ಸೆಪ್ಟೆಂಬರ್ 12ರಿಂದ 10 ದಿನಗಳ ಕಾಲ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಈ ಸಂಬಂಧ ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಎಂಕೆ ವಿಶಾಲಾಕ್ಷಿ ಅವರು ಸುತ್ತೋಲೆ ಹೊರಡಿಸಿದ್ದಾರೆ.
ಆಗಸ್ಟ್ 25ರಂದು ಸಿಎಂ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಸೆಪ್ಟೆಂಬರ್ 12ರಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಇದೀಗ ಅಧಿವೇಶನ ಆರಂಭದ ಸಿದ್ಧತೆಗಳಿಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.