• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೇ10ರಂದು ಒಂದೇ ಹಂತದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ : ಮೇ 13ರಂದು ಫಲಿತಾಂಶ

Any Mind by Any Mind
March 29, 2023
in Top Story, ಕರ್ನಾಟಕ, ರಾಜಕೀಯ
0
ಮೇ10ರಂದು ಒಂದೇ ಹಂತದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ : ಮೇ 13ರಂದು ಫಲಿತಾಂಶ
Share on WhatsAppShare on FacebookShare on Telegram

ನವದೆಹಲಿ:ಮಾ.29: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿರುವ ಕೇಂದ್ರ ಚುನಾವಣಾ ಆಯೋಗ, ಮೇ. 10ರಂದು ಚುನಾವಣೆ ನಡೆಯಲಿದೆ ಎಂದು ತಿಳಿಸಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌, ಒಂದೇ ಹಂತದಲ್ಲಿ ಕರ್ನಾಟಕದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ.

ADVERTISEMENT

ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್, ಕರ್ನಾಟಕದಲ್ಲಿ ಮೇ. 10ರಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಒಂದೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದ್ದು, ಮೇ.13ರಂದು ಫಲಿತಾಂಶ ಘೋಷಣೆಯಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆಯ ಪ್ರಕ್ರಿಯೆ ಇಂತಿದೆ:

ಏಪ್ರಿಲ್ 13-ಅಧಿಸೂಚನೆ ಪ್ರಕಟಣೆ.

ಏಪ್ರಿಲ್‌ 20-ನಾಮಪತ್ರ ಸಲ್ಲಿಕೆ.

ಏಪ್ರಿಲ್‌ 21-ನಾಮಪತ್ರ ಪರಿಶೀಲನೆ.

ಏಪ್ರಿಲ್‌ 24-ನಾಮಪತ್ರ ಹಿಂಪಡೆಯಲು ಕೊನೆಯ ದಿನ.

ಮೇ 10- ಮತದಾನ.

ಮೇ 13-ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆ.

ಕರ್ನಾಟಕದಲ್ಲಿ 5.22 ಕೋಟಿ ಮತದಾರಿದ್ದು, ಈ ಪೈಕಿ 2.62 ಕೋಟಿ ಪುರುಷ ಮತದಾರರು ಮತ್ತು 2.59 ಕೋಟಿ ಮಹಿಳಾ ಮತದಾರರಿದ್ದಾರೆ. ಇದ್ದಾರೆ. 12,15,763 ಮತದಾರರು 80 ವರ್ಷ ಮೇಲ್ಪಟ್ಟವರಿದ್ದು, ಇವರಿಗೆ ತಮ್ಮ ಮನೆಯಿಂದಲೇ ಮತದಾನ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ ಎಂದು ರಾಜೀವ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ಇನ್ನು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ 9.17 ಲಕ್ಷ ಮತದಾರರು, ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ. ಮತದಾನಕ್ಕಾಗಿ ರಾಜ್ಯಾದ್ಯಂತ 58,282 ಮತಗಟ್ಟೆಗಳು ಸಿದ್ಧವಾಗಿದ್ದು, ತೃತೀಯ ಲಿಂಗಿಗಳಿಗೆ ಮತ್ತು ವಿಶೇಷ ಚೇತನರಿಗೆ ವಿಶೇಷ ಬೂತ್‌ಗಳನ್ನು ಸಿದ್ಧಪಡಿಸಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ. ಇನ್ನು ಈ ಮತಗಟ್ಟೆಗಳ ಪೈಕಿ, 100 ಮತಗಟ್ಟೆಗಳನ್ನು ವಿಶೇಷ ಚೇತನ ಸಿಬ್ಬಂದಿ ನಿರ್ವಹಣೆ ಮಾಡಲಿದ್ದು, ಗ್ರೀನ್‌ ಮತ್ತು ಪಿಂಕ್‌(ಮಹಿಳೆಯರಿಗಾಗಿ) ಮತಗಟ್ಟೆಗಳು ಕೂಡ ಇರಲಿವೆ ಎಂದು ರಾಜೀವ್‌ ಕುಮಾರ್‌ ಹೇಳಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಹಣದ ಬಳಕೆ ಮೇಲೆ ನಿಗಾ ಇಡಲು, ರಾಜ್ಯಾದ್ಯಂತ 2,400 ವಿಚಕ್ಷಣಾ ತಂಡಗಳನ್ನು ರಚಿಸಲಾಗಿದೆ. 19 ಜಿಲ್ಲೆಗಳಲ್ಲಿ ಅಂತಾರಾಜ್ಯ ಚೆಕ್‌ಪೋಸ್ಟ್‌ಗಳನ್ನು ಕೂಡ ರಚಿಸಲಾಗಿದೆ ಎಂದು ರಾಜೀವ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್‌ 1ಕ್ಕೆ 18 ವರ್ಷ ತುಂಬುವವರು ಕೂಡ ಈ ಚುನಾವಣೆಯಲ್ಲಿ ಮತದಾನ ಮಾಡಬಹುದಾಗಿದೆ. ಒಟ್ಟು 1,320 ಮತಗಟ್ಟೆಗಳನ್ನು ಮಹಿಳಾ ಸಿಬ್ಬಂದಿಯೇ ನಿರ್ವಹಿಸಲಿದ್ದು, ಇದನ್ನು ಪಿಂಕ್‌ ಬೂತ್‌ಗಳೆಂದು ಪರಿಗಣಿಸಲಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತರು ಹೇಳಿದ್ದಾರೆ. ಸುಪ್ರೀಂಕೋರ್ಟ್‌ ಆದೇಶದನ್ವಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಎಲ್ಲಾ ರಾಜಕೀಯ ಪಕ್ಷಗಳು, ಕ್ರಿಮಿನಲ್‌ ದಾಖಲೆ ಹೊಂದಿರುವ ಅಭ್ಯರ್ಥಿಗಳ ವಿವರಗಳನ್ನು ತಮ್ಮ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ.

