• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

ಪ್ರತಿಧ್ವನಿ by ಪ್ರತಿಧ್ವನಿ
July 14, 2026
in Top Story, ಕರ್ನಾಟಕ, ರಾಜಕೀಯ
0
AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?
Share on WhatsAppShare on FacebookShare on Telegram

ಬೆಂಗಳೂರು: ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಆರಂಭಿಸುವುದಾಗಿ ಸಿಎಂ ಡಿ.ಕೆ ಶಿವಕುಮಾರ್ ಘೋಷಿಸಿದರು.

ADVERTISEMENT
HD Devegowda on Govt: ಕೆಂಪೇಗೌಡ ಲೇಔಟ್​ ಉದಾಹರಣೆ ಕೊಟ್ಟು ಸರ್ಕಾರಕ್ಕೆ ಸವಾಲೆಸೆದ HDD #pratidhvani

ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮಂಗಳವಾರ ನಡೆದ ಗೂಗಲ್ ಐಓ ಕನೆಕ್ಟ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕರ್ನಾಟಕವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವುದು ಮತ್ತು ಆಡಳಿತ ಹಾಗೂ ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಎಐ ತಂತ್ರಜ್ಞಾನವನ್ನು ಸಂಯೋಜಿಸುವುದು. ಎಐ ಪ್ರತಿಭೆಗಳನ್ನು ಅಭಿವೃದ್ಧಿಪಡಿಸಲು, ಸುಧಾರಿತ ಸಂಶೋಧನೆಯನ್ನು ಉತ್ತೇಜಿಸಲು ಮತ್ತು ಶಿಕ್ಷಣ ಸಂಸ್ಥೆಗಳು, ಉದ್ಯಮ ಹಾಗೂ ಸರ್ಕಾರದ ನಡುವೆ ಸಹಯೋಗವನ್ನು ಬೆಳೆಸಲು ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು” ಎಂದು ಹೇಳಿದರು.

 “ಎಐ-ಸಹಾಯದ ಬೋಧನೆಯ ಮೂಲಕ ಶಿಕ್ಷಣ ಕ್ಷೇತ್ರ, ರೋಗಗಳ ಮುಂಚಿತ ಪತ್ತೆ ಮತ್ತು ಉತ್ತಮ ವೈದ್ಯಕೀಯ ಬೆಂಬಲದ ಮೂಲಕ ಆರೋಗ್ಯ ಕ್ಷೇತ್ರ, ರೈತರಿಗೆ ಎಐ-ಚಾಲಿತ ಸಲಹಾ ಸೇವೆಗಳ ಮೂಲಕ ಕೃಷಿ ಕ್ಷೇತ್ರ, ವೇಗದ ಮತ್ತು ಜನಸ್ನೇಹಿ ವಿತರಣೆಯ ಮೂಲಕ ಸರ್ಕಾರಿ ಸೇವೆಗಳು, ಎಐ ಪರಿಕರಗಳನ್ನು ಬಳಸಿಕೊಂಡು ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ಮೂಲಕ ಸಣ್ಣ ಉದ್ಯಮಗಳಲ್ಲಿ ಬದಲಾವಣೆ ತರಲಾಗುವುದು” ಎಂದು ತಿಳಿಸಿದರು.

