ಬೆಂಗಳೂರು: ಖ್ಯಾತ ನಟ ಆಟೋ ರಾಜ ಖ್ಯಾತಿಯ ದಿವಂಗತ ಶಂಕರ್ ನಾಗ್ ಅವರ ಹೆಸರಿನಲ್ಲಿ ಟ್ಯಾಕ್ಸಿ ಮತ್ತು ಆಟೋ ರಿಕ್ಷಾ ನಿಲ್ದಾಣಗಳನ್ನು ನಿರ್ಮಾಣ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಎರಡನೇ ಬಜೆಟ್ ಮಂಡಿಸಿದ್ದಾರೆ.
ನಗರ ಹಾಗೂ ಪಟ್ಟಣಗಳಲ್ಲಿ ಖಾಲಿ ಇರುವ ಜಾಗಗಳನ್ನು ಗುರುತಿಸಿ ಶಂಕರ್ ನಾಗ್ ಅವರ ಹೆಸರಿನಲ್ಲಿ ಟ್ಯಾಕ್ಸಿ ಮತ್ತು ಆಟೋ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯ ಕಳೆದ ಐದು ವರ್ಷಗಳಲ್ಲಿ 23 ಲಕ್ಷ ರೂ ವೈಯಕ್ತಿಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ.
ಈ ಯೋಜನೆಯಡಿ ತೋಟಗಾರಿಕೆ, ಅರಣ್ಯೀಕರಣ, ರೇಷ್ಮೆ, ಕೃಷಿ ಅರಣ್ಯೀಕರಣ, ಶಾಲೆಗಳ ಕಾಂಪೌಂಡ್ , ಆಟದ ಮೈದಾನಗಳು, ಶೌಚಾಲಯಗಳು, ಅಂಗನವಾಡಿ ಕಟ್ಟಡಗಳು, ಜಾನುವಾರುಗಳ ಶೆಡ್, ಸಾಂಪ್ರದಾಯಿಕ ಜಲಮೂಲಗಳ ಪುನರುಜ್ಜೀವನ, ರಸ್ತೆ ಕಾಮಗಾರಿಗಳು, ರಸ್ತೆಬದಿ ನೆಡುತೋಪುಗಳ ಯೋಜನೆಯಲ್ಲಿ 2023-24 ನೇ ಸಾಲಿನಲ್ಲಿ 1,800 ಕೋಟಿ ರೂ ವೆಚ್ಚದಲ್ಲಿ 88 ಲಕ್ಷ ಜನರಿಗೆ ಉದ್ಯೋಗ ಕಲ್ಪಿಸಲು ಉದ್ದೇಶಿಸಿದೆ.