾಯಿತು ಎಂದು ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಇಡೀ ದೇಶದಲ್ಲಿ ಲಸಿಕೆ ಅಭಿಯಾನದಲ್ಲಿ ಮೈಲಿಗಲ್ಲು ಸಾಧಿಸಿದ ಮೊದಲ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. 12 ಜಿಲ್ಲೆಗಳಲ್ಲಿ ಇನ್ನು 100ರಷ್ಟು ಗುರಿ ತಲುಪಿಲ್ಲವಾದರೂ ಇತರೆ ಜಿಲ್ಲೆಗಳಲ್ಲಿ ಗುರಿ ಸಾಧಿಸಲಾಗಿದೆ. ಇದು ಶೇ.100.4ರಷ್ಟು ಸಮ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.
			
                                
                                
                                