Farmers Protest : ರೈತರ ಸಾಲ ಮನ್ನಾ‌ ಮಾಡಿದ್ದೇ ಕುಮಾರಣ್ಣನವರು #pratidhvani

ತಂತ್ರಜ್ಞಾನ ಬೆಂಗಳೂರಿನ ದೈನಂದಿನ ಭಾಗ

“ಭಾರತದ ನಾವೀನ್ಯತೆಯ ರಾಜಧಾನಿ ಮತ್ತು ವಿಶ್ವದ ಅತ್ಯಂತ ರೋಮಾಂಚಕ ತಂತ್ರಜ್ಞಾನ ಪರಿಸರ ವ್ಯವಸ್ಥೆಗಳಲ್ಲಿ ಒಂದಾದ ಬೆಂಗಳೂರಿನಲ್ಲಿ ನಡೆಯುತ್ತಿರುವ ಗೂಗಲ್ ಐ/ಓ ಕನೆಕ್ಟ್ ಇಂಡಿಯಾ 2026 ಕಾರ್ಯಕ್ರಮಕ್ಕೆ ನಿಮ್ಮನ್ನು ಸ್ವಾಗತಿಸಲು ನಾನು ಅತ್ಯಂತ ಹೆಮ್ಮೆಪಡುತ್ತೇನೆ. ಇಂತಹ ಒಂದು ಕಾರ್ಯಕ್ರಮವು ಇಷ್ಟು ಸಹಜವಾಗಿ ಮೂಡಿಬರಲು ವಿಶ್ವದಲ್ಲೇ ಕೆಲವೇ ಕೆಲವು ಸ್ಥಳಗಳಿವೆ. ಬೆಂಗಳೂರಿನಲ್ಲಿ ತಂತ್ರಜ್ಞಾನ ಎಂಬುದು ದೈನಂದಿನ ಜೀವನದ ಭಾಗವಾಗಿದೆ” ಎಂದರು.

“ಪ್ರತಿ ಪೀಳಿಗೆಯೂ ಮಾನವ ನಾಗರಿಕತೆಯ ಹಾದಿಯನ್ನೇ ಬದಲಾಯಿಸುವ ಒಂದು ತಂತ್ರಜ್ಞಾನವನ್ನು ಬಳುವಳಿಯಾಗಿ ಪಡೆಯುತ್ತದೆ. ಸ್ಟೀಮ್ ಇಂಜಿನ್ ಕೈಗಾರಿಕಾ ರಂಗವನ್ನು ಕ್ರಾಂತಿಗೊಳಿಸಿತು. ವಿದ್ಯುತ್ ನಗರಗಳನ್ನು ಮಾರ್ಪಡಿಸಿತು. ಇಂಟರ್ನೆಟ್ ಸಂಪರ್ಕ ಮಾಧ್ಯಮವನ್ನೇ ಬದಲಾಯಿಸಿತು. ಮೊಬೈಲ್ ತಂತ್ರಜ್ಞಾನವು ಎಲ್ಲವನ್ನೂ ಸುಲಭವಾಗಿ ಲಭ್ಯವಾಗುವಂತೆ ಮಾಡಿತು. ಇಂದು, ಕೃತಕ ಬುದ್ಧಿಮತ್ತೆಯು (AI) ಸ್ವತಃ ಮಾನವ ಸಾಮರ್ಥ್ಯವನ್ನೇ ಮಾರ್ಪಡಿಸುವ ಭರವಸೆ ನೀಡುತ್ತಿದೆ. ನಾನು ಹೋದಲ್ಲೆಲ್ಲಾ ಜನರು ಕೇವಲ ಮತ್ತೊಂದು ತಂತ್ರಜ್ಞಾನವಾಗಿ ಮಾತ್ರವಲ್ಲದೆ, ಬಹುಶಃ ನಮ್ಮ ಪೀಳಿಗೆಯನ್ನು ವ್ಯಾಖ್ಯಾನಿಸುವ ಪ್ರಮುಖ ಶಕ್ತಿಯಾಗಿ AI ಬಗ್ಗೆ ಮಾತನಾಡುತ್ತಾರೆ” ಎಂದರು.