ಚುನಾವಣಾ ಪೂರ್ವ ಹಾಗೂ ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ, ವಿದ್ಯುನ್ಮಾನ ಮಾಧ್ಯಮಗಳು ಸುಪ್ರೀಂಕೋರ್ಟ್‌ ನಿರ್ದೇಶನಗಳನ್ನು ಸ್ಪಷ್ಟವಾಗಿ ಪಾಲಿಸಬೇಕು ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ. ಅಲ್ಲದೇ ಸಾಮಾಜಿಕ ಜಾಲತಾಣಗಳು ಕೂಡ ಚುನಾವಣೆ ಬಗ್ಗೆ ಕರಾರುವಕ್ಕಾದ ಮಾಹಿತಿ ನೀಡಬೇಕು ಮತ್ತು ಈ ಕುರಿತ ಕಾನೂನುಗಳನ್ನು ಪಾಲಿಸಬೇಕು ಎಂದು ಚುನಾವಣಾ ಆಯೋಗ ತಿಳಿಸಿದೆ. ಒಟ್ಟಿನಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಇನ್ನು ಎರಡು ತಿಂಗಳ ಒಳಗಾಗಿ ರಾಜ್ಯವು ಹೊಸ ಸರ್ಕಾರವನ್ನು ಕಾಣಲಿದೆ ಎಂಬುದು ಸ್ಪಷ್ಟವಾಗಿದೆ.

Tags: BJPbreaking news in kannadaCongress PartyElection Commission of IndiaKarnataka GovernmentKarnataka Politicskarnatakanewslatestnewsಬಿಜೆಪಿ
Previous Post

ಕರ್ನಾಟಕ ವಿಧಾನಭೆಯಲ್ಲಿ ಪಕ್ಷಗಳ ಸದ್ಯದ ಬಲಾಬಲ ಎಷ್ಟು?

Next Post

ಟ್ರೋಲಿಗರಿಗೆ ಪ್ರೀತಿಯಿಂದಲೇ ಉತ್ತರ ಕೊಟ್ಟ ರಮ್ಯಾ.. ಅಜ್ಜಿಯಂದಿರಿಗಾಗಿ ಕನ್ನಡದಲ್ಲೇ ಮಾತ್ನಾಡ್ತೀನಿ ಎಂದ ಪದ್ಮಾವತಿ..!   

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಟ್ರೋಲಿಗರಿಗೆ ಪ್ರೀತಿಯಿಂದಲೇ ಉತ್ತರ ಕೊಟ್ಟ ರಮ್ಯಾ.. ಅಜ್ಜಿಯಂದಿರಿಗಾಗಿ ಕನ್ನಡದಲ್ಲೇ ಮಾತ್ನಾಡ್ತೀನಿ ಎಂದ ಪದ್ಮಾವತಿ..!   

ಟ್ರೋಲಿಗರಿಗೆ ಪ್ರೀತಿಯಿಂದಲೇ ಉತ್ತರ ಕೊಟ್ಟ ರಮ್ಯಾ.. ಅಜ್ಜಿಯಂದಿರಿಗಾಗಿ ಕನ್ನಡದಲ್ಲೇ ಮಾತ್ನಾಡ್ತೀನಿ ಎಂದ ಪದ್ಮಾವತಿ..!   

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada