ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ 2023-24ರ ಆಯವ್ಯಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿರುವ ಕೊಡುಗೆಗಳ ಮಾಹಿತಿ ಇಲ್ಲಿದೆ.
202 ಕೋಟಿ ರೂ. ವೆಚ್ಚದಲ್ಲಿ ಮೈಸೂರು, ಶಿವಮೊಗ್ಗ ಮತ್ತು ಕಲಬುರಗಿಗಳಲ್ಲಿ ಕಿದ್ವಾಯಿ ಸಂಸ್ಥೆಯಡಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರು, ಹುಬ್ಬಳ್ಳಿ, ಮೈಸೂರು ಮತ್ತು ಕಲಬುರಗಿಯ 4 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ IVF ಕಿನ್ಲಿಕ್’ಗಳನ್ನು 6 ಕೋಟಿ ರೂ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಮೈಸೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾವೇರಿ ಕೋಲಾರ ಮತ್ತು ರಾಮನಗರಗಳಲ್ಲಿ Integrated Township ಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲು ಪ್ರತಿಷ್ಠಿತ ಖಾಸಗಿ ಸಂಸ್ಥೆಗಳಿಂದ Expression of Interest ಅನ್ನು ಆಹ್ವಾನಿಸಲಾಗಿದೆ.
ಮೈಸೂರು ವಿಮಾನ ನಿಲ್ದಾಣವನ್ನು ಉನ್ನತೀಕರಿಸಲು ಭೂ ಸ್ವಾಧೀನಕ್ಕಾಗಿ ಕ್ರಮ ವಹಿಸಲಾಗಿದ್ದು, ಇದಕ್ಕಾಗಿ 320 ಕೋಟಿ ರೂ ಗಳಷ್ಟು ಹಂಚಿಕೆ ಮಾಡಲಾಗಿದೆ.
ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗಾಗಿ ಕ್ರಮ ಕೈಗೊಳ್ಳಲಾಗುವುದು. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದ ಬಳಿ ಎರಡೂವರೆ ಎಕರೆ ಜಾಗದಲ್ಲಿ ಅಂತರಾಷ್ಟ್ರೀಯ ಮಟ್ಟದ ರಾಜ್ಯ ವಸ್ತು ಸಂಗ್ರಹಾಲಯ ಮತ್ತು ಕಲಾ ಗ್ಯಾಲರಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ಕಾಡಾನೆ ಹಾವಳಿ ತಡೆಗಟ್ಟಲು ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಡಾನೆ ಕಾರ್ಯಪಡೆಯನ್ನು ರಚಿಸಲಾಗಿದೆ ಎಂದು ಘೋಷಿಸಿದ್ದಾರೆ.