HD Devegowda on Govt: ಬಿಡದಿ ಟೌನ್​ಶಿಪ್ ಬಗ್ಗೆ ಸರ್ಕಾರದ ಮುಂದೆ ಖಡಕ್ ಪ್ರಶ್ನೆಯನ್ನಿಟ್ಟ ದೊಡ್ಡಗೌಡರು

“ಕರ್ನಾಟಕದ ಮುಖ್ಯಮಂತ್ರಿಯಾಗಿ, ನಾನು ನಿಮ್ಮ ಮುಂದೆ ಅಪಾರ ಹೆಮ್ಮೆಯಿಂದ ನಿಂತಿದ್ದೇನೆ. ಏಕೆಂದರೆ ಅಂತಹ ಭವಿಷ್ಯವನ್ನು ರೂಪಿಸಲು ಸಹಾಯ ಮಾಡುತ್ತಿರುವ ಪ್ರಮುಖ ಸ್ಥಳಗಳಲ್ಲಿ ನಮ್ಮ ಸ್ವಂತ ರಾಜ್ಯವೂ ಒಂದಾಗಿದೆ. ಬೆಂಗಳೂರಿನಲ್ಲಿ ತಂತ್ರಜ್ಞಾನವು ಕೇವಲ ಕಚೇರಿ ಕಟ್ಟಡಗಳಿಗೆ ಸೀಮಿತವಾಗಿಲ್ಲ. ಇದು ಕಾಫಿ ಶಾಪ್‌ಗಳ ಸಂಭಾಷಣೆಗಳಲ್ಲಿ, ನಮ್ಮ ತರಗತಿ ಕೋಣೆಗಳಲ್ಲಿ ಮತ್ತು ಸಂಶೋಧನಾ ಪ್ರಯೋಗಾಲಯಗಳಲ್ಲಿ ಪ್ರಾರಂಭವಾಗುತ್ತದೆ. ಮುಂದೆ ಅದು ಒಂದು ನವೋದ್ಯಮವಾಗಿ ರೂಪುಗೊಳ್ಳುತ್ತದೆ. ಕೆಲವು ಬಾರಿ ಯುನಿಕಾರ್ನ್ (ಪ್ರತಿಷ್ಠಿತ ಕಂಪನಿ) ಆಗುತ್ತದೆ ಮತ್ತು ಅಪರೂಪಕ್ಕೆ ಇಡೀ ಪ್ರಪಂಚವನ್ನೇ ಬದಲಾಯಿಸುತ್ತದೆ. ಇದು ಬೆಂಗಳೂರಿನ ಮನೋಭಾವ ಮತ್ತು ಇದು ಕರ್ನಾಟಕದ ಚೈತನ್ಯ” ಎಂದು ಬಣ್ಣಿಸಿದರು.

“ಒಂದು ಆಲೋಚನೆಯನ್ನು ತೆಗೆದುಕೊಳ್ಳಿ. ಆ ಒಂದು ಆಲೋಚನೆಯನ್ನೇ ನಿಮ್ಮ ಜೀವನವಾಗಿಸಿಕೊಳ್ಳಿ” ಎಂದು ಸ್ವಾಮಿ ವಿವೇಕಾನಂದರು ನಮಗೆ ಸಂದೇಶವನ್ನು ನೀಡಿದ್ದಾರೆ. ಕರ್ನಾಟಕಕ್ಕೆ ಆ ಆಲೋಚನೆ ಅತ್ಯಂತ ಸ್ಪಷ್ಟವಾಗಿದೆ. ಇಂದು ನಮ್ಮ ರಾಜ್ಯವು ಭಾರತದ ಸಾಫ್ಟ್‌ವೇರ್ ರಫ್ತಿನ 40% ರಷ್ಟು ಕೊಡುಗೆ ನೀಡುತ್ತಿದೆ. ಬೆಂಗಳೂರು 17,000 ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳಿಗೆ ನೆಲೆಯಾಗಿದೆ, ಇದು ಭಾರತದ ಸ್ಟಾರ್ಟ್‌ಅಪ್ ರಾಜಧಾನಿಯಾಗಿದೆ. ಇಡೀ ಪ್ರಪಂಚಕ್ಕಾಗಿ ಉತ್ಪನ್ನಗಳನ್ನು ವಿನ್ಯಾಸಗೊಳಿಸಲು, ಇಂಜಿನಿಯರಿಂಗ್ ಮತ್ತು ಹೊಸ ಆವಿಷ್ಕಾರಗಳನ್ನು ಮಾಡಲು ಸಾವಿರಾರು ಜಾಗತಿಕ ಸಾಮರ್ಥ್ಯ ಕೇಂದ್ರಗಳು (GCCs) ಕರ್ನಾಟಕವನ್ನು ಆರಿಸಿಕೊಂಡಿವೆ” ಎಂದು ವಿವರಿಸಿದರು.

