ಬೆಂಗಳೂರು : ಬಹುಮತದೊಂದಿಗೆ ಅಧಿಕಾರಕ್ಕೆ ಬರ್ತಿದ್ದಂತೆಯೇ ಕಾಂಗ್ರೆಸ್ನವರು ಮನಸ್ಸಿಗೆ ಬಂದಂತೆ ಅಧಿಕಾರ ನಡೆಸಬಹುದು ಅಂತಾ ಭಾವಿಸಿದ್ದರು. ಆದರೆ ಈಗ ಅವೆಲ್ಲ ಉಲ್ಟಾ ಆಗಿದೆ ಎಂದು ಶಾಸಕ ಬಿ.ವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ . ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಈಗ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರೋದು ಕಷ್ಟವಾಗ್ತಿದೆ. ಹೀಗಾಗಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡ್ತಿದ್ದಾರೆ ಎಂದು ಹೇಳಿದ್ರು.

ಕಾಂಗ್ರೆಸ್ನವರಿಗೆ ಬಹುಮತದೊಂದಿಗೆ ತಾವು ಅಧಿಕಾರಕ್ಕೆ ಬರಬಹುದು ಎಂಬ ನಿರೀಕ್ಷೆ ಕೂಡ ಇರಲಿಲ್ಲ. ಹೀಗಾಗಿ ಮನಬಂದಂತೆ ಯೋಜನೆಗಳನ್ನು ಘೋಷಣೆ ಮಾಡಿದ್ದರು. ಆದರೆ ಈಗ ಅವರಿಗೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರೋದು ಕಷ್ಟವಾಗ್ತಿದೆ ಎಂದಿದ್ದಾರೆ.
ಇನ್ನೂ ಸ್ವಲ್ಪ ದಿನ ಕಳೆದರೆ ರಾಜ್ಯದ ಜನತೆ ಸರ್ಕಾರದ ವಿರುದ್ಧ ಬಡಿಗೆ ಹಿಡಿದು ರಸ್ತೆಗಿಳಿಯುತ್ತಾರೆ. ಆಗ ಕಾಂಗ್ರೆಸ್ ಪಕ್ಷದ ಆಡಳಿತ ಹೇಗಿತ್ತು ಅನ್ನೋದು ಎಲ್ಲರಿಗೂ ತಿಳಿಯುತ್ತೆ ಅಂತಾ ಬಿವೈ ವಿಜಯೇಂದ್ರ ಹೇಳಿದ್ದಾರೆ.