Bidadi Township :  ನಾವು ಯಾವತ್ತೂ ಸುಮ್ಮನೆ ಕೂತಿಲ್ಲ..! #pratidhvani

ಗೂಗಲ್ ಅತ್ಯದ್ಭುತ ಪಾಲುದಾರ:

ಆ ಪ್ರಯಾಣದಲ್ಲಿ ಗೂಗಲ್ ಅತ್ಯದ್ಭುತ ಪಾಲುದಾರನಾಗಿದೆ. ಕಳೆದ ಎರಡು ದಶಕಗಳಿಂದ, ಗೂಗಲ್ ಬೆಂಗಳೂರನ್ನು ಕೇವಲ ಒಂದು ಕಚೇರಿಯ ಸ್ಥಳವಾಗಿ ಮಾತ್ರವಲ್ಲದೆ, ಇಂಜಿನಿಯರಿಂಗ್, ಸಂಶೋಧನೆ ಮತ್ತು ನಾವೀನ್ಯತೆಗಾಗಿ ತನ್ನ ಅತ್ಯಂತ ಪ್ರಮುಖ ಜಾಗತಿಕ ಕೇಂದ್ರಗಳಲ್ಲಿ ಒಂದಾಗಿ ಆಯ್ಕೆ ಮಾಡಿಕೊಂಡಿದೆ.

Will HD DeveGowda Join the Bidadi Farmers' War? | ರೈತರ ಪರ ನಿಲ್ಲುವ ಘೋಷಣೆ ಮಾಡುವ ಸಾಧ್ಯತೆ #pratidhvani

“ಭಾರತದಲ್ಲಿ ಗೂಗಲ್ 18 ಸಾವಿರ ಸಿಬ್ಬಂದಿ ಹೊಂದಿದ್ದು, ಅದರಲ್ಲಿ 12 ಸಾವಿರ ಸಿಬ್ಬಂದಿ ಬೆಂಗಳೂರಿನಲ್ಲಿದ್ದಾರೆ. ಇದರೊಂದಿಗೆ ಭಾರತದಲ್ಲಿ ಗೂಗಲ್ ನ ಸಿಬ್ಬಂದಿಯ 2/3 ಪ್ರಮಾಣ ಬೆಂಗಳೂರಿನಲ್ಲಿದೆ. ಇದು ನಮ್ಮ ನಗರದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ನಮ್ಮ ಜೊತೆಗೆ ಇಷ್ಟು ಉತ್ತಮ ಸಂಬಂಧ ಹೊಂದಿರುವ ಗೂಗಲ್ ನಾಯಕರು, ನೀತಿ ರೂಪಕರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದರು.

DK Shivakumar : Google ನಂತಹ ಜಾಗತಿಕ ಸಂಸ್ಥೆಗಳು ಕೈಜೋಡಿಸಬೇಕೆಂದು ಡಿಕೆಶಿ  ಆಹ್ವಾನಿಸಿದರು.#pratidhvani

“ಗೂಗಲ್ ಜೊತೆಗಿನ ಈ ಸಂಬಂಧವನ್ನು ಮತ್ತೊಂದು ಹಂತಕ್ಕೆ ಕೊಂಡೋಯ್ಯಲು, ಬಯಸುತ್ತೇವೆ. ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ನಿಮಗೆ ಎಲ್ಲಾ ರೀತಿಯ ಸಹಕಾರ ನೀಡಲು ನಾವು ಬದ್ಧರಾಗಿದ್ದೇವೆ. ಎಐ ತಂತ್ರಜ್ಞಾನ ಮೂಲಕ ನಮ್ಮ ನಗರದ ಸಂಚಾರ ಸಮಸ್ಯೆಗಳನ್ನು ನಿವಾರಿಸೋಣ. 25 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ 70 ಲಕ್ಷ ಜನಸಂಖ್ಯೆ ಇತ್ತು. ಈಗ 1.40 ಕೋಟಿಗೆ ಏರಿಕೆಯಾಗಿದೆ. ಹೀಗಾಗಿ ಸಂಚಾರ ದಟ್ಟಣೆ ಸಮಸ್ಯೆ ಇದ್ದು, ಇದನ್ನು ನಿವಾರಿಸಲು ನಾವು ಪರಿಹಾರ ಹುಡುಕುತ್ತಿದ್ದೇವೆ. ಜತೆಗೂಡುವುದು ಆರಂಭ, ಜತೆಗೂಡಿ ಚರ್ಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು. ಹೀಗಾಗಿ ನಾವೆಲ್ಲರೂ ಒಟ್ಟಾಗಿ ಕರ್ನಾಟಕ ಹಾಗೂ ದೇಶದ ಪ್ರಗತಿಗೆ ಶ್ರಮಿಸೋಣ. ಕರ್ನಾಟಕ ಸರ್ಕಾರ ನಿಮ್ಮ ಜೊತೆಗೆ ನಿಲ್ಲಲಿದೆ” ಎಂದು ಕರೆ ನೀಡಿದರು.

Tags: AIBJPCM DK ShivakumarcongressDK ShivakumarKarnatakaKarnataka PoliticsPolitics
Previous Post

FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

Next Post

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

Related Posts

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ
Top Story

LPG ಗ್ರಾಹಕರಿಗೆ ಹೊಸ ನಿಯಮಗಳು ಜಾರಿ: ಸಿಲಿಂಡರ್ ಬುಕ್ಕಿಂಗ್‌ನಿಂದ ಕನೆಕ್ಷನ್ ರದ್ದತಿವರೆಗೆ ಮಹತ್ವದ ಬದಲಾವಣೆ

by ಪ್ರತಿಧ್ವನಿ
July 14, 2026
0

ನವದೆಹಲಿ: ದೇಶಾದ್ಯಂತ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು ಘೋಷಿಸಿದೆ. ಸಿಲಿಂಡರ್ ಬುಕ್ಕಿಂಗ್, ರೀಫಿಲ್ಲಿಂಗ್, ಹೊಸ ಕನೆಕ್ಷನ್ ಹಾಗೂ ಕನೆಕ್ಷನ್ ರದ್ದತಿ...

Read moreDetails
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ನಾಡಗೀತೆಯಲ್ಲಿ ಮಹತ್ವದ ಬದಲಾವಣೆ?ಕುವೆಂಪು ನಾಡಗೀತೆಗೆ ಹೊಸ ರೂಪ? 

July 14, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

July 14, 2026
FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

July 14, 2026
H.D Deve Gowda:ಬಿಡದಿ ಟೌನ್​​ಶಿಪ್​​ ಯೋಜನೆ ಕೈಬಿಡುವಂತೆ ಸಿಎಂಗೆ ದೇವೇಗೌಡರ ಪತ್ರ: ಹೋರಾಟದ ಎಚ್ಚರಿಕೆ!

H.D Deve Gowda:ಬಿಡದಿ ಟೌನ್​​ಶಿಪ್​​ ಯೋಜನೆ ಕೈಬಿಡುವಂತೆ ಸಿಎಂಗೆ ದೇವೇಗೌಡರ ಪತ್ರ: ಹೋರಾಟದ ಎಚ್ಚರಿಕೆ!

July 14, 2026
Next Post